ವೆಲ್ಲಿಂಗ್ಟನ್ನಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ಬ್ಯಾಟರ್ ಕೇನ್ ವಿಲಿಯಮ್ಸನ್ ಭರ್ಜರಿ ದ್ವಿಶತಕ ಬಾರಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಸೋತ ನ್ಯೂಜಿಲೆಂಡ್ ತಂಡಕ್ಕೆ ಶ್ರೀಲಂಕಾ ಮೊದಲು ಬ್ಯಾಟ್ ಮಾಡುವ ಅವಕಾಶ ನೀಡಿತು.
ಅದರಂತೆ ಇನಿಂಗ್ಸ್ ಆರಂಭಿಸಿದ ಲಾಥಮ್ (21) ಬೇಗನೆ ಔಟಾದರೆ, ಡೆವೊನ್ ಕಾನ್ವೆ 78 ರನ್ ಗಳಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೇನ್ ವಿಲಿಯಮ್ಸನ್ 296 ಎಸೆತಗಳಲ್ಲಿ 23 ಫೋರ್ ಹಾಗೂ 2 ಸಿಕ್ಸ್ ಒಳಗೊಂಡಂತೆ 215 ರನ್ ಬಾರಿಸಿದರು.
ವಿಶೇಷ ಎಂದರೆ ಈ ಡಬಲ್ ಸೆಂಚುರಿಯೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ದ್ವಿಶತಕ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ವಿಲಿಯಮ್ಸನ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್ ಹಾಗೂ ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ದಾಖಲೆ ಸರಿಗಟ್ಟಿದ್ದರು.
ವಿಶೇಷ ಎಂದರೆ ಈ ಡಬಲ್ ಸೆಂಚುರಿಯೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ದ್ವಿಶತಕ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ವಿಲಿಯಮ್ಸನ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್ ಹಾಗೂ ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ದಾಖಲೆ ಸರಿಗಟ್ಟಿದ್ದರು.
ಸಚಿನ್ ತೆಂಡೂಲ್ಕರ್ 329 ಟೆಸ್ಟ್ ಇನಿಂಗ್ಸ್ಗಳಲ್ಲಿ ಒಟ್ಟು 6 ಬಾರಿ ದ್ವಿಶತಕದ ಸಾಧನೆ ಮಾಡಿದ್ದಾರೆ. ಇನ್ನು ವೀರೇಂದ್ರ ಸೆಹ್ವಾಗ್ 180 ಇನಿಂಗ್ಸ್ಗಳಲ್ಲಿ 6 ಡಬಲ್ ಸೆಂಚುರಿ ಸಿಡಿಸಿದ್ದರು. ಹಾಗೆಯೇ ರಿಕಿ ಪಾಂಟಿಂಗ್ 287 ಟೆಸ್ಟ್ ಇನಿಂಗ್ಸ್ಗಳಲ್ಲಿ 6 ಬಾರಿ ದ್ವಿಶತಕ ಬಾರಿಸಿ ಮಿಂಚಿದ್ದರು.
ಇದೀಗ ಕೇನ್ ವಿಲಿಯಮ್ಸನ್ 164 ಟೆಸ್ಟ್ ಇನಿಂಗ್ಸ್ಗಳಲ್ಲಿ 6 ದ್ವಿಶತಕ ಸಿಡಿಸಿದ್ದಾರೆ. ಈ ಮೂಲಕ ಸಚಿನ್, ಸೆಹ್ವಾಗ್, ಪಾಂಟಿಂಗ್ ದಾಖಲೆಗಳನ್ನು ಸರಿಗಟ್ಟಿದ್ದಾರೆ.
ಇನ್ನು ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಧಿಕ ಡಬಲ್ ಸೆಂಚುರಿ ಸಿಡಿಸಿದ ವಿಶ್ವ ದಾಖಲೆ ಕ್ರಿಕೆಟ್ ದಂತಕಥೆ ಡಾನ್ ಬ್ರಾಡ್ಮನ್ ಹೆಸರಿನಲ್ಲಿದೆ. ಆಸ್ಟ್ರೇಲಿಯಾದ ಮಾಜಿ ಆಟಗಾರ 80 ಇನಿಂಗ್ಸ್ಗಳಲ್ಲಿ ಒಟ್ಟು 12 ಬಾರಿ ದ್ವಿಶತಕ ಬಾರಿಸಿ ಮಿಂಚಿದ್ದರು. 2ನೇ ಸ್ಥಾನದಲ್ಲಿ ಕುಮಾರ ಸಂಗಾಕ್ಕರ (11 ದ್ವಿಶತಕ) ಹಾಗೂ 3ನೇ ಸ್ಥಾನದಲ್ಲಿ ಬ್ರಿಯಾನ್ ಲಾರಾ (9 ದ್ವಿಶತಕ) ಇದ್ದಾರೆ.
ಹಾಗೆಯೇ 183 ಟೆಸ್ಟ್ ಇನಿಂಗ್ಸ್ಗಳಲ್ಲಿ ಒಟ್ಟು 7 ಬಾರಿ ದ್ವಿಶತಕ ಸಿಡಿಸಿರುವ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಡಬಲ್ ಸೆಂಚುರಿ ಸರದಾರರ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.
Published On - 8:31 pm, Sat, 18 March 23