600 ವಿಕೆಟ್ ಕ್ಲಬ್‌ಗೆ ರಬಾಡ ಎಂಟ್ರಿ: ಒಂದೇ ಪಂದ್ಯದಲ್ಲಿ ಎರಡು ಮಹತ್ವದ ದಾಖಲೆ

Updated on: Oct 31, 2026 | 5:39 PM

ಕೇಪ್‌ಟೌನ್ ಟೆಸ್ಟ್‌ನಲ್ಲಿ ಕಗಿಸೊ ರಬಾಡ ಆಸ್ಟ್ರೇಲಿಯಾ ವಿರುದ್ಧ ಮಾರಕ ಬೌಲಿಂಗ್ ಪ್ರದರ್ಶಿಸಿ ದಕ್ಷಿಣ ಆಫ್ರಿಕಾಕ್ಕೆ ಮೇಲುಗೈ ತಂದಿದ್ದಾರೆ. ಅವರು 600 ಅಂತಾರಾಷ್ಟ್ರೀಯ ವಿಕೆಟ್ ಮತ್ತು 350 ಟೆಸ್ಟ್ ವಿಕೆಟ್‌ಗಳ ಮೈಲಿಗಲ್ಲು ತಲುಪಿದರು. ಕೇವಲ 13,808 ಎಸೆತಗಳಲ್ಲಿ 350 ಟೆಸ್ಟ್ ವಿಕೆಟ್ ಪಡೆದು ವಿಶ್ವದಾಖಲೆ ಬರೆದರು. ಈ ಸಾಧನೆಗಳು ಕ್ರಿಕೆಟ್ ಲೋಕದಲ್ಲಿ ರಬಾಡರ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿವೆ.

1 / 6
ಕೇಪ್‌ಟೌನ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾ ತಂಡ ಸಂಪೂರ್ಣ ಮೇಲುಗೈ ಸಾಧಿಸಿದೆ. ಗೆಲುವಿಗೆ 288 ರನ್​ಗಳ ಗುರಿ ಪಡೆದಿರುವ ಆಸ್ಟ್ರೇಲಿಯಾ ಎರಡಂಕಿ ದಾಟುವ ಮುನ್ನವೇ ಪ್ರಮುಖ ವಿಕೆಟ್​ಗಳನ್ನು ಕಳೆದುಕೊಂಡು ಸೋಲಿನ ಸುಳಿಗೆ ಸಿಲುಕಿದೆ. ಆಸ್ಟ್ರೇಲಿಯಾದ ಈ ಪತನದ ಹಿಂದೆ ಇರುವುದು ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಕಗಿಸೊ ರಬಾಡ(PC-PTI).

ಕೇಪ್‌ಟೌನ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾ ತಂಡ ಸಂಪೂರ್ಣ ಮೇಲುಗೈ ಸಾಧಿಸಿದೆ. ಗೆಲುವಿಗೆ 288 ರನ್​ಗಳ ಗುರಿ ಪಡೆದಿರುವ ಆಸ್ಟ್ರೇಲಿಯಾ ಎರಡಂಕಿ ದಾಟುವ ಮುನ್ನವೇ ಪ್ರಮುಖ ವಿಕೆಟ್​ಗಳನ್ನು ಕಳೆದುಕೊಂಡು ಸೋಲಿನ ಸುಳಿಗೆ ಸಿಲುಕಿದೆ. ಆಸ್ಟ್ರೇಲಿಯಾದ ಈ ಪತನದ ಹಿಂದೆ ಇರುವುದು ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಕಗಿಸೊ ರಬಾಡ(PC-PTI).

2 / 6

ಎರಡನೇ ಇನ್ನಿಂಗ್ಸ್​ನಲ್ಲಿ ಆಸೀಸ್ ಬ್ಯಾಟರ್‌ಗಳನ್ನು ಕಾಡಿರುವ ರಬಾಡ 3 ವಿಕೆಟ್​ಗಳನ್ನು ಉರುಳಿಸಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 600 ವಿಕೆಟ್‌ಗಳ ಮೈಲಿಗಲ್ಲು ತಲುಪಿದ್ದಾರೆ. ಅಲ್ಲದೆ ಈ ದಾಖಲೆ ಬರೆದ ದಕ್ಷಿಣ ಆಫ್ರಿಕಾದ ಐದನೇ ಬೌಲರ್ ಎಂಬ ಹೆಗ್ಗಳಿಕೆಗೆ ರಬಾಡ ಪಾತ್ರರಾಗಿದ್ದಾರೆ(PC-PTI).

3 / 6

ರಬಾಡ ಇದೀಗ 260 ಅಂತಾರಾಷ್ಟ್ರೀಯ ಪಂದ್ಯಗಳಿಂದ ಒಟ್ಟು 601 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ದಕ್ಷಿಣ ಆಫ್ರಿಕಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 600ಕ್ಕೂ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಶಾನ್ ಪೊಲಾಕ್ 823 ವಿಕೆಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಡೇಲ್ ಸ್ಟೇನ್ 697 ವಿಕೆಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಮಖಾಯ ಎಂಟಿನಿ 661 ಮತ್ತು ಅಲನ್ ಡೊನಾಲ್ಡ್ 602 ವಿಕೆಟ್‌ಗಳೊಂದಿಗೆ ನಂತರದ ಸ್ಥಾನಗಳಲ್ಲಿದ್ದಾರೆ(PC-PTI).

4 / 6

ಇದೇ ಪಂದ್ಯದಲ್ಲಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಅವರನ್ನು 14 ರನ್‌ಗಳಿಗೆ ಔಟ್ ಮಾಡುವ ಮೂಲಕ ರಬಾಡ ಟೆಸ್ಟ್ ಕ್ರಿಕೆಟ್‌ನಲ್ಲಿ 350 ವಿಕೆಟ್‌ಗಳ ಗಡಿಯನ್ನು ಕೂಡ ದಾಟಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 350 ವಿಕೆಟ್ ಪಡೆದ ವೇಗದ ಬೌಲರ್‌ಗಳ ಪಟ್ಟಿಯಲ್ಲಿ ಪಂದ್ಯಗಳ ಲೆಕ್ಕಾಚಾರದಲ್ಲಿ ರಬಾಡ ಜಂಟಿ ಮೂರನೇ ಸ್ಥಾನ ಪಡೆದಿದ್ದಾರೆ. ಅವರು ಕೇವಲ 75 ಟೆಸ್ಟ್ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ(PC-PTI).

5 / 6

ಇನ್ನು ಬೌಲಿಂಗ್ ಮಾಡಿದ ಎಸೆತಗಳ ಲೆಕ್ಕಾಚಾರದಲ್ಲಿ ರಬಾಡ ಮತ್ತೊಂದು ವಿಶೇಷ ದಾಖಲೆ ಬರೆದಿದ್ದಾರೆ. ಕೇವಲ 13,808 ಎಸೆತಗಳಲ್ಲಿ 350 ಟೆಸ್ಟ್ ವಿಕೆಟ್‌ಗಳನ್ನು ಪಡೆದಿರುವ ಅವರು, ಈ ಸಾಧನೆ ಮಾಡಿದ ಅತಿ ವೇಗದ ಬೌಲರ್ ಎನಿಸಿಕೊಂಡಿದ್ದಾರೆ. ಈ ಹಿಂದೆ ಡೇಲ್ ಸ್ಟೇನ್ 14,719 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದರು. ವಕಾರ್ ಯೂನಿಸ್ 14,905 ಎಸೆತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಮಾಲ್ಕಮ್ ಮಾರ್ಷಲ್ (16,285) ಮತ್ತು ಮಿಚೆಲ್ ಸ್ಟಾರ್ಕ್ (16,908) ನಂತರದ ಸ್ಥಾನಗಳಲ್ಲಿದ್ದಾರೆ(PC-PTI).

6 / 6

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಐದನೇ ದಿನ ರಬಾಡ ತಮ್ಮ ಮಾರಕ ಬೌಲಿಂಗ್ ಮೂಲಕ ಎದುರಾಳಿ ತಂಡಕ್ಕೆ ಆರಂಭದಲ್ಲೇ ಆಘಾತ ನೀಡಿದರು. ದಿನದಾಟದ ವೇಳೆ 600 ಅಂತಾರಾಷ್ಟ್ರೀಯ ವಿಕೆಟ್ ಹಾಗೂ 350 ಟೆಸ್ಟ್ ವಿಕೆಟ್‌ಗಳ ಮೈಲಿಗಲ್ಲು ತಲುಪಿದ ರಬಾಡ, ಆಸ್ಟ್ರೇಲಿಯಾದ ಅಗ್ರ ಕ್ರಮಾಂಕದ ಬ್ಯಾಟರ್‌ಗಳನ್ನು ಪೆವಿಲಿಯನ್‌ಗೆ ಅಟ್ಟಿದರು(PC-PTI).

ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us