Josh Brown: ಜೋಶ್ ಅಬ್ಬರಕ್ಕೆ ಕ್ರಿಸ್ ಗೇಲ್ ದಾಖಲೆ ಧೂಳೀಪಟ
TV9 Web | Updated By: ಝಾಹಿರ್ ಯೂಸುಫ್
Updated on:
Jan 23, 2024 | 12:23 PM
BBL 2024: ಈ ಪಂದ್ಯದಲ್ಲಿ ಜೋಶ್ ಬ್ರೌನ್ (140) ಬಾರಿಸಿದ ಶತಕದ ನೆರವಿನಿಂದ ಬ್ರಿಸ್ಬೇನ್ ಹೀಟ್ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 214 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಅಡಿಲೇಡ್ ಸ್ಟ್ರೈಕರ್ಸ್ ತಂಡವು 19.5 ಓವರ್ಗಳಲ್ಲಿ 160 ರನ್ಗಳಿಸಿ ಆಲೌಟ್ ಆಗಿದೆ.
1 / 6
ಆಸ್ಟ್ರೇಲಿಯಾದಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್ನ ಚಾಲೆಂಜರ್ ಪಂದ್ಯದಲ್ಲಿ ಸ್ಪೋಟಕ ಶತಕ ಸಿಡಿಸಿ ಜೋಶ್ ಬ್ರೌನ್ ಭರ್ಜರಿ ದಾಖಲೆ ಬರೆದಿದ್ದಾರೆ. ಅದು ಕೂಡ ಹೊಡಿಬಡಿ ದಾಂಡಿಗ ಕ್ರಿಸ್ ಗೇಲ್ ಅವರ ಹೆಸರಿನಲ್ಲಿದ್ದ 13 ವರ್ಷಗಳ ಹಳೆಯ ರೆಕಾರ್ಡ್ ಅನ್ನು ಬ್ರೇಕ್ ಮಾಡುವ ಮೂಲಕ ಎಂಬುದು ವಿಶೇಷ.
2 / 6
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಬ್ರಿಸ್ಬೇನ್ ಹೀಟ್ ತಂಡಕ್ಕೆ ಆರಂಭಿಕ ಆಟಗಾರ ಜೋಶ್ ಬ್ರೌನ್ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ಓವರ್ನಿಂದಲೇ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಬ್ರೌನ್ ಸಿಕ್ಸ್-ಫೋರ್ಗಳ ಸುರಿಮಳೆಗೈದರು.
3 / 6
ಈ ಮೂಲಕ ಜೋಶ್ ಬ್ರೌನ್ ಕೇವಲ 41 ಎಸೆತಗಳಲ್ಲಿ ಶತಕ ಪೂರೈಸಿದರು. ಅಂತಿಮವಾಗಿ 57 ಎಸೆತಗಳನ್ನು ಎದುರಿಸಿದ ಬ್ರೌನ್ 12 ಭರ್ಜರಿ ಸಿಕ್ಸ್ ಹಾಗೂ 10 ಫೋರ್ಗಳೊಂದಿಗೆ 140 ರನ್ ಕಲೆಹಾಕಿದರು. ಈ 12 ಸಿಕ್ಸ್ಗಳೊಂದಿಗೆ ಬಿಗ್ ಬ್ಯಾಷ್ ಲೀಗ್ ಇತಿಹಾಸದಲ್ಲೇ ಪಂದ್ಯವೊಂದರಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆಯನ್ನು ಜೋಶ್ ತಮ್ಮದಾಗಿಸಿಕೊಂಡರು.
4 / 6
ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್ನ ಕ್ರಿಕೆಟಿಗ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. 2011ರ ಬಿಗ್ ಬ್ಯಾಷ್ ಲೀಗ್ನಲ್ಲಿ ಸಿಡ್ನಿ ಥಂಡರ್ ಪರ ಕಣಕ್ಕಿಳಿದಿದ್ದ ಗೇಲ್ ಅಡಿಲೇಡ್ ಸ್ಟ್ರೈಕರ್ಸ್ ವಿರುದ್ಧ ಬರೋಬ್ಬರಿ 11 ಸಿಕ್ಸ್ಗಳನ್ನು ಬಾರಿಸಿ ದಾಖಲೆ ನಿರ್ಮಿಸಿದ್ದರು.
5 / 6
ಇದೀಗ ಅಡಿಲೇಡ್ ಸ್ಟ್ರೈಕರ್ಸ್ ವಿರುದ್ಧದ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ಪರ ಬ್ಯಾಟ್ ಬೀಸಿರುವ ಜೋಶ್ ಬ್ರೌನ್ 12 ಸಿಕ್ಸ್ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಬಿಬಿಎಲ್ ಇತಿಹಾಸದಲ್ಲೇ ಇನಿಂಗ್ಸ್ವೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆಯನ್ನು ಬ್ರೌನ್ ತಮ್ಮದಾಗಿಸಿಕೊಂಡಿದ್ದಾರೆ.
6 / 6
ಇದಲ್ಲದೆ ಬಿಗ್ ಬ್ಯಾಷ್ ಲೀಗ್ನಲ್ಲಿ ಅತೀ ವೇಗದ ಶತಕ ಸಿಡಿಸಿದ 2ನೇ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಜೋಶ್ ಬ್ರೌನ್ ಬರೆದಿದ್ದಾರೆ. ಈ ದಾಖಲೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಆಸ್ಟ್ರೇಲಿಯಾದ ಕ್ರೇಗ್ ಸಿಮ್ಸನ್. 2014ರಲ್ಲಿ ಪರ್ತ್ ಸ್ಕಾಚರ್ಸ್ ಪರ ಆಡಿದ್ದ ಸಿಮನ್ಸ್ ಅಡಿಲೇಡ್ ಸ್ಟ್ರೈಕರ್ಸ್ ವಿರುದ್ಧ ಕೇವಲ 39 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಇದೀಗ ಕೇವಲ 41 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಜೋಶ್ ಬ್ರೌನ್ ಈ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ.