ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್ವುಡ್ ಭಾರತದ ವಿರುದ್ಧದ ಉಳಿದ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿಯುವುದು ಖಚಿತವಾಗಿದೆ. ಬ್ರಿಸ್ಬೇನ್ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದ ಆರಂಭಕ್ಕೂ ಮುನ್ನ ನಡೆದ ಅಭ್ಯಾಸದ ವೇಳೆ ಹ್ಯಾಝಲ್ವುಡ್ ಕಣಕಾಲಿನ ಹಿ೦ಭಾಗದ ನೋವಿಗೆ ಒಳಗಾಗಿದ್ದರು.

ಹೀಗಾಗಿ ಬ್ರಿಸ್ಬೇನ್ ಟೆಸ್ಟ್ ಪಂದ್ಯದ ಐದನೇ ದಿನದಾಟದಲ್ಲಿ ಹಾಗೂ ಡಿಸೆಂಬರ್ 26 ರಿಂದ ಶುರುವಾಗಲಿರುವ 4ನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಅಲ್ಲದೆ ಜನವರಿ 3 ರಿಂದ ಆರಂಭವಾಗಲಿರುವ ಕೊನೆಯ ಟೆಸ್ಟ್ ಪಂದ್ಯಕ್ಕೂ ಜೋಶ್ ಹ್ಯಾಝಲ್ವುಡ್ ಅಲಭ್ಯರಾಗಲಿದ್ದಾರೆ.
ಇದಕ್ಕೂ ಮುನ್ನ ನಡೆದ ಪರ್ತ್ ಟೆಸ್ಟ್ ಪಂದ್ಯದಲ್ಲಿ ಜೋಶ್ ಹ್ಯಾಝಲ್ವುಡ್ ಕಣಕ್ಕಿಳಿದಿದ್ದರು. ಆದರೆ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೂ ಮುನ್ನ ಪೆಕ್ಕೆಲುಬಿನ ನೋವಿಗೆ ಒಳಗಾಗಿದ್ದ ಹ್ಯಾಝಲ್ವುಡ್ ದ್ವಿತೀಯ ಟೆಸ್ಟ್ನಿಂದ ಹೊರಗುಳಿದಿದ್ದರು. ಹೀಗಾಗಿ 2ನೇ ಟೆಸ್ಟ್ ಪಂದ್ಯದಲ್ಲಿ ಸ್ಕಾಟ್ ಬೋಲ್ಯಾಂಡ್ ಅವಕಾಶ ಪಡೆದಿದ್ದರು.

ಆಸ್ಟ್ರೇಲಿಯಾ ಟೆಸ್ಟ್ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ನಾಥನ್ ಲಿಯಾನ್, ಮಿಚ್ ಮಾರ್ಷ್, ನಾಥನ್ ಮೆಕ್‌ಸ್ವೀನಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ , ಬ್ಯೂ ವೆಬ್‌ಸ್ಟರ್, ಶಾನ್ ಅಬಾಟ್ ಮತ್ತು ಬ್ರೆಂಡನ್ ಡಾಗೆಟ್.
Published On - 12:25 pm, Tue, 17 December 24