ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೇವಲ 5 ರನ್ಗಳಿಸಿ ಔಟಾಗಿದ್ದರು. ಕಗಿಸೊ ರಬಾಡ ಎಸೆದ 5ನೇ ಓವರ್ನಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಹೊಡೆತಕ್ಕೆ ಯತ್ನಿಸಿ ಕ್ಯಾಚ್ ನೀಡಿ ವಿಕೆಟ್ ಒಪ್ಪಿಸಿದ್ದರು.
ಈ ವಿಕೆಟ್ನೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾರನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ ಬೌಲರ್ ಎಂಬ ಹೆಗ್ಗಳಿಕೆಗೆ ಕಗಿಸೊ ರಬಾಡ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಟಿಮ್ ಸೌಥಿ ಹೆಸರಿನಲ್ಲಿತ್ತು.
ನ್ಯೂಝಿಲೆಂಡ್ ತಂಡದ ವೇಗಿ ಟಿಮ್ ಸೌಥಿ ರೋಹಿತ್ ಶರ್ಮಾ ಅವರನ್ನು ಒಟ್ಟು 12 ಬಾರಿ ಔಟ್ ಮಾಡಿ ಈ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಮುರಿದು ಕಗಿಸೊ ರಬಾಡ ಅಗ್ರಸ್ಥಾನಕ್ಕೇರಿದ್ದಾರೆ.
ಕಗಿಸೊ ರಬಾಡ ಇದುವರೆಗೆ ರೋಹಿತ್ ಶರ್ಮಾ ಅವರನ್ನು ಒಟ್ಟು 13 ಬಾರಿ ಔಟ್ ಮಾಡಿದ್ದಾರೆ. ಈ ಮೂಲಕ ಹಿಟ್ಮ್ಯಾನ್ರನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ ಬೌಲರ್ ಎಂಬ ದಾಖಲೆಯನ್ನು ಕಗಿಸೊ ರಬಾಡ ತಮ್ಮದಾಗಿಸಿಕೊಂಡಿದ್ದಾರೆ.
ಇನ್ನು ವಿರಾಟ್ ಕೊಹ್ಲಿಯನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ ದಾಖಲೆ ಜೇಮ್ಸ್ ಅ್ಯಂಡರ್ಸನ್, ಮೊಯೀನ್ ಅಲಿ ಹಾಗೂ ಟಿಮ್ ಸೌಥಿ ಹೆಸರಿನಲ್ಲಿದೆ. ಈ ಮೂವರು ಬೌಲರ್ಗಳು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿಯನ್ನು 10 ಬಾರಿ ಔಟ್ ಮಾಡಿದ್ದಾರೆ.
ಈ ಪಂದ್ಯದಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಿದ್ದ ರಬಾಡ ಭಾರತ ತಂಡದ ಅಗ್ರ ಕ್ರಮಾಂಕದ ಬ್ಯಾಟರ್ಗಳಾದ ರೋಹಿತ್ ಶರ್ಮಾ (5), ಶ್ರೇಯಸ್ ಅಯ್ಯರ್ (31), ವಿರಾಟ್ ಕೊಹ್ಲಿ (38) ಯನ್ನು ಪೆವಿಲಿಯನ್ಗಟ್ಟಿದ್ದರು. ಇದಾದ ಬಳಿಕ ಅಶ್ವಿನ್ (8) ಹಾಗೂ ಶಾರ್ದೂಲ್ ಠಾಕೂರ್ (24) ವಿಕೆಟ್ ಪಡೆಯುವ ಮೂಲಕ 5 ವಿಕೆಟ್ಗಳ ಸಾಧನೆ ಮಾಡಿದ್ದಾರೆ.
ಭಾರತದ ವಿರುದ್ಧ ಕೇವಲ 44 ರನ್ ನೀಡಿ 5 ವಿಕೆಟ್ ಕಬಳಿಸುವುದರೊಂದಿಗೆ ಕಗಿಸೊ ರಬಾಡ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 500 ವಿಕೆಟ್ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಸೌತ್ ಆಫ್ರಿಕಾದ 7ನೇ ಬೌಲರ್ ಎನಿಸಿಕೊಂಡಿದ್ದಾರೆ.
Published On - 1:17 pm, Wed, 27 December 23