ವಿರಾಟ್ ಕೊಹ್ಲಿಯನ್ನು ಔಟ್ ಮಾಡುವುದರಲ್ಲಿ ಅಗ್ರಸ್ಥಾನಕ್ಕೇರಿದ ಜೋಶ್ ಹ್ಯಾಝಲ್ವುಡ್
Virat Kohli vs Josh Hazelwood: ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್ವುಡ್ ಹಾಗೂ ಟೀಮ್ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿ 30 ಬಾರಿ ಮುಖಾಮುಖಿಯಾಗಿದ್ದಾರೆ. ಈ ವೇಳೆ ಕೊಹ್ಲಿ 495 ಎಸೆತಗಳನ್ನು ಎದುರಿಸಿದ್ದು, 2 ಸಿಕ್ಸ್ ಹಾಗೂ 29 ಫೋರ್ಗಳೊಂದಿಗೆ ಒಟ್ಟು 274 ರನ್ ಕಲೆಹಾಕಿದ್ದಾರೆ. ಇದರ ನಡುವೆ ಕೊಹ್ಲಿಯನ್ನು ಹಲವು ಬಾರಿ ಔಟ್ ಮಾಡುವಲ್ಲಿ ಹ್ಯಾಝಲ್ವುಡ್ ಯಶಸ್ವಿಯಾಗಿದ್ದಾರೆ.
1 / 5
ಕ್ರಿಕೆಟ್ ಅಂಗಳದ ದಾಖಲೆಗಳ ಸರದಾರ, ರನ್ ಮೆಷಿನ್ ವಿರಾಟ್ ಕೊಹ್ಲಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಬಾರಿ ಔಟ್ ಮಾಡಿದ ಬೌಲರ್ಗಳ ಪಟ್ಟಿಯಲ್ಲಿ ಜೋಶ್ ಹ್ಯಾಝಲ್ವುಡ್ ಅಗ್ರಸ್ಥಾನಕ್ಕೇರಿದ್ದಾರೆ. ಬ್ರಿಸ್ಬೇನ್ನಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಕೊಹ್ಲಿ ಕೇವಲ 3 ರನ್ಗಳಿಸಿ ಹ್ಯಾಝಲ್ವುಡ್ಗೆ ವಿಕೆಟ್ ಒಪ್ಪಿಸಿದ್ದಾರೆ.
2 / 5
ಇದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿಯನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ ಬೌಲರ್ಗಳ ಪಟ್ಟಿಯಲ್ಲಿ ಜೋಶ್ ಹ್ಯಾಝಲ್ವುಡ್ ನಂಬರ್-1 ಸ್ಥಾನ ಅಲಂಕರಿಸಿದರು. ಅದು ಸಹ ನ್ಯೂಝಿಲೆಂಡ್ ವೇಗಿ ಟಿಮ್ ಸೌಥಿ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.
3 / 5
ನ್ಯೂಝಿಲೆಂಡ್ ತಂಡದ ಟಿಮ್ ಸೌಥಿ ಹಾಗೂ ಕೊಹ್ಲಿ 39 ಬಾರಿ ಮುಖಾಮುಖಿಯಾಗಿದ್ದಾರೆ. ಈ ವೇಳೆ ಟೆಸ್ಟ್ನಲ್ಲಿ 3 ಬಾರಿ, ಏಕದಿನ ಕ್ರಿಕೆಟ್ನಲ್ಲಿ 7 ಬಾರಿ ಹಾಗೂ ಟಿ20 ಪಂದ್ಯದಲ್ಲಿ ಒಮ್ಮೆ ಕೊಹ್ಲಿಯನ್ನು ಔಟ್ ಮಾಡುವಲ್ಲಿ ಸೌಥಿ ಯಶಸ್ವಿಯಾಗಿದ್ದರು. ಈ ಮೂಲಕ ವಿರಾಟ್ ಕೊಹ್ಲಿಯನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ ಬೌಲರ್ ಎನಿಸಿಕೊಂಡಿದ್ದರು.
4 / 5
ಇದೀಗ ಈ ದಾಖಲೆಯನ್ನು ಸರಿಗಟ್ಟುವ ಮೂಲಕ ಜೋಶ್ ಹ್ಯಾಝಲ್ವುಡ್ ಅಗ್ರಸ್ಥಾನಕ್ಕೇರಿದ್ದಾರೆ. ಜೋಶ್-ಕೊಹ್ಲಿ ಒಟ್ಟು 30 ಬಾರಿ ಮುಖಾಮುಖಿಯಾಗಿದ್ದು, ಈ ವೇಳೆ ಒಟ್ಟು 495 ಎಸೆತಗಳನ್ನು ಎದುರಿಸಿದ್ದಾರೆ. ಇದರ ನಡುವೆ 11 ಬಾರಿ ಕಿಂಗ್ ಕೊಹ್ಲಿಯನ್ನು ಔಟ್ ಮಾಡುವಲ್ಲಿ ಜೋಶ್ ಹ್ಯಾಝಲ್ವುಡ್ ಯಶಸ್ವಿಯಾಗಿದ್ದಾರೆ.
5 / 5
ಈ ಮೂಲಕ ಪ್ರಸ್ತುತ ಕ್ರಿಕೆಟ್ ಅಂಗಳದ ಶ್ರೇಷ್ಠ ಬ್ಯಾಟರ್ನನ್ನು ಅತ್ಯಧಿಕ ಬಾರಿ ಔಟ್ ಮಾಡಿದ ಹೆಗ್ಗಳಿಕೆಯನ್ನು ಜೋಶ್ ಹ್ಯಾಝಲ್ವುಡ್ ತಮ್ಮದಾಗಿಸಿಕೊಂಡಿದ್ದಾರೆ. ವಿಶೇಷ ಎಂದರೆ ಮುಂಬರುವ ಐಪಿಎಲ್ನಲ್ಲಿ ಜೋಶ್ ಹ್ಯಾಝಲ್ವುಡ್ ಹಾಗೂ ವಿರಾಟ್ ಕೊಹ್ಲಿ ಜೊತೆಯಾಗಿ ಆರ್ಸಿಬಿ ಪರ ಕಣಕ್ಕಿಳಿಯಲಿದ್ದಾರೆ. ಹೀಗಾಗಿ ಐಪಿಎಲ್ನಲ್ಲಿ ಕೊಹ್ಲಿಗೆ ಆಸೀಸ್ ವೇಗಿಯನ್ನು ಎದುರಿಸುವ ಚಿಂತೆ ಇರುವುದಿಲ್ಲ.