AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಬೌಲರ್‌ಗಳನ್ನ ಚೆಂಡಾಡಿ ವಿಶ್ವ ದಾಖಲೆ ಬರೆದ ಕಗಿಸೊ ರಬಾಡ

Pakistan vs South Africa Test: ಪಾಕಿಸ್ತಾನ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಕಗಿಸೊ ರಬಾಡ ಕೇವಲ 61 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್ ಗಳೊಂದಿಗೆ 71 ರನ್ ಬಾರಿಸಿದ್ದಾರೆ. ಈ ಅರ್ಧಶತಕದ ನೆರವಿನೊಂದಿಗೆ ಸೌತ್ ಆಫ್ರಿಕಾ ಮೊದಲ ಇನಿಂಗ್ಸ್ ನಲ್ಲಿ 404 ರನ್ ಕಲೆಹಾಕಿದೆ.

ಝಾಹಿರ್ ಯೂಸುಫ್
|

Updated on:Oct 23, 2025 | 7:31 AM

Share
ಸೌತ್ ಆಫ್ರಿಕಾ ಬೌಲರ್ ಕಗಿಸೊ ರಬಾಡ (Kagiso Rabada) ಟೆಸ್ಟ್​ ಕ್ರಿಕೆಟ್​​ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ವರ್ಲ್ಡ್ ರೆಕಾರ್ಡ್ ನಿರ್ಮಾಣವಾಗಿದ್ದು ಬೌಲಿಂಗ್‌ನಿಂದ ಅಲ್ಲ. ಬದಲಾಗಿ ಬ್ಯಾಟಿಂಗ್‌ನಿಂದ ಎಂಬುದು ವಿಶೇಷ.

1 / 6
ರಾವಲ್ಪಿಂಡಿಯಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 11ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕಗಿಸೊ ರಬಾಡ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಬಿರುಸಿನ ಬ್ಯಾಟಿಂಗ್‌ನೊಂದಿಗೆ ಪಾಕ್ ಬೌಲರ್‌ಗಳನ್ನು ಚೆಂಡಾಡಿದ ರಬಾಡ ಭರ್ಜರಿ ಅರ್ಧಶತಕ ಬಾರಿಸಿದರು. ಅದು ಕೂಡ ಕೇವಲ 38 ಎಸೆತಗಳಲ್ಲಿ..!

2 / 6
ಇದರೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ 11ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಸ್ಫೋಟಕ ಅರ್ಧಶತಕ ಸಿಡಿಸಿದ ಸೌತ್ ಆಫ್ರಿಕಾದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಅಂತಿಮ ಕ್ರಮಾಂಕದಲ್ಲಿ ಬ್ಯಾಟ್ ವಿಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ವಿಶ್ವದ 2ನೇ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

3 / 6
ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವುದು ವೆಸ್ಟ್ ಇಂಡೀಸ್‌ನ ಶೇನ್ ಶಿಲ್ಲಿಂಗ್ ಫೋರ್ಡ್. 2014 ರಲ್ಲಿ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ 11ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶಿಲ್ಲಿಂಗ್ ಫೋರ್ಡ್ ಕೇವಲ 25 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.

4 / 6
ಇದೀಗ ಪಾಕ್ ಬೌಲರ್‌ಗಳನ್ನು ಚೆಂಡಾಡಿ ಕೇವಲ 38 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಕಗಿಸೊ ರಬಾಡ ಈ ವಿಶ್ವ ದಾಖಲೆ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ. ಅಷ್ಟೇ ಅಲ್ಲದೇ 11ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಏಷ್ಯಾ ಪಿಚ್ ನಲ್ಲಿ ಅತೀ ವೇಗದ ಹಾಫ್ ಸೆಂಚುರಿ ಸಿಡಿಸಿದ ಹೆಗ್ಗಳಿಕೆಯನ್ನು ರಬಾಡ ತಮ್ಮದಾಗಿಸಿಕೊಂಡಿದ್ದಾರೆ.

5 / 6
Kagiso Rabada

Kagiso Rabada Creates new world record in Test Cricket

6 / 6

Published On - 7:30 am, Thu, 23 October 25

ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!

ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!