- Kannada News Photo gallery Cricket photos Kane Williamson beats Virat Kohli, Joe Root With New Milestone
ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಮತ್ತೊಂದು ದಾಖಲೆ ಬರೆದ ಕೇನ್ ವಿಲಿಯಮ್ಸನ್
New Zealand vs England, 1st Test :ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು ಪ್ರಥಮ ಇನಿಂಗ್ಸ್ನಲ್ಲಿ 348 ರನ್ ಕಲೆಹಾಕಿದರೆ, ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್ನಲ್ಲಿ 499 ರನ್ ಪೇರಿಸಿದೆ. ಇದೀಗ ದ್ವಿತೀಯ ಇನಿಂಗ್ಸ್ ಆಡುತ್ತಿರುವ ನ್ಯೂಝಿಲೆಂಡ್ ತಂಡವು ಮೂರನೇ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 155 ರನ್ಗಳಿಸಿದೆ.
Updated on: Nov 30, 2024 | 12:53 PM

ನ್ಯೂಝಿಲೆಂಡ್ ತಂಡದ ಸ್ಟಾರ್ ಬ್ಯಾಟರ್ ಕೇನ್ ವಿಲಿಯಮ್ಸನ್ ತಮ್ಮ ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆಗೊಳಿಸಿದ್ದಾರೆ. ಅದು ಕೂಡ ನ್ಯೂಝಿಲೆಂಡ್ನ ಯಾವುದೇ ಬ್ಯಾಟರ್ಗೂ ಸಾಧ್ಯವಾಗದ ದಾಖಲೆ ಬರೆಯುವ ಎಂಬುದು ವಿಶೇಷ. ಕ್ರೈಸ್ಟ್ ಚರ್ಚ್ ಹ್ಯಾಗ್ಲಿ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ದದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ವಿಲಿಯಮ್ಸನ್ 93 ರನ್ ಬಾರಿಸಿದ್ದರು.

ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ 61 ರನ್ಗಳ ಕೊಡುಗೆ ನೀಡಿದ್ದಾರೆ. ಈ ಎರಡು ಅರ್ಧಶತಕಗಳೊಂದಿಗೆ ಕೇನ್ ವಿಲಿಯಮ್ಸನ್ ಟೆಸ್ಟ್ ಕ್ರಿಕೆಟ್ನಲ್ಲಿ 9000 ರನ್ ಪೂರೈಸಿದ್ದಾರೆ. ಇದರೊದಿಗೆ ಈ ಸಾಧನೆ ಮಾಡಿದ ನ್ಯೂಝಿಲೆಂಡ್ನ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ.

ವಿಶೇಷ ಎಂದರೆ ಕೇನ್ ವಿಲಿಯಮ್ಸನ್ ಈ ಸಾಧನೆ ಮಾಡಲು ತೆಗೆದುಕೊಂಡಿರುವುದು ಕೇವಲ 182 ಟೆಸ್ಟ್ ಇನಿಂಗ್ಸ್ ಮಾತ್ರ. ಅಂದರೆ ವಿರಾಟ್ ಕೊಹ್ಲಿ ಹಾಗೂ ಜೋ ರೂಟ್ಗಿಂತ ಕಡಿಮೆ ಪಂದ್ಯಗಳ ಮೂಲಕ ವಿಲಿಯಮ್ಸನ್ 9000 ರನ್ ಕಲೆಹಾಕಿದ್ದಾರೆ.

ಕಿಂಗ್ ಕೊಹ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ 9000 ರನ್ ಕಲೆಹಾಕಲು 197 ಇನಿಂಗ್ಸ್ ತೆಗೆದುಕೊಂಡಿದ್ದರು. ಹಾಗೆಯೇ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ 196 ಇನಿಂಗ್ಸ್ಗಳ ಮೂಲಕ ಈ ಸಾಧನೆ ಮಾಡಿದ್ದರು. ಇದೀಗ 182 ಇನಿಂಗ್ಸ್ಗಳಲ್ಲಿ 9 ಸಾವಿರ ರನ್ ಪೂರೈಸಿ ಕೇನ್ ವಿಲಿಯಮ್ಸನ್ ಕೊಹ್ಲಿ-ರೂಟ್ರನ್ನು ಹಿಂದಿಕ್ಕಿದ್ದಾರೆ.

ಇನ್ನು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತೀ ವೇಗವಾಗಿ 9000 ರನ್ ಕಲೆಹಾಕಿದ ವಿಶ್ವ ದಾಖಲೆ ಶ್ರೀಲಂಕಾದ ಕುಮಾರ ಸಂಗಾಕ್ಕರ ಹೆಸರಿನಲ್ಲಿದೆ. ಸಂಗಕ್ಕಾರ ಕೇವಲ 172 ಇನಿಂಗ್ಸ್ಗಳ ಮೂಲಕ ಈ ಸಾಧನೆ ಮಾಡಿದರೆ, ಸ್ಟೀವ್ ಸ್ಮಿತ್ 174 ಇನಿಂಗ್ಸ್ಗಳಲ್ಲಿ 9000 ರನ್ ಕಲೆಹಾಕಿ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.



















