
T20 World Cup 2026: ಟಿ20 ವಿಶ್ವಕಪ್ಗಾಗಿ ಆಸ್ಟ್ರೇಲಿಯಾ ತಾತ್ಕಾಲಿಕ ತಂಡವನ್ನು ಪ್ರಕಟಿಸಿದೆ. ಹೀಗೆ ತಾತ್ಕಾಲಿಕ ತಂಡವನ್ನು ಪ್ರಕಟಿಸಲು ಮುಖ್ಯ ಕಾರಣ ಗಾಯಾಳು ಆಟಗಾರರ ಸಮಸ್ಯೆ. ಅಂದರೆ ಆಸ್ಟ್ರೇಲಿಯಾ ತಂಡದ ಮೂವರು ಪ್ರಮುಖ ಆಟಗಾರರು ಗಾಯಗೊಂಡಿದ್ದಾರೆ. ಹೀಗಾಗಿಯೇ ಕ್ರಿಕೆಟ್ ಆಸ್ಟ್ರೇಲಿಯಾ ತಾತ್ಕಾಲಿಕ ತಂಡವನ್ನು ಘೋಷಿಸಿದೆ.

ಇದೀಗ ಗಾಯಗೊಂಡಿದ್ದ ಜೋಶ್ ಹೇಝಲ್‌ವುಡ್ ಕಡೆಯಿಂದ ಗುಡ್ ನ್ಯೂಸ್ ಸಿಕ್ಕಿದೆ. ಸ್ನಾಯು ಸೆಳೆತ ಮತ್ತು ಅಕಿಲೀಸ್ ಗಾಯದಿಂದ ಬಳಲುತ್ತಿದ್ದ ಹೇಝಲ್‌ವುಡ್ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಇದೇ ವಾರದೊಳಗೆ ಮತ್ತೆ ಅಭ್ಯಾಸವನ್ನು ಆರಂಭಿಸಲಿದ್ದಾರೆ ಎಂದು ವರದಿಯಾಗಿದೆ.

ಅಂದರೆ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಅವರು ಸಂಪೂರ್ಣ ಫಿಟ್ನೆಸ್ನೊಂದಿಗೆ ಕಣಕ್ಕಿಳಿಯುವುದು ಖಚಿತ. ಅದರಂತೆ ಟಿ20 ವಿಶ್ವಕಪ್ನಲ್ಲಿ ಆಸ್ಟ್ರೇಲಿಯಾ ಪರ ಪ್ರಮುಖ ವೇಗಿಗಳಾಗಿ ಮಿಚೆಲ್ ಸ್ಟಾರ್ಕ್, ಜೋಶ್ ಹೇಝಲ್‌ವುಡ್ ಕಾಣಿಸಿಕೊಳ್ಳಲಿದ್ದಾರೆ.

ಇನ್ನು ಟಿ20 ವಿಶ್ವಕಪ್ನಲ್ಲಿ ಆಸ್ಟ್ರೇಲಿಯಾ ತಂಡ ಗ್ರೂಪ್-2 ನಲ್ಲಿ ಕಣಕ್ಕಿಳಿಯಲಿದೆ. ಅದರಂತೆ ಮೊದಲ ಸುತ್ತಿನಲ್ಲಿ ಆಸೀಸ್ ಪಡೆ ಶ್ರೀಲಂಕಾ, ಝಿಂಬಾಬ್ವೆ, ಐರ್ಲೆಂಡ್ ಹಾಗೂ ಒಮಾನ್ ತಂಡಗಳನ್ನು ಎದುರಿಸಲಿದೆ. ಈ ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಆಸೀಸ್ ಆಸ್ಟ್ರೇಲಿಯಾ ತಂಡ ದ್ವಿತೀಯ ಸುತ್ತಿಗೇರುವುದು ಖಚಿತ ಎಂದೇ ಹೇಳಬಹುದು.

ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ಕ್ಯಾಮರೂನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ.