AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಕನ್ನಡಿಗ ಕೆಎಲ್ ರಾಹುಲ್​ಗೆ ಮಹತ್ವದ ಜವಾಬ್ದಾರಿ ನೀಡಿದ ಡೆಲ್ಲಿ ಕ್ಯಾಪಿಟಲ್ಸ್

KL Rahul's IPL 2026 Role: ರಣಜಿ ಟ್ರೋಫಿಯಲ್ಲಿ ಕರ್ನಾಟಕ ಪರ ಅಬ್ಬರಿಸಿದ್ದ ಕೆಎಲ್ ರಾಹುಲ್, ಈಗ ಐಪಿಎಲ್ 2026ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಆಟಗಾರರಾಗಿದ್ದಾರೆ. ಈ ಬಾರಿ ಅವರು ಆರಂಭಿಕ ಬ್ಯಾಟ್ಸ್‌ಮನ್ ಹಾಗೂ ವಿಕೆಟ್ ಕೀಪರ್ ಆಗಿ ಹೊಸ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಹಿಂದಿನ ಋತುವಿನಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡಿದ್ದ ರಾಹುಲ್, ನಂತರ ಆರಂಭಿಕನಾಗಿ ಭರ್ಜರಿ ಪ್ರದರ್ಶನ ನೀಡಿ 539 ರನ್ ಗಳಿಸಿದ್ದರು. ಡೆಲ್ಲಿ ತಂಡವು ಈ ಬಾರಿಯೂ ಅವರ ಅಮೋಘ ಆಟವನ್ನು ನಿರೀಕ್ಷಿಸುತ್ತಿದೆ.

ಪೃಥ್ವಿಶಂಕರ
|

Updated on:Mar 17, 2026 | 10:39 PM

Share
ರಣಜಿ ಅಂಗಳದಲ್ಲಿ ಕರ್ನಾಟಕ ತಂಡವನ್ನು ಫೈನಲ್​ಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಕನ್ನಡಿಗ ಕೆಎಲ್ ರಾಹುಲ್ ಇದೀಗ ಐಪಿಎಲ್‌ನಲ್ಲಿ ಅಬ್ಬರಿಸಲು ಸಜ್ಜಾಗಿದ್ದಾರೆ. ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಕೆಎಲ್ ರಾಹುಲ್, ಈ ಬಾರಿಯ ಐಪಿಎಲ್‌ನಲ್ಲಿ ಡೆಲ್ಲಿ ತಂಡದಲ್ಲಿ ಹೊಸ ಪಾತ್ರವನ್ನು ನಿರ್ವಹಿಸಲಿದ್ದಾರೆ.

1 / 6
ಡೆಲ್ಲಿ ಕ್ಯಾಪಿಟಲ್ಸ್ ತನ್ನ ಹಿಂದಿನ ತಪ್ಪುಗಳಿಂದ ಪಾಠ ಕಲಿತಿದ್ದು, ಕೆಎಲ್ ರಾಹುಲ್ ಅವರನ್ನು ಓಪನರ್ ಆಗಿ ಆಡಿಸಲು ನಿರ್ಧರಿಸಿದೆ. ಹೀಗಾಗಿ ಅವರು ಈ ಆವೃತ್ತಿಯ ಮೊದಲ ಪಂದ್ಯದಿಂದಲೇ ಡೆಲ್ಲಿ ಕ್ಯಾಪಿಟಲ್ಸ್ ಪರ ಇನ್ನಿಂಗ್ಸ್ ತೆರೆಯುವುದನ್ನು ಕಾಣಬಹುದು. ಇದು ಮಾತ್ರವಲ್ಲದೆ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕನಾಗುವುದರ ಜೊತೆಗೆ ವಿಕೆಟ್ ಕೀಪರ್ ಕೂಡ ಆಗಿರುತ್ತಾರೆ.

2 / 6
2025 ರ ಐಪಿಎಲ್​ನಲ್ಲಿ ಕೆಎಲ್ ರಾಹುಲ್ ಮೊದಲ 11 ಪಂದ್ಯಗಳಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡಿದ್ದರು. ಆದಾಗ್ಯೂ, ಜ್ಯಾಕ್ ಫ್ರೇಸರ್ ಮೆಕ್‌ಗುರ್ಕ್ ಅವರ ಕಳಪೆ ಆರಂಭಿಕ ಪ್ರದರ್ಶನದಿಂದ ಬೇಸತ್ತ ಡೆಲ್ಲಿ ಫ್ರಾಂಚೈಸ್ ಕೆಎಲ್ ರಾಹುಲ್ ಅವರನ್ನು ಆರಂಭಿಕನಾಗಿ ಕಣಕ್ಕಿಳಿಸಿತು. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡ  ರಾಹುಲ್ ತಂಡಕ್ಕಾಗಿ ಉತ್ತಮ ಪ್ರದರ್ಶನ ನೀಡಿದರು.

3 / 6
ಕಳೆದ ಐಪಿಎಲ್ ಋತುವಿನಲ್ಲಿ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ಆಗಿದ್ದರು. ಗುಜರಾತ್ ಟೈಟಾನ್ಸ್ ವಿರುದ್ಧ 65 ಎಸೆತಗಳಲ್ಲಿ 112 ರನ್ ಸೇರಿದಂತೆ 13 ಪಂದ್ಯಗಳಲ್ಲಿ 149.72 ಸ್ಟ್ರೈಕ್ ರೇಟ್‌ನಲ್ಲಿ 539 ರನ್ ಗಳಿಸಿದರು. ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕ ಆಟಗಾರನಾಗಿ ರಾಹುಲ್ ಆ ಶತಕ ಬಾರಿಸಿದ್ದರು.

4 / 6
ಐಪಿಎಲ್ 2026 ರಲ್ಲೂ ಕೆಎಲ್ ರಾಹುಲ್ ಅವರಿಂದ ಇದೇ ರೀತಿಯ ಉತ್ತಮ ಪ್ರದರ್ಶನವನ್ನು ಡೆಲ್ಲಿ ಕ್ಯಾಪಿಟಲ್ಸ್ ನಿರೀಕ್ಷಿಸುತ್ತದೆ, ಇದನ್ನು ಗಮನದಲ್ಲಿಟ್ಟುಕೊಂಡು ರಾಹುಲ್ ಅವರನ್ನು ಆರಂಭಿಕ ಆಟಗಾರನಾಗಿ ಕಣಕ್ಕಿಳಿಸುವ ಅಂತಿಮ ನಿರ್ಧಾರವನ್ನು ಆಡಳಿತ ಮಂಡಳಿ ತೆಗೆದುಕೊಂಡಿದೆ.

5 / 6
ಕೆಎಲ್ ರಾಹುಲ್ ಅವರ ಐಪಿಎಲ್ ವೃತ್ತಿಜೀವನದಲ್ಲಿ 145 ಪಂದ್ಯಗಳ 136 ಇನ್ನಿಂಗ್ಸ್‌ಗಳಲ್ಲಿ 46.21 ಸರಾಸರಿ ಮತ್ತು 136.02 ಸ್ಟ್ರೈಕ್ ರೇಟ್‌ನಲ್ಲಿ 5222 ರನ್ ಗಳಿಸಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಪರ ಇದುವರೆಗೆ 13 ಪಂದ್ಯಗಳನ್ನು ಆಡಿರುವ ರಾಹುಲ್ 53.90 ಸರಾಸರಿಯಲ್ಲಿ 539 ರನ್ ಗಳಿಸಿದ್ದಾರೆ. ಕೆಎಲ್ ರಾಹುಲ್ ಇದುವರೆಗೆ ಡೆಲ್ಲಿ ಕ್ಯಾಪಿಟಲ್ಸ್ ಪರ ಕೇವಲ ಒಂದು ಸೀಸನ್ ಮಾತ್ರ ಆಡಿದ್ದಾರೆ.

6 / 6

Published On - 10:37 pm, Tue, 17 March 26

Follow Us
ವ್ಯಕ್ತಿಯನ್ನು ಚೀಲಕ್ಕೆ ತುಂಬಿಕೊಂಡು ತಂದು ಕೊರಿಯರ್ ಮಾಡುವಂತೆ ಪಟ್ಟು

ಅಪ್ಪು ಅಭಿಮಾನಿಗಳ ಪುಣ್ಯದ ಕೆಲಸ: ಮನಸಾರೆ ಹೊಗಳಿದ ನಟ ಪ್ರಥಮ್

ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು

ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ

ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ

ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?

‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ

ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​

ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ

ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ