Kagiso Rabada: ಜಾಕ್ಸ್ ಕಾಲಿಸ್ ದಾಖಲೆ ಮುರಿದ ಕಗಿಸೊ ರಬಾಡ
West Indies vs South Africa: ವೆಸ್ಟ್ ಇಂಡೀಸ್ ಮತ್ತು ಸೌತ್ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯ ಕಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಪ್ರಥಮ ಇನಿಂಗ್ಸ್ನಲ್ಲಿ 357 ರನ್ ಕಲೆಹಾಕಿದರೆ, ವೆಸ್ಟ್ ಇಂಡೀಸ್ 233 ರನ್ ಬಾರಿಸಿತ್ತು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ ಸೌತ್ ಆಫ್ರಿಕಾ 3 ವಿಕೆಟ್ ನಷ್ಟಕ್ಕೆ 173 ರನ್ ಬಾರಿಸಿ ಡಿಕ್ಲೇರ್ ಘೋಷಿಸಿತು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ 5 ವಿಕೆಟ್ ನಷ್ಟಕ್ಕೆ 201 ರನ್ ಕಲೆಹಾಕುವ ಮೂಲಕ ಪಂದ್ಯವನ್ನು ಡ್ರಾ ಮಾಡಿಕೊಳ್ಳುವಲ್ಲಿ ವಿಂಡೀಸ್ ಪಡೆ ಯಶಸ್ವಿಯಾಗಿದೆ.