ಕಮಿಂದು ಮೆಂಡಿಸ್ ಮಿಂಚಿಂಗ್: ಟೆಸ್ಟ್​ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಸೃಷ್ಟಿ

|

Updated on: Sep 28, 2024 | 9:19 AM

Kamindu Mendis Records: 2022 ರಲ್ಲಿ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿರುವ 25 ವರ್ಷದ ಕಮಿಂದು ಮೆಂಡಿಸ್ ಈವರೆಗೆ 8 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. 4 ಶತಕ ಹಾಗೂ 4 ಅರ್ಧಶತಕಗಳೊಂದಿಗೆ ಕಮಿಂದು ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ ಬರೆಯುವಲ್ಲಿ ಯುವ ದಾಂಡಿಗ ಯಶಸ್ವಿಯಾಗಿದ್ದಾರೆ.

1 / 5
147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಶ್ರೀಲಂಕಾ ತಂಡದ ಬ್ಯಾಟರ್ ಕಮಿಂದು ಮೆಂಡಿಸ್ ಹೊಸ ದಾಖಲೆ ಬರೆದಿದ್ದಾರೆ. ಅದು ಸಹ ಸತತವಾಗಿ 8 ಬಾರಿ ಫಿಫ್ಟಿ ಪ್ಲಸ್ ಸ್ಕೋರ್​ಗಳಿಸುವ ಮೂಲಕ. ಅಂದರೆ ಟೆಸ್ಟ್​ ಕ್ರಿಕೆಟ್​ನಲ್ಲಿ ಆಡಿದ ಮೊದಲ 8 ಪಂದ್ಯಗಳಲ್ಲೂ 50+ ಸ್ಕೋರ್​ಗಳಿಸಿದ ವಿಶ್ವ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆ ಇದೀಗ ಕಮಿಂದು ಮೆಂಡಿಸ್ ಪಾಲಾಗಿದೆ.

2 / 5
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಪಾಕಿಸ್ತಾನದ ಸೌದ್ ಶಕೀಲ್ ಹೆಸರಿನಲ್ಲಿತ್ತು. ಪಾಕ್ ತಂಡದ ಎಡಗೈ ಬ್ಯಾಟರ್ ಮೊದಲ 7 ಟೆಸ್ಟ್ ಪಂದ್ಯಗಳಲ್ಲಿ 50+ ಸ್ಕೋರ್​ಗಳಿಸುವ ಮೂಲಕ ಈ ವರ್ಲ್ಡ್ ರೆಕಾರ್ಡ್ ನಿರ್ಮಿಸಿದ್ದರು. ಇದೀಗ 8ನೇ ಬಾರಿ ಅರ್ಧಶತಕಕ್ಕಿಂತ ಹೆಚ್ಚಿನ ರನ್​ಗಳಿಸುವ ಮೂಲಕ ಕಮಿಂದು ಈ ದಾಖಲೆ ಮುರಿದಿದ್ದಾರೆ.

3 / 5
ಗಾಲೆಯಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕಮಿಂದು ಮೆಂಡಿಸ್ 250 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 16 ಫೋರ್​ಗಳೊಂದಿಗೆ ಅಜೇಯ 182 ರನ್ ಬಾರಿಸಿದ್ದಾರೆ. ಈ ಭರ್ಜರಿ ಶತಕದೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಮೊದಲ 8 ಪಂದ್ಯಗಳಲ್ಲೂ 50+ ಸ್ಕೋರ್​ ಗಳಿಸಿದ ವಿಶ್ವದ ಮೊದಲ ಬ್ಯಾಟರ್ ಎನಿಸಿಕೊಂಡರು.

4 / 5
ಅಷ್ಟೇ ಅಲ್ಲದೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಕಡಿಮೆ ಪಂದ್ಯಗಳ ಮೂಲಕ 1000 ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎಂಬ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು 7 ಪಂದ್ಯಗಳ ಮೂಲಕ ಸಾವಿರ ರನ್ ಪೂರೈಸಿದ ಆಸ್ಟ್ರೇಲಿಯಾ ಮಾಜಿ ದಂತಕಥೆ ಡಾನ್ ಬ್ರಾಡ್ಮನ್​. ಇದೀಗ 8ನೇ ಪಂದ್ಯದ ಮೂಲಕ 1000 ರನ್ ಪೂರೈಸಿ ಕಮಿಂದು ಮೆಂಡಿಸ್ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

5 / 5
ಇನ್ನು ಕಮಿಂದು ಮೆಂಡಿಸ್ ಬಾರಿಸಿದ 182 ರನ್​ಗಳ ಅಜೇಯ ಶತಕದ ನೆರವಿನಿಂದ ಶ್ರೀಲಂಕಾ ತಂಡವು ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ನಷ್ಟಕ್ಕೆ 602 ರನ್ ಗಳಿಸಿ ಡಿಕ್ಲೇರ್ ಘೋಷಿಸಿದೆ. ಅತ್ತ ಮೊದಲ ಇನಿಂಗ್ಸ್ ಶುರು ಮಾಡಿರುವ ನ್ಯೂಝಿಲೆಂಡ್ ತಂಡವು ದ್ವಿತೀಯ ದಿನದಾಟದ ಮುಕ್ತಾಯದ ವೇಳೆಗೆ 2 ವಿಕೆಟ್ ಕಳೆದುಕೊಂಡು 22 ರನ್ ಕಲೆಹಾಕಿದೆ.