Josh Hazlewood: ಟೆಸ್ಟ್​ ಕ್ರಿಕೆಟ್​ನಲ್ಲಿ ವಿಶೇಷ ಸಾಧನೆ ಮಾಡಿದ ಜೋಶ್ ಹ್ಯಾಝಲ್​ವುಡ್

Australia vs West Indies Test: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 188 ರನ್​ಗಳಿಗೆ ಆಲೌಟ್ ಆಗಿದೆ. ಆಸ್ಟ್ರೇಲಿಯಾ ಪರ ಜೋಶ್ ಹ್ಯಾಝಲ್​ವುಡ್ ಹಾಗೂ ಪ್ಯಾಟ್ ಕಮಿನ್ಸ್​ ತಲಾ 4 ವಿಕೆಟ್ ಕಬಳಿಸಿದರೆ, ನಾಥನ್ ಲಿಯಾನ್ ಹಾಗೂ ಮಿಚೆಲ್ ಸ್ಟಾರ್ಕ್​ ಒಂದೊಂದು ವಿಕೆಟ್ ಪಡೆದಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Jan 17, 2024 | 10:53 AM

ಅಡಿಲೇಡ್​ನ ಓವಲ್​ ಮೈದಾನದಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ (Josh Hazlewood) ಮಾರಕ ದಾಳಿ ಸಂಘಟಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವಿಂಡೀಸ್ ತಂಡವು ಹ್ಯಾಝಲ್​ವುಡ್ ದಾಳಿಗೆ ತತ್ತರಿಸಿತು.

1 / 5
ಕೇವಲ 15 ಓವರ್​ಗಳಲ್ಲಿ 44 ರನ್ ನೀಡಿದ ಜೋಶ್ ಹ್ಯಾಝಲ್​ವುಡ್ 4 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು. ಈ ನಾಲ್ಕು ವಿಕೆಟ್​ಗಳೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ 250 ವಿಕೆಟ್​ಗಳ ಸಾಧನೆ ಮಾಡಿದರು.

2 / 5
ಈ ಮೂಲಕ ಆಸ್ಟ್ರೇಲಿಯಾ ಪರ ಟೆಸ್ಟ್ ಕ್ರಿಕೆಟ್​ನಲ್ಲಿ 250+ ವಿಕೆಟ್ ಪಡೆದ 11ನೇ ಬೌಲರ್ ಎಂಬ ಹಿರಿಮೆಗೆ ಪಾತ್ರರಾದರು. ಹಾಗೆಯೇ ಈ ಸಾಧನೆ ಮಾಡಿದ ಪ್ರಸ್ತುತ ತಂಡದಲ್ಲಿರುವ 4ನೇ ಬೌಲರ್ ಎನಿಸಿಕೊಂಡರು.

3 / 5
ಪ್ರಸ್ತುತ ಆಸ್ಟ್ರೇಲಿಯಾ ತಂಡದಲ್ಲಿರುವ ನಾಥನ್ ಲಿಯಾನ್ (509), ಮಿಚೆಲ್ ಸ್ಟಾರ್ಕ್​ (345), ಪ್ಯಾಟ್ ಕಮಿನ್ಸ್​ (260) ಈ ಸಾಧನೆ ಮಾಡಿದ್ದಾರೆ. ಇದೀಗ 67 ಟೆಸ್ಟ್ ಪಂದ್ಯಗಳ ಮೂಲಕ ಜೋಶ್ ಹ್ಯಾಝಲ್​ವುಡ್ 253 ವಿಕೆಟ್ ಕಬಳಿಸಿ ಈ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

4 / 5
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 188 ರನ್​ಗಳಿಗೆ ಆಲೌಟ್ ಆಗಿದೆ. ಆಸ್ಟ್ರೇಲಿಯಾ ಪರ ಜೋಶ್ ಹ್ಯಾಝಲ್​ವುಡ್ ಹಾಗೂ ಪ್ಯಾಟ್ ಕಮಿನ್ಸ್​ ತಲಾ 4 ವಿಕೆಟ್ ಕಬಳಿಸಿದರೆ, ನಾಥನ್ ಲಿಯಾನ್ ಹಾಗೂ ಮಿಚೆಲ್ ಸ್ಟಾರ್ಕ್​ ಒಂದೊಂದು ವಿಕೆಟ್ ಪಡೆದಿದ್ದಾರೆ.

5 / 5
Follow us