Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರವೇಗದ ಶತಕ ಸಿಡಿಸಿ ಸೆಹ್ವಾಗ್ ದಾಖಲೆ ಸರಿಗಟ್ಟಿದ ಜೋಶ್ ಇಂಗ್ಲಿಸ್

Josh Inglis: ಲಾಹೋರ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಜೋಸ್ ಇಂಗ್ಲಿಸ್. ಇಂಗ್ಲೆಂಡ್ ನೀಡಿದ 351 ರನ್​ಗಳ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಪರ ಜೋಶ್ ಇಂಗ್ಲಿಸ್ 86 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 120 ರನ್ ಬಾರಿಸಿದರು. ಈ ಮೂಲಕ 47.3 ಓವರ್​ಗಳಲ್ಲಿ ಆಸ್ಟ್ರೇಲಿಯಾ ತಂಡ 356 ರನ್​ಗಳಿಸಿ 5 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on:Feb 23, 2025 | 9:05 AM

ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಬರೋಬ್ಬರಿ 13 ವರ್ಷಗಳ ಬಳಿಕ ಶರವೇಗದ ಸೆಂಚುರಿ ಮೂಡಿಬಂದಿದೆ. ಅದು ಕೂಡ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬ್ಯಾಟರ್​ ಕಡೆಯಿಂದ. ಇಂತಹದೊಂದು ಸ್ಪೋಟಕ ಸೆಂಚುರಿ ಸಿಡಿಸಿದ್ದು ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಜೋಶ್ ಇಂಗ್ಲಿಸ್. ಈ ಶತಕದೊಂದಿಗೆ ಇಂಗ್ಲಿಸ್, ವೀರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

1 / 5
ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 50 ಓವರ್​ಗಳಲ್ಲಿ 351 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಪರ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜೋಶ್ ಇಂಗ್ಲಿಸ್ ಕೇವಲ 77 ಎಸೆತಗಳಲ್ಲಿ ಶತಕ ಸಿಡಿಸಿದರು.

2 / 5
ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಅತೀ ವೇಗವಾಗಿ ಸೆಂಚುರಿ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಜೋಶ್ ಇಂಗ್ಲಿಸ್ ಹೆಸರು ಅಗ್ರಸ್ಥಾನಕ್ಕೇರಿತು. ಅದು ಸಹ ಟೀಮ್ ಇಂಡಿಯಾದ ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

3 / 5
2002 ರಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ವೀರೇಂದ್ರ ಸೆಹ್ವಾಗ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕೊಲಂಬೊದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸೆಹ್ವಾಗ್ ಕೇವಲ 77 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಈ ಮೂಲಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಅತೀ ವೇಗವಾಗಿ ಸೆಂಚುರಿ ಸಿಡಿಸಿದ ದಾಖಲೆ ನಿರ್ಮಿಸಿದ್ದರು.

4 / 5
ಇದೀಗ 13 ವರ್ಷಗಳ ಬಳಿಕ ಈ ದಾಖಲೆಯನ್ನು ಸರಿಗಟ್ಟುವಲ್ಲಿ ಜೋಶ್ ಇಂಗ್ಲಿಸ್ ಯಶಸ್ವಿಯಾಗಿದ್ದಾರೆ. ಲಾಹೋರ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಇಂಗ್ಲಿಸ್ ಕೇವಲ 77 ಎಸೆತಗಳಲ್ಲಿ ಶತಕ ಪೂರೈಸಿ, ವೀರೇಂದ್ರ ಸೆಹ್ವಾಗ್ ಜತೆ ಸ್ಪೋಟಕ ಸೆಂಚುರಿ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನ ಹಂಚಿಕೊಂಡಿದ್ದಾರೆ.

5 / 5

Published On - 9:04 am, Sun, 23 February 25

Follow us
ಸೈಟು ಹಿಂತಿರುಗಿಸಿದ್ದು ಆದ ಪ್ರಮಾದವನ್ನು ಸಿಎಂ ಅಂಗೀಕರಿಸಿದಂತೆ: ವಿಜಯೇಂದ್ರ

ಮೋದಿ, ಮೋದಿ ಎಂದು ಜೈಕಾರ ಹಾಕಿ ಮೋದಿಯನ್ನು ಸ್ವಾಗತಿಸಿದ ಬ್ಯಾಂಕಾಕ್ ಜನ

ಅರಣ್ಯಪ್ರದೇಶದಲ್ಲಿ ಬತ್ತಿವೆ ಕೆರೆಕುಂಟೆ, ಪ್ರಾಣಿಗಳಿಗೆ ಸಿಗುತ್ತಿಲ್ಲ ನೀರು

6 ತಿಂಗಳ ಮಗುವನ್ನೆತ್ತಿಕೊಂಡು ಕೆಂಡ ಹಾಯಲು ಹೋಗಿ ಮುಗ್ಗರಿಸಿ ಬಿದ್ದ ವ್ಯಕ್ತ

‘ಮಕ್ಕಳು ಬೆಳೆದ್ವಾ?’; ಕುರಿ ಪ್ರತಾಪ್ ಪ್ರಶ್ನಗೆ ಡಾಲಿ ಧನಂಜಯ್ ಶಾಕ್

ಬೆಂಗಳೂರು ಹೊರವಲಯಗಳಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ

ಚಾಮರಾಜನಗರ: ಹಳ್ಳದ ನೀರಿನಲ್ಲಿ ಗಜಪಡೆ ಜಲಕ್ರೀಡೆ, ವಿಡಿಯೋ ವೈರಲ್

Daily Devotional: ಉದ್ಯೋಗ ಸಿಗುತ್ತಿಲ್ಲವಾ? ಇಲ್ಲಿದೆ ಪರಿಹಾರ ಮಂತ್ರ

Daily Horoscope: ಈ ರಾಶಿಯವರಿಗೆ ಕೆಲಸದಲ್ಲಿ ಜಯ ಮತ್ತು ಧನಯೋಗ

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್