ದಿಢೀರ್ ನಿವೃತ್ತಿ ಘೋಷಿಸಿದ ಕೇನ್ ವಿಲಿಯಮ್ಸನ್
Kane Williamson retirement: ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ 2026ರ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನವೇ ನ್ಯೂಝಿಲೆಂಡ್ ತಂಡದ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಫೆಬ್ರವರಿಯಲ್ಲಿ ನಡೆಯಲಿರುವ ಚುಟುಕು ವಿಶ್ವಕಪ್ನಲ್ಲಿ ಕಿವೀಸ್ ಪಡೆಯಲ್ಲಿ ಕೇನ್ ಕಾಣಿಸಿಕೊಳ್ಳುವುದಿಲ್ಲ.
Updated on:Nov 02, 2025 | 8:25 AM

ನ್ಯೂಝಿಲೆಂಡ್ ತಂಡದ ಸ್ಟಾರ್ ಬ್ಯಾಟರ್ ಕೇನ್ ವಿಲಿಯಮ್ಸನ್ (Kane Williamson) ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಮುಕ್ತಾಯದ ಬೆನ್ನಲ್ಲೇ ವಿಲಿಯಮ್ಸನ್ ತನ್ನ ನಿವೃತ್ತಿಯನ್ನು ಘೋಷಿಸಿಕೊಂಡಿದ್ದಾರೆ.

ಹೀಗಾಗಿ ಫೆಬ್ರವರಿಯಲ್ಲಿ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನಲ್ಲಿ ನ್ಯೂಝಿಲೆಂಡ್ ಪರ ಕೇನ್ ವಿಲಿಯಮ್ಸನ್ ಕಾಣಿಸಿಕೊಳ್ಳುವುದಿಲ್ಲ. ಇದಾಗ್ಯೂ ಅವರು ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ.

ಕಳೆದ 15 ವರ್ಷಗಳಿಂದ ನ್ಯೂಝಿಲೆಂಡ್ ಪರ ಕಣಕ್ಕಿಳಿಯುತ್ತಿದ್ದೇನೆ. ಇನ್ನು ಕುಟುಂಬದೊಂದಿಗೆ ಸ್ವಲ್ಪ ಸಮಯ ಕಳೆಯಬೇಕಿದೆ. ಹೀಗಾಗಿ ಟಿ20 ಕ್ರಿಕೆಟ್ನಿಂದ ನಿವೃತ್ತನಾಗಲು ನಿರ್ಧರಿಸಿದ್ದೇನೆ. ಅಲ್ಲದೆ ಟೆಸ್ಟ್ ಕ್ರಿಕೆಟ್ನಲ್ಲಿ ಒಂದಷ್ಟು ಕಾಲ ಮುಂದುವರೆಯುವ ಇರಾದೆಯಲ್ಲಿರುವುದಾಗಿ ಕೇನ್ ವಿಲಿಯಮ್ಸನ್ ತಿಳಿಸಿದ್ದಾರೆ.

ಕೇನ್ ವಿಲಿಯಮ್ಸನ್ ಕೊನೆಯ ಬಾರಿಗೆ ನ್ಯೂಝಿಲೆಂಡ್ ಪರ ಟಿ20 ಪಂದ್ಯವಾಡಿದ್ದು 2024ರ ಟಿ20 ವಿಶ್ವಕಪ್ನಲ್ಲಿ. ಆ ಬಳಿಕ ಗಾಯಗೊಂಡಿದ್ದ ಅವರು ಯಾವುದೇ ಸರಣಿಯಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಸಂಪೂರ್ಣ ಫಿಟ್ನೆಸ್ನೊಂದಿಗೆ ತಂಡಕ್ಕೆ ಮರಳಿರುವ ಅವರು ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ.

ಇನ್ನು ನ್ಯೂಝಿಲೆಂಡ್ ಪರ 93 ಟಿ20 ಪಂದ್ಯಗಳನ್ನಾಡಿರುವ ಕೇನ್ ವಿಲಿಯಮ್ಸನ್ 90 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 18 ಅರ್ಧಶತಕಗಳೊಂದಿಗೆ ಒಟ್ಟು 2575 ರನ್ ಕಲೆಹಾಕಿದ್ದಾರೆ. ಇದರ ನಡುವೆ ವಿಲಿಯಮ್ಸನ್ ಬ್ಯಾಟ್ನಿಂದ 58 ಸಿಕ್ಸ್ ಹಾಗೂ 245 ಫೋರ್ಗಳು ಮೂಡಿಬಂದಿದ್ದವು. ಇದೀಗ ತಮ್ಮ 35ನೇ ವಯಸ್ಸಿನಲ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಗುಡ್ ಬೈ ಹೇಳಿದ್ದಾರೆ.
Published On - 8:23 am, Sun, 2 November 25




