ಕ್ರಿಕೆಟ್ ಅಂಗಳದ ದಾಖಲೆಗಳ ಸರದಾರ, ರನ್ ಮೆಷಿನ್ ವಿರಾಟ್ ಕೊಹ್ಲಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಬಾರಿ ಔಟ್ ಮಾಡಿದ ಬೌಲರ್ಗಳ ಪಟ್ಟಿಯಲ್ಲಿ ಜೋಶ್ ಹ್ಯಾಝಲ್ವುಡ್ ಅಗ್ರಸ್ಥಾನಕ್ಕೇರಿದ್ದಾರೆ. ಬ್ರಿಸ್ಬೇನ್ನಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಕೊಹ್ಲಿ ಕೇವಲ 3 ರನ್ಗಳಿಸಿ ಹ್ಯಾಝಲ್ವುಡ್ಗೆ ವಿಕೆಟ್ ಒಪ್ಪಿಸಿದ್ದಾರೆ.