- Kannada News Photo gallery Cricket photos Josh Hazelwood is likely to miss the early phase of the ICC T20 World Cup 2026
ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾಗೆ ಆಘಾತ
T20 World Cup 2026: ಟಿ20 ವಿಶ್ವಕಪ್ 2026ರ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಆರಂಭಿಕ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಇದರಿಂದ ಆಸೀಸ್ ಪಡೆ ಆರಂಭಿಕ ಮ್ಯಾಚ್ಗಳಲ್ಲಿ ಹಿನ್ನಡೆ ಅನುಭವಿಸುವ ಸಾಧ್ಯತೆಯಿದೆ.
Updated on: Feb 02, 2026 | 12:09 PM

ಫೆಬ್ರವರಿ 7 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್ಗಾಗಿ ಆಸ್ಟ್ರೇಲಿಯಾ 15 ಸದಸ್ಯರುಗಳ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಈ ಹದಿನೈದು ಸದಸ್ಯರುಗಳಲ್ಲಿ ಜೋಶ್ ಹೇಝಲ್‌ವುಡ್ ಕೂಡ ಕಾಣಿಸಿಕೊಂಡಿದ್ದರು. ಇದಾಗ್ಯೂ ಅವರು ಸಂಪೂರ್ಣ ಫಿಟ್ ಆಗಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ.

ಅಂದರೆ ಜೋಶ್ ಹೇಝಲ್‌ವುಡ್ ಟಿ20 ವಿಶ್ವಕಪ್ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ. ಮಂಡಿರಜ್ಜು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಅವರು ಸಂಪೂರ್ಣವಾಗಿ ಗುಣಮುಖರಾಗಲು ಹೆಚ್ಚಿನ ಸಮಯ ತೆಗೆದುಕೊಳ್ಳಲಿದ್ದಾರೆ.

ಹೀಗಾಗಿ ಆಸ್ಟ್ರೇಲಿಯಾ ತಂಡದ ಆರಂಭಿಕ ಪಂದ್ಯಗಳಲ್ಲಿ ಜೋಶ್ ಹೇಝಲ್‌ವುಡ್ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ. ಇದಾಗ್ಯೂ ಅವರು ಸೂಪರ್-8 ಪಂದ್ಯಗಳಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಕನ್ಫರ್ಮ್. ಏಕೆಂದರೆ ದ್ವಿತೀಯ ಸುತ್ತಿನ ಪಂದ್ಯಗಳು ಫೆಬ್ರವರಿ 21 ರಿಂದ ಶುರುವಾಗಲಿದೆ. ಅಷ್ಟರಲ್ಲಿ ಜೋಶ್ ಹೇಝಲ್‌ವುಡ್ ಫಿಟ್ನೆಸ್ ಸಾಧಿಸಲಿದ್ದಾರೆ. ಹೀಗಾಗಿ ದ್ವಿತೀಯ ಸುತ್ತಿನಲ್ಲಿ ಹೇಝಲ್‌ವುಡ್ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

ಮತ್ತೊಂದೆಡೆ ಫಿಟ್ನೆಸ್ ಸಮಸ್ಯೆಯ ಕಾರಣ ಪ್ಯಾಟ್ ಕಮಿನ್ಸ್ ಟಿ20 ವಿಶ್ವಕಪ್ನಿಂದ ಹೊರಗುಳಿದಿದ್ದಾರೆ. ಬೆನ್ನಿನ ಕೆಳ ಭಾಗದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಕಮಿನ್ಸ್ ಇನ್ನೂ ಸಹ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರನ್ನು ಟಿ20 ವಿಶ್ವಕಪ್ ತಂಡದಿಂದಲೂ ಕೈ ಬಿಡಲಾಗಿದೆ. ಅವರ ಬದಲಿಗೆ ಎಡಗೈ ವೇಗಿ ಬೆನ್ ದ್ವಾರ್ಶುಯಿಸ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ.

ಟಿ20 ವಿಶ್ವಕಪ್ಗೆ ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ಕ್ಯಾಮರೋನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಟ್ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ರೆನ್‌ಶಾ, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ.
