AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಅಲಭ್ಯ..!

IPL 2026: ಮಾರ್ಚ್ 28 ರಿಂದ ಶುರುವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2026) ಮೊದಲ ಸುತ್ತಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4 ಪಂದ್ಯಗಳನ್ನಾಡಲಿದೆ. ಈ ಪಂದ್ಯಗಳಲ್ಲಿ ಆರ್​ಸಿಬಿ, ಸನ್​ರೈಸರ್ಸ್ ಹೈದರಾಬಾದ್, ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳನ್ನು ಎದುರಿಸಲಿದೆ.

ಝಾಹಿರ್ ಯೂಸುಫ್
|

Updated on: Mar 17, 2026 | 12:44 PM

Share
ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಮಾರ್ಚ್ 28 ರಿಂದ ಶುರುವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಕಣಕ್ಕಿಳಿಯಲಿವೆ. ಈ ಪಂದ್ಯದಲ್ಲಿ ಆರ್​ಸಿಬಿ ತಂಡದ ಪ್ರಮುಖ ಆಟಗಾರ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ.

1 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ವೇಗಿ ಜೋಶ್ ಹೇಝಲ್​ವುಡ್ ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ಆಸ್ಟ್ರೇಲಿಯನ್ ಪತ್ರಕರ್ತ ಡೇನಿಯಲ್ ಚೆರ್ನಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಿದರೆ ಮಾತ್ರ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ.

2 / 6
ಜೋಶ್ ಹೇಝಲ್‌ವುಡ್ ಕಾಲಿನ ಹಿಮ್ಮಡಿಯ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಗಾಯದ ಕಾರಣ ಅವರು ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಈ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಐಪಿಎಲ್​ನ ಆರಂಭಿಕ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ.

3 / 6
ಹೀಗಾಗಿ ಆರ್​ಸಿಬಿ ತಂಡದ ಮೊದಲ ಹಂತದ ಪಂದ್ಯಗಳಲ್ಲಿ ಜೋಶ್ ಹೇಝಲ್​ವುಡ್ ಕಾಣಿಸಿಕೊಳ್ಳವುದಿಲ್ಲ. ಅಂದರೆ ಸನ್​ರೈಸರ್ಸ್ ಹೈದರಾಬಾದ್, ಮುಂಬೈ ಇಂಡಿಯನ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಗಳಿಂದ ಹೇಝಲ್​ವುಡ್ ಹೊರಗುಳಿಯಲಿದ್ದಾರೆ.

4 / 6
ಇನ್ನು ಏಪ್ರಿಲ್ ಎರಡನೇ ವಾರದೊಳಗೆ ಸಂಪೂರ್ಣವಾಗಿ ಚೇತರಿಸಿಕೊಂಡರೆ ಮಾತ್ರ ಜೋಶ್ ಹೇಝಲ್​ವುಡ್ ಐಪಿಎಲ್​ನಲ್ಲಿ ಕಣಕ್ಕಿಳಿಯಲಿದ್ದಾರೆ. ಹೀಗಾಗಿ ಆಸ್ಟ್ರೇಲಿಯನ್ ವೇಗಿ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದಕ್ಕೆ ಕನ್​ಫರ್ಮ್ ಆಗಲು ಮುಂದಿನ ತಿಂಗಳವರೆಗೆ ಕಾಯಲೇಬೇಕು.

5 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಯಶ್ ದಯಾಳ್, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್, ಜೋಶ್ ಹೇಝಲ್​ವುಡ್ (ಆರಂಭಿಕ ಪಂದ್ಯಗಳಿಗೆ ಅಲಭ್ಯ).

6 / 6
Follow Us