AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kane Williamson: ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೇನ್ ವಿಲಿಯಮ್ಸನ್

Kane Williamson Records: ಸೌತ್ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದ ಎರಡು ಇನಿಂಗ್ಸ್​ಗಳಲ್ಲೂ ಭರ್ಜರಿ ಶತಕಗಳನ್ನು ಸಿಡಿಸಿದ ನ್ಯೂಝಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ...

TV9 Web
| Edited By: |

Updated on: Feb 06, 2024 | 12:24 PM

Share
ನ್ಯೂಝಿಲೆಂಡ್​ನ ಮೌಂಟ್ ಮೌಂಗನುಯಿ ಬೇ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ (Kane Williamson) ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿ ಅಬ್ಬರಿಸಿದ್ದಾರೆ. ಮೊದಲ ಇನಿಂಗ್ಸ್​ನಲ್ಲಿ 289 ಎಸೆತಗಳಲ್ಲಿ 16 ಫೋರ್​ಗಳೊಂದಿಗೆ 118 ರನ್ ಬಾರಿಸಿದ್ದ ನ್ಯೂಝಿಲೆಂಡ್ ನಾಯಕ ಇದೀಗ ದ್ವಿತೀಯ ಇನಿಂಗ್ಸ್​ನಲ್ಲೂ ಮೂರಂಕಿ ಮೊತ್ತ ಕಲೆಹಾಕಿದ್ದಾರೆ.

1 / 7
ದ್ವಿತೀಯ ಇನಿಂಗ್ಸ್​ನಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿಲಿಯಮ್ಸನ್ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು. ಅದರಂತೆ ಸೌತ್ ಆಫ್ರಿಕಾ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ಕೇನ್ 132 ಎಸೆತಗಳಲ್ಲಿ 1 ಭರ್ಜರಿ ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ 109 ರನ್ ಬಾರಿಸಿದ್ದರು.

2 / 7
ಇದರೊಂದಿಗೆ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್​ಗಳಲ್ಲೂ ಶತಕ ಬಾರಿಸಿದ ನ್ಯೂಝಿಲೆಂಡ್​ನ 5ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಷ್ಟೇ ಅಲ್ಲದೆ ಪ್ರಸ್ತುತ ಟೆಸ್ಟ್ ಆಟಗಾರರಲ್ಲಿ ಅತ್ಯಧಿಕ ಶತಕ ಸಿಡಿಸಿದ ಬ್ಯಾಟ್ಸ್​ಮನ್ ಪಟ್ಟಿಯಲ್ಲೂ ವಿಲಿಯಮ್ಸನ್ ದ್ವಿತೀಯ ಸ್ಥಾನಕ್ಕೇರಿದ್ದಾರೆ.

3 / 7
ಸದ್ಯ ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಅಗ್ರಸ್ಥಾನದಲ್ಲಿದ್ದಾರೆ. ಸ್ಮಿತ್ 107 ಟೆಸ್ಟ್ ಪಂದ್ಯಗಳಿಂದ ಒಟ್ಟು 32 ಶತಕ ಬಾರಿಸಿ ಅತೀ ಹೆಚ್ಚು ಸೆಂಚುರಿ ಸಿಡಿಸಿದ ಸಕ್ರೀಯ ಬ್ಯಾಟರ್​ಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದ್ದಾರೆ.

4 / 7
ಇದೀಗ 97 ಟೆಸ್ಟ್ ಪಂದ್ಯಗಳಲ್ಲಿ 31 ಶತಕಗಳನ್ನು ಪೂರೈಸಿರುವ ಕೇನ್ ವಿಲಿಯಮ್ಸನ್ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಮೂರನೇ ಸ್ಥಾನದಲ್ಲಿ ಜೋ ರೂಟ್ (30 ಶತಕಗಳು) ಇದ್ದರೆ, ನಾಲ್ಕನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ (29 ಶತಕಗಳು) ಕಾಣಿಸಿಕೊಂಡಿದ್ದಾರೆ.

5 / 7
ಬೃಹತ್ ಮೊತ್ತ ಕಲೆಹಾಕಿದ ನ್ಯೂಝಿಲೆಂಡ್: ಸೌತ್ ಆಫ್ರಿಕಾ ವಿರುದ್ಧದ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಕೇನ್ ವಿಲಿಯಮ್ಸನ್ (118) ಶತಕ ಬಾರಿಸಿದರೆ, ರಚಿನ್ ರವೀಂದ್ರ (240) ದ್ವಿಶತಕ ಸಿಡಿಸಿದ್ದರು. ಈ ಮೂಲಕ ನ್ಯೂಝಿಲೆಂಡ್ ಮೊದಲ ಇನಿಂಗ್ಸ್​ನಲ್ಲಿ 511 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಸೌತ್ ಆಫ್ರಿಕಾ ತಂಡವು 162 ರನ್​ಗಳಿಗೆ ಆಲೌಟ್ ಆಗಿದೆ.

6 / 7
ಇನ್ನು ದ್ವಿತೀಯ ಇನಿಂಗ್ಸ್ ಶುರು ಮಾಡಿರುವ ನ್ಯೂಝಿಲೆಂಡ್ ಪರ ನಾಯಕ ಕೇನ್ ವಿಲಿಯಮ್ಸನ್ (109) ಭರ್ಜರಿ ಶತಕ ಸಿಡಿಸಿದ್ದಾರೆ. ಈ ಮೂಲಕ ದ್ವಿತೀಯ ಇನಿಂಗ್ಸ್​ನಲ್ಲಿ 4 ವಿಕೆಟ್ ನಷ್ಟಕ್ಕೆ 179 ರನ್ ಕಲೆಹಾಕಿ ನ್ಯೂಝಿಲೆಂಡ್ ಡಿಕ್ಲೇರ್ ಘೋಷಿಸಿದೆ. ಅದರಂತೆ ಇದೀಗ 529 ರನ್​ಗಳ ಗುರಿ ಪಡೆದಿರುವ ಸೌತ್ ಆಫ್ರಿಕಾ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 52 ಓವರ್​ಗಳ ಮುಕ್ತಾಯದ ವೇಳೆಗೆ 4 ವಿಕೆಟ್ ಕಳೆದುಕೊಂಡು 143 ರನ್​ ಕಲೆಹಾಕಿದೆ.

7 / 7
TV9 Web
TV9 Web

TV9 Kannada

Read More
Follow Us
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!

ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!