AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kane Williamson: ಹೊಸ ವಿಶ್ವ ದಾಖಲೆ ನಿರ್ಮಿಸಿದ ಕೇನ್ ವಿಲಿಯಮ್ಸನ್

New Zealand vs South Africa: ಸೌತ್ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಕಿವೀಸ್ ಪಡೆ 2 ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ಇದು ಸೌತ್ ಆಫ್ರಿಕಾ ವಿರುದ್ಧದ ನ್ಯೂಝಿಲೆಂಡ್​ನ ಮೊದಲ ಟೆಸ್ಟ್ ಸರಣಿ ಗೆಲುವು ಎಂಬುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್|

Updated on: Feb 17, 2024 | 11:05 AM

Share
ಹ್ಯಾಮಿಲ್ಟನ್​ ಸೇಡನ್ ಪಾರ್ಕ್​ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ ಶತಕ ಬಾರಿಸುವ ಮೂಲಕ ಕೇನ್ ವಿಲಿಯಮ್ಸನ್ (Kane Williamson) ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿಲಿಯಮ್ಸನ್ ಅಜೇಯ 133 ರನ್ ಬಾರಿಸಿದ್ದರು.

1 / 7
ಈ ಭರ್ಜರಿ ಸೆಂಚುರಿಯೊಂದಿಗೆ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ 4ನೇ ಇನಿಂಗ್ಸ್​ನಲ್ಲಿ ಅತೀ ಹೆಚ್ಚು ಬಾರಿ ಶತಕ ಬಾರಿಸಿದ ಬ್ಯಾಟರ್ ಎನಿಸಿಕೊಂಡರು. ಅದು ಕೂಡ ಪಾಕಿಸ್ತಾನದ ಮಾಜಿ ಟೆಸ್ಟ್​ ಸ್ಪೆಷಲಿಸ್ಟ್ ಬ್ಯಾಟರ್ ಯೂನಿಸ್ ಖಾನ್ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

2 / 7
ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ 4ನೇ ಇನಿಂಗ್ಸ್​ನಲ್ಲಿ ಅತ್ಯಧಿಕ ಶತಕ ಬಾರಿಸಿದ ದಾಖಲೆ ಯೂನಿಸ್ ಖಾನ್ ಹೆಸರಿನಲ್ಲಿತ್ತು. ಕೊನೆಯ ಇನಿಂಗ್ಸ್​ನಲ್ಲಿ 40 ಬಾರಿ ಬ್ಯಾಟ್ ಬೀಸಿದ್ದ ಪಾಕ್ ಆಟಗಾರ ಒಟ್ಟು 5 ಶತಕಗಳನ್ನು ಸಿಡಿಸಿ ವಿಶ್ವ ದಾಖಲೆ ಬರೆದಿದ್ದರು.

3 / 7
ಇದೀಗ ನಾಲ್ಕನೇ ಇನಿಂಗ್ಸ್​ನಲ್ಲಿ 26 ಬಾರಿ ಬ್ಯಾಟಿಂಗ್ ಮಾಡಿರುವ ಕೇನ್ ವಿಲಿಯಮ್ಸನ್ ಒಟ್ಟು 5 ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲೇ ಕೊನೆಯ ಇನಿಂಗ್ಸ್​ನಲ್ಲಿ ಅತೀ ಹೆಚ್ಚು ಬಾರಿ ಸೆಂಚುರಿ ಸಿಡಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿದ ವಿಶೇಷ ವಿಶ್ವ ದಾಖಲೆಯನ್ನು ಕೇನ್ ವಿಲಿಯಮ್ಸನ್ ತಮ್ಮದಾಗಿಸಿಕೊಂಡಿದ್ದಾರೆ.

4 / 7
ಇನ್ನು ಈ ಶತಕದೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 32 ಸೆಂಚುರಿಗಳನ್ನು ಪೂರೈಸಿದ ವಿಶ್ವ ದಾಖಲೆ ಕೂಡ ಕೇನ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ 174 ಇನಿಂಗ್ಸ್​ಗಳ ಮೂಲಕ ಈ ಸಾಧನೆ ಮಾಡಿದ್ದರು.

5 / 7
ಇದೀಗ 172 ಇನಿಂಗ್ಸ್​ಗಳ ಮೂಲಕ 32 ಶತಕ ಸಿಡಿಸಿ ಕೇನ್ ವಿಲಿಯಮ್ಸನ್ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಇದಲ್ಲದೆ ಸಕ್ರೀಯ ಟೆಸ್ಟ್ ಬ್ಯಾಟರ್​ಗಳ ಪಟ್ಟಿಯಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ದಾಖಲೆಯನ್ನು ಸ್ಮಿತ್ ಜೊತೆ ಹಂಚಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಸ್ಮಿತ್ ಹಾಗೂ ಕೇನ್ ವಿಲಿಯಮ್ಸನ್ 32 ಶತಕಗಳೊಂದಿಗೆ ಜಂಟಿಯಾಗಿ ಅಗ್ರಸ್ಥಾನ ಅಲಂಕರಿಸಿಕೊಂಡಿದ್ದಾರೆ.

6 / 7
ಒಟ್ಟಿನಲ್ಲಿ ಕಳೆದ 7 ಟೆಸ್ಟ್ ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ 7 ಸೆಂಚುರಿಗಳನ್ನು ಸಿಡಿಸಿರುವ ಕೇನ್ ವಿಲಿಯಮ್ಸನ್ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಾ ಸಾಗುತ್ತಿದ್ದಾರೆ. ಈ ದಾಖಲೆಗಳೊಂದಿಗೆ ಹಲವು ವಿಶ್ವ ದಾಖಲೆಗಳನ್ನು ತಮ್ಮದಾಗಿಸಿಕೊಳ್ಳುತ್ತಿರುವುದು ವಿಶೇಷ.

7 / 7
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು

20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..

ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!

ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?