ಬರೋಬ್ಬರಿ 13 ಸಿಕ್ಸ್​: ಟಿ10 ಪಂದ್ಯದಲ್ಲಿ ತೂಫಾನ್ ಸೆಂಚುರಿ ಸಿಡಿಸಿದ ಜೋಶ್

Updated on: Jul 21, 2025 | 11:00 AM

Josh Brown Century: 2024ರ ಬಿಗ್​ ಬ್ಯಾಷ್ ಲೀಗ್​ನಲ್ಲಿ ಕೇವಲ 41 ಎಸೆತಗಳಲ್ಲಿ ಸ್ಫೋಟಕ ಶತಕ ಬಾರಿಸಿದ್ದ ಜೋಶ್ ಬ್ರೌನ್ ಇದೀಗ ಕೆರಿಬಿಯನ್ ಅಂಗಳದಲ್ಲೂ ಸೆಂಚುರಿ ಸಿಡಿಸಿದ್ದಾರೆ. ಅದು ಕೂಡ ಕೇವಲ 32 ಎಸೆತಗಳಲ್ಲಿ. ಅಂದರೆ 60 ಎಸೆತಗಳ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಜೋಶ್ ಬಿರುಸಿನ ಬ್ಯಾಟಿಂಗ್​ನೊಂದಿಗೆ ಮೂರಂಕಿ ರನ್ ಕಲೆಹಾಕಿದ್ದಾರೆ.

1 / 5
ಆಸ್ಟ್ರೇಲಿಯಾದ ಸ್ಫೋಟಕ ದಾಂಡಿಗ ಜೋಶ್ ಬ್ರೌನ್ ಅಕ್ಷರಶಃ ಅಬ್ಬರಿಸಿದ್ದಾರೆ. ಅದು ಕೂಡ ಟಿ10 ಲೀಗ್​ನಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಎಂಬುದೇ ಅಚ್ಚರಿ. ವೆಸ್ಟ್ ಇಂಡೀಸ್​​ನಲ್ಲಿ ನಡೆಯುತ್ತಿರುವ ಮ್ಯಾಕ್ಸ್​60 ಟಿ10 ಲೀಗ್​ನ 11ನೇ ಪಂದ್ಯದಲ್ಲಿ ಜೋಶ್ ಸ್ಫೋಟಕ ಶತಕ ಬಾರಿಸಿದ್ದಾರೆ. ಈ ಪಂದ್ಯದಲ್ಲಿ ಕೆರಿಬಿಯನ್ ಟೈಗರ್ಸ್ ಹಾಗೂ ಗ್ರ್ಯಾಂಡ್ ಕೇಮನ್ ಫಾಲ್ಕನ್ಸ್ ತಂಡಗಳು ಮುಖಾಮುಖಿಯಾಗಿದ್ದವು.

2 / 5
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಕೆರಿಬಿಯನ್ ಟೈಗರ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ಜೋಶ್ ಬ್ರೌನ್ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್​ನಿಂದಲೇ ಸಿಡಿಲಬ್ಬರ ಶುರು ಮಾಡಿದ ಬ್ರೌನ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಈ ಮೂಲಕ ಕೇವಲ 32 ಎಸೆತಗಳಲ್ಲಿ ಶತಕ ಪೂರೈಸಿದರು.

3 / 5
ಭರ್ಜರಿ ಸೆಂಚುರಿ ಪೂರೈಸಿದ ಬಳಿಕ ಮೂರು ಎಸೆತಗಳನ್ನು ಎದುರಿಸಿದ ಜೋಶ್ ಬ್ರೌನ್ ಮತ್ತೆರಡು ಸಿಕ್ಸ್​ ಸಿಡಿಸಿದರು. ಈ ಮೂಲಕ ಕೇವಲ 35 ಎಸೆತಗಳಲ್ಲಿ 13 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 115 ರನ್​ ಚಚ್ಚಿದರು. ಈ ಶತಕದ ನೆರವಿನೊಂದಿಗೆ ಕೆರಿಬಿಯನ್ ಟೈಗರ್ಸ್ ತಂಡವು 10 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 147 ರನ್ ಕಲೆಹಾಕಿತು.

4 / 5
60 ಎಸೆತಗಳಲ್ಲಿ 148 ರನ್​ಗಳ ಗುರಿ ಪಡೆದ ಗ್ರ್ಯಾಂಡ್ ಕೇಮನ್ ಫಾಲ್ಕನ್ಸ್ ತಂಡವು 10 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 58 ರನ್​ಗಳು ಮಾತ್ರ. ಈ ಮೂಲಕ ಕೆರಿಬಿಯನ್ ಟೈಗರ್ಸ್ ತಂಡವು 88 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಸ್ಫೋಟಕ ಶತಕ ಸಿಡಿಸಿದ ಜೋಶ್ ಬ್ರೌನ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದರು.

5 / 5
ಅಂದಹಾಗೆ ಜೋಶ್ ಬ್ರೌನ್ ಈ ಹಿಂದೆ ಬಿಗ್ ಬ್ಯಾಷ್ ಲೀಗ್​ನಲ್ಲಿ 41 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಈ ವೇಳೆ ಅವರ ಬ್ಯಾಟ್​ನಿಂದ ಸಿಡಿದ ಸಿಕ್ಸ್​ಗಳ ಸಂಖ್ಯೆ 12. ಅಷ್ಟೇ ಅಲ್ಲದೆ  ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ ಹರಾಜಿಗಾಗಿ ಹೆಸರು ನೋಂದಾಯಿಸಿಕೊಂಡಿದ್ದರು. ಕೇವಲ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಜೋಶ್ ಬ್ರೌನ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಟಿ10 ಲೀಗ್​ನಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಬ್ರೌನ್ ಎಲ್ಲರ ಗಮನ ಸೆಳೆದಿದ್ದಾರೆ. ಹೀಗಾಗಿ ಮುಂಬರುವ ಐಪಿಎಲ್​ನಲ್ಲಿ ಆಸೀಸ್ ದಾಂಡಿಗ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

Published On - 10:55 am, Mon, 21 July 25