- Kannada News Photo gallery Cricket photos Josh Inglis is currently Injured and likely to be ruled out from IPL 2025
IPL 2025: ಪಂಜಾಬ್ ಕಿಂಗ್ಸ್ನತ್ತ ಅನ್ಸೋಲ್ಡ್ ಆಟಗಾರರ ಕಣ್ಣು..!
IPL 2025: ಐಪಿಎಲ್ ಸೀಸನ್ 18ರ ಆರಂಭಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ತಂಡದಲ್ಲಿ ಒಂದು ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ. ಈ ಬದಲಾವಣೆಯ ಸಾಧ್ಯತೆ ಬೆನ್ನಲ್ಲೇ ಇದೀಗ ಐಪಿಎಲ್ ಮೆಗಾ ಹರಾಜಿನಲ್ಲಿ ಅನ್ಸೋಲ್ಡ್ ಆಗಿರುವ ಆಟಗಾರರಿಗೆ ಹೊಸ ನಿರೀಕ್ಷೆ ಮೂಡಿದೆ. ಏಕೆಂದರೆ ಈ ಆಟಗಾರರ ಪಟ್ಟಿಯಿಂದ ಪಂಜಾಬ್ ಕಿಂಗ್ಸ್ ಬದಲಿ ಆಟಗಾರನನ್ನು ಆಯ್ಕೆ ಮಾಡಲಿದೆ.
Updated on: Jan 28, 2025 | 1:55 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್ ಆರಂಭಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ತಂಡಕ್ಕೆ ಆಘಾತ ಎದುರಾಗಿದೆ. ಪಂಜಾಬ್ ಕಿಂಗ್ಸ್ ತಂಡದಲ್ಲಿರುವ ಆಸ್ಟ್ರೇಲಿಯಾ ಆಟಗಾರ ಜೋಶ್ ಇಂಗ್ಲಿಸ್ ಗಾಯಗೊಂಡಿದ್ದಾರೆ. ಈ ಗಾಯದ ಕಾರಣ ಅವರು ಮುಂಬರುವ ಐಪಿಎಲ್ನಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಜೋಶ್ ಇಂಗ್ಲಿಸ್ ಅವರ ಕಾಲಿಗೆ ಗಾಯವಾಗಿದ್ದು, ಹೀಗಾಗಿ ಮುಂಬರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್ಗೂ ಮುನ್ನ ಅವರು ಸಂಪೂರ್ಣ ಫಿಟ್ನೆಸ್ ಸಾಧಿಸುವುದು ಅನುಮಾನ ಎನ್ನಲಾಗಿದೆ. ಹೀಗಾಗಿ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಬದಲಿ ಆಟಗಾರನ ಆಯ್ಕೆ ಬಗ್ಗೆ ಚರ್ಚಿಸಿದೆ.

ಈ ಚರ್ಚೆಯ ಬೆನ್ನಲ್ಲೇ ಇದೀಗ ಐಪಿಎಲ್ ಸೀಸನ್-18ರ ಮೆಗಾ ಹರಾಜಿನಲ್ಲಿ ಅನ್ಸೋಲ್ಡ್ ಆಗಿರುವ ಆಟಗಾರರ ಕಣ್ಣು ಪಂಜಾಬ್ ಕಿಂಗ್ಸ್ನತ್ತ ನೆಟ್ಟಿದೆ. ಏಕೆಂದರೆ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಬದಲಿ ಆಟಗಾರನನ್ನು ಅನ್ಸೋಲ್ಡ್ ಆಗಿರುವ ಪ್ಲೇಯರ್ಸ್ ಪಟ್ಟಿಯಿಂದ ಆಯ್ಕೆ ಮಾಡಲಿದ್ದು, ಹೀಗಾಗಿ ಇದೀಗ ಮಾರಾಟವಾಗದೇ ಉಳಿದಿರುವ ಆಟಗಾರರು ಮತ್ತೊಂದು ಅವಕಾಶವನ್ನು ಎದುರು ನೋಡುತ್ತಿದ್ದಾರೆ.

ಇತ್ತ ಅನ್ಸೋಲ್ಡ್ ಆಗಿರುವ ಸ್ಟಾರ್ ಆಟಗಾರರಲ್ಲಿ ಡೇವಿಡ್ ವಾರ್ನರ್, ಕೇನ್ ವಿಲಿಯಮ್ಸನ್, ಜಾನಿ ಬೈರ್ಸ್ಟೋವ್, ಮಯಾಂಕ್ ಅಗರ್ವಾಲ್, ಶಾರ್ದೂಲ್ ಠಾಕೂರ್, ಸ್ಟೀವ್ ಸ್ಮಿತ್, ರೈಲಿ ರೊಸ್ಸೊವ್, ಪೃಥ್ವಿ ಶಾ, ಅಲ್ಝಾರಿ ಜೋಸೆಫ್ ಇದ್ದು, ಹೀಗಾಗಿ ಇವರಲ್ಲಿ ಒಬ್ಬರಿಗೆ ಪಂಜಾಬ್ ಕಿಂಗ್ಸ್ ತಂಡದಲ್ಲಿ ಅವಕಾಶ ಸಿಕ್ಕರೂ ಅಚ್ಚರಿಪಡಬೇಕಿಲ್ಲ.

ಪಂಜಾಬ್ ಕಿಂಗ್ಸ್ ತಂಡ: ಶ್ರೇಯಸ್ ಅಯ್ಯರ್, ಯುಜ್ವೇಂದ್ರ ಚಹಲ್, ಅರ್ಷ್‌ದೀಪ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಶಶಾಂಕ್ ಸಿಂಗ್, ಪ್ರಭ್ಸಿಮ್ರಾನ್ ಸಿಂಗ್, ಹರ್‌ಪ್ರೀತ್ ಬ್ರಾರ್, ವಿಜಯ್‌ಕುಮಾರ್ ವೈಶಾಕ್, ಯಶ್ ಠಾಕೂರ್, ಮಾರ್ಕೊ ಯಾನ್ಸೆನ್, ಲಾಕಿ ಫರ್ಗುಸನ್, ಅಝ್ಮತುಲ್ಲಾ ಒಮರ್ಝಾಹಿ,ಆರೋನ್ ಹಾರ್ಡಿ, ಮುಶೀರ್ ಖಾನ್, ಸೂರ್ಯಾಂಶ, ಕ್ಸೇವಿಯರ್ ಬ್ರಾಟ್ಲೆಟ್, ಪೈಲಾ ಅವಿನಾಶ್, ಪ್ರವೀಣ್ ದುಬೆ, ನೆಹಾಲ್ ವಧೇರಾ, ಹರ್ನೂರ್ ಪನ್ನು, ಕುಲ್ದೀಪ್ ಸೇನ್, ಜೋಶ್ ಇಂಗ್ಲಿಸ್ (ಡೌಟ್).



















