ಬಾಬರ್ ಸ್ಥಾನದಲ್ಲಿ ಕಣಕ್ಕಿಳಿದ, ಶತಕ ಸಿಡಿಸಿದ, ದಾಖಲೆ ಬರೆದ

|

Updated on: Oct 16, 2024 | 10:03 AM

Kamran Ghulam Records: ಕಳೆದ 18 ಇನಿಂಗ್ಸ್​ಗಳಲ್ಲಿ ಒಂದೇ ಒಂದು ಅರ್ಧಶತಕ ಬಾರಿಸಿದ ಬಾಬರ್ ಆಝಂ ಅವರನ್ನು ಪಾಕಿಸ್ತಾನ್ ಟೆಸ್ಟ್​​ ತಂಡದಿಂದ ಕೈ ಬಿಡಲಾಗಿದೆ. ಅವರ ಸ್ಥಾನದಲ್ಲಿ ಚೊಚ್ಚಲ ಅವಕಾಶ ಪಡೆದ ಕಮ್ರಾನ್ ಗುಲಾಮ್ ಇದೀಗ ಮೊದಲ ಪಂದ್ಯದಲ್ಲೇ ಶತಕ ಸಿಡಿಸಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.

1 / 5
ಪಾಕಿಸ್ತಾನ್ ತಂಡದ ಮಾಜಿ ನಾಯಕ ಬಾಬರ್ ಆಝಂ ಸ್ಥಾನದಲ್ಲಿ ಅವಕಾಶ ಪಡೆದ ಕಮ್ರಾನ್ ಗುಲಾಮ್ ಚೊಚ್ಚಲ ಟೆಸ್ಟ್​ ಪಂದ್ಯದಲ್ಲೇ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. ಅದು ಸಹ ಬಲಿಷ್ಠ ಇಂಗ್ಲೆಂಡ್ ವೇಗಿಗಳನ್ನು ಎದುರಿಸುವ ಮೂಲಕ ಎಂಬುದು ವಿಶೇಷ. ಮುಲ್ತಾನ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಶಾನ್ ಮಸೂದ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

2 / 5
ಅದರಂತೆ ಇನಿಂಗ್ಸ್ ಆರಂಭಿಸಿದ ಪಾಕಿಸ್ತಾನ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಅಬ್ದುಲ್ಲಾ ಶಫೀಕ್ ಕೇವಲ 7 ರನ್​ಗಳಿಸಿ ಔಟಾದರೆ, ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶಾನ್ ಮಸೂದ್ 3 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಕ್ರೀಸ್​ಗೆ ಆಗಮಿಸಿದ ಕಮ್ರಾನ್ ಗುಲಾಮ್ ಅತ್ಯುತ್ತಮ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದರು.

3 / 5
ಇಂಗ್ಲೆಂಡ್ ಬೌಲರ್​ಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದ ಕಮ್ರಾನ್ 192 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಪಾಕಿಸ್ತಾನ್ ಪರ ಚೊಚ್ಚಲ ಟೆಸ್ಟ್​ನಲ್ಲಿ ಶತಕ ಬಾರಿಸಿದ 13ನೇ ಆಟಗಾರ ಎನಿಸಿಕೊಂಡರು. ಅಲ್ಲದೆ ಮೊದಲ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಶತಕ ಬಾರಿಸಿದ ಪಾಕಿಸ್ತಾನದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

4 / 5
ಹಾಗೆಯೇ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲೇ ಚೊಚ್ಚಲ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಶತಕ ಸಿಡಿಸಿದ ವಿಶ್ವದ 6ನೇ ಬ್ಯಾಟರ್ ಎಂಬ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡರು. ಇದರ ಜೊತೆಗೆ ಮೊದಲ ಟೆಸ್ಟ್​ ಪಂದ್ಯದಲ್ಲೇ ಶತಕ ಬಾರಿಸಿದ ಪಾಕಿಸ್ತಾನದ ಎರಡನೇ ಹಿರಿಯ ಆಟಗಾರ ಎನಿಸಿಕೊಂಡರು. ತಮ್ಮ 29ನೇ ವಯಸ್ಸಿನಲ್ಲಿ ಟೆಸ್ಟ್​​ಗೆ ಪಾದಾರ್ಪಣೆ ಮಾಡುವ ಮೂಲಕ ಕಮ್ರಾನ್ ಗುಲಾಮ್ ಈ ಸಾಧನೆ ಮಾಡಿದ್ದಾರೆ.

5 / 5
ಇನ್ನು ಈ ಪಂದ್ಯದಲ್ಲಿ ಕಮ್ರಾನ್ ಗುಲಾಮ್ 224 ಎಸೆತಗಳನ್ನು ಎದುರಿ 11 ಫೋರ್ ಹಾಗೂ 1 ಸಿಕ್ಸ್​ನೊಂದಿಗೆ 118 ರನ್ ಬಾರಿಸಿದರು. ಈ ಶತಕದ ನೆರವಿನಿಂದ ಪಾಕಿಸ್ತಾನ್ ತಂಡವು ಮೊದಲ ದಿನದಾಟದ ಮುಕ್ತಾಯದ ವೇಳೆಗೆ 5 ವಿಕೆಟ್ ಕಳೆದುಕೊಂಡು 259 ರನ್ ಕಲೆಹಾಕಿದ್ದಾರೆ.