AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್​ನಲ್ಲಿ ಹೊಸ ಇತಿಹಾಸ ಬರೆದ ಕೇನ್ ವಿಲಿಯಮ್ಸನ್

Kane Williamson: 2024 ರಲ್ಲಿ ಇಂಗ್ಲೆಂಡ್ ವಿರುದ್ಧ ಕೊನೆಯ ಟೆಸ್ಟ್ ಪಂದ್ಯವಾಡಿದ್ದ ಕೇನ್ ವಿಲಿಯಮ್ಸನ್ ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಕಂಬ್ಯಾಕ್ ಮಾಡಿದ್ದಾರೆ. ಒಂದು ವರ್ಷದ ಬಳಿಕ ಕಣಕ್ಕಿಳಿದ ಮೊದಲ ಮ್ಯಾಚ್​ನಲ್ಲೇ ಆಕರ್ಷಕ ಅರ್ಧಶತಕ ಬಾರಿಸಿದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 02, 2025 | 10:08 AM

Share
ಬರೋಬ್ಬರಿ 1 ವರ್ಷಗಳ ಬಳಿಕ ಕೇನ್ ವಿಲಿಯಮ್ಸನ್ (Kane Williamson) ಟೆಸ್ಟ್​ ಕ್ರಿಕೆಟ್​ಗೆ ಮರಳಿದ್ದಾರೆ. ಈ ಮರಳುವಿಕೆಯ ಪಂದ್ಯದಲ್ಲೇ ಆಕರ್ಷಕ ಅರ್ಧಶತಕ ಬಾರಿಸಿ ವಿಶೇಷ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ. ಈ ಮೂಲಕ ಟೆಸ್ಟ್ ಇತಿಹಾಸದಲ್ಲೇ ಈ ಸಾಧನೆ ಮಾಡಿದ ನ್ಯೂಝಿಲೆಂಡ್​ನ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ.

1 / 5
ಕ್ರೈಸ್ಟ್​ಚರ್ಚ್​​ನ ಹೆಂಗ್ಲೆ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡವು ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು ಮೊದಲ ಓವರ್​ನಲ್ಲೇ ಡೆವೊನ್ ಕಾನ್ವೆ (0) ವಿಕೆಟ್ ಕಳೆದುಕೊಂಡಿತು. ಈ ವೇಳೆ ಕ್ರೀಸ್​ಗೆ ಆಗಮಿಸಿದ ಕೇನ್ ವಿಲಿಯಮ್ಸನ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು.

2 / 5
ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿದ ಕೇನ್ ವಿಲಿಯಮ್ಸನ್ 102 ಎಸೆತಗಳನ್ನು ಎದುರಿಸಿ 6 ಫೋರ್​ಗಳೊಂದಿಗೆ 52 ರನ್ ಬಾರಿಸಿದರು. ಈ ಮೂಲಕ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಕ್ರಿಕೆಟ್​ನಲ್ಲಿ 1000 ರನ್ ಪೂರೈಸಿದ ನ್ಯೂಝಿಲೆಂಡ್​ನ 2ನೇ ಬ್ಯಾಟರ್ ಎನಿಸಿಕೊಂಡರು. ಇದಕ್ಕೂ ಮುನ್ನ ರಾಸ್ ಟೇಲರ್ (1136) ಈ ಸಾಧನೆ ಮಾಡಿದ್ದರು.

3 / 5
ಇದೀಗ ವೆಸ್ಟ್ ಇಂಡೀಸ್ ವಿರುದ್ಧ 18 ಇನಿಂಗ್ಸ್​ಗಳಲ್ಲಿ ಸಾವಿರ ರನ್ ಪೂರೈಸುವ ಮೂಲಕ ಕೇನ್ ವಿಲಿಯಮ್ಸನ್ ಐದು ದೇಶಗಳ ವಿರುದ್ಧ ಟೆಸ್ಟ್​ನಲ್ಲಿ 1000+ ರನ್ ಕಲೆಹಾಕಿದ ನ್ಯೂಝಿಲೆಂಡ್​ನ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮೊದಲು ಅವರು ಇಂಗ್ಲೆಂಡ್, ಪಾಕಿಸ್ತಾನ್, ಸೌತ್ ಆಫ್ರಿಕಾ ಮತ್ತು ಶ್ರೀಲಂಕಾ ವಿರುದ್ಧ ಟೆಸ್ಟ್​ನಲ್ಲಿ 1000+ ರನ್ ಕಲೆಹಾಕಿದ್ದರು.

4 / 5
ಇದೀಗ ವೆಸ್ಟ್ ಇಂಡೀಸ್ ವಿರುದ್ಧ 1022 ರನ್​ಗಳಿಸುವ ಮೂಲಕ ಐದು ದೇಶಗಳ ವಿರುದ್ಧ ಟೆಸ್ಟ್​ನಲ್ಲಿ ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ ನ್ಯೂಝಿಲೆಂಡ್​ನ ಏಕೈಕ ಬ್ಯಾಟರ್ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು

‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ

ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು

ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?

ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ

ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ

ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್