AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಕೊಹ್ಲಿ 2 ಶತಕ ಬಾರಿಸುವಷ್ಟರಲ್ಲಿ, 8 ಸೆಂಚುರಿ ಸಿಡಿಸಿದ ಕೇನ್

Kane Williamson: ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಕ್ ಟು ಬ್ಯಾಕ್ ಶತಕ ಬಾರಿಸುವ ಮೂಲಕ ಕೇನ್ ವಿಲಿಯಮ್ಸನ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದರಲ್ಲೂ ಕ್ರಿಕೆಟ್ ಅಂಗಳದ ಶತಕಗಳ ಸರದಾರ ಎನಿಸಿಕೊಂಡಿರುವ ವಿರಾಟ್ ಕೊಹ್ಲಿಯನ್ನು (Virat Kohli) ಸೆಂಚುರಿಗಳ ವಿಷಯದಲ್ಲಿ ಹಿಂದಿಕ್ಕಿದ್ದಾರೆ.

TV9 Web
| Edited By: |

Updated on: Feb 07, 2024 | 2:31 PM

Share
ಶತಕಗಳ ಸರದಾರ ವಿರಾಟ್ ಕೊಹ್ಲಿ (Virat Kohli) 2 ಶತಕ ಬಾರಿಸುವಷ್ಟರಲ್ಲಿ ನ್ಯೂಝಿಲೆಂಡ್​ನ ಕೇನ್ ವಿಲಿಯಮ್ಸನ್ (Kane Williamson) 8 ಸೆಂಚುರಿಗಳನ್ನು ಪೂರೈಸಿದ್ದಾರೆ. ಅಚ್ಚರಿ ಎನಿಸಿದರೂ ಇದು ನಿಜ. ಕಳೆದ ಮೂರು ವರ್ಷಗಳಿಂದ ಟೆಸ್ಟ್ ಕ್ರಿಕೆಟ್​ನಲ್ಲಿ ವಿಲಿಯಮ್ಸನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ.

1 / 5
2021 ರಲ್ಲಿ ಟೆಸ್ಟ್​ ಶತಕಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಗಿಂತ ಕೇನ್ ವಿಲಿಯಮ್ಸನ್ ಹಿಂದಿದ್ದರು. ಕೊಹ್ಲಿ 27 ಶತಕಗಳೊಂದಿಗೆ ಫ್ಯಾಬ್-4 ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿದ್ದರೆ, ಕೇನ್ ವಿಲಿಯಮ್ಸನ್ ಕೇವಲ 23 ಶತಕಗಳನ್ನು ಹೊಂದಿದ್ದರು.

2 / 5
ಆದರೆ ಇದೀಗ ಕೇನ್ ವಿಲಿಯಮ್ಸನ್ ಅವರ ಒಟ್ಟು ಟೆಸ್ಟ್ ಶತಕಗಳ ಸಂಖ್ಯೆ 31 ಕ್ಕೇರಿದೆ. ಅತ್ತ ವಿರಾಟ್ ಕೊಹ್ಲಿ 29 ಶತಕಗಳಲ್ಲೇ ಉಳಿದಿದ್ದಾರೆ. ಅಂದರೆ ಕಳೆದ ಮೂರು ವರ್ಷಗಳಲ್ಲಿ ವಿರಾಟ್ ಕೊಹ್ಲಿ ಟೆಸ್ಟ್​ನಲ್ಲಿ 2 ಸೆಂಚುರಿಗಳನ್ನು ಮಾತ್ರ ಬಾರಿಸಿದ್ದಾರೆ. ಇತ್ತ ಇದೇ ಅವಧಿಯಲ್ಲಿ ಕೇನ್ ವಿಲಿಯಮ್ಸನ್ ಬರೋಬ್ಬರಿ 8 ಶತಕ ಸಿಡಿಸಿ ಮುನ್ನುಗ್ಗಿದ್ದಾರೆ.

3 / 5
ಇನ್ನು ಫ್ಯಾಬ್-4 ಪಟ್ಟಿಯಲ್ಲಿ 32 ಶತಕಗಳನ್ನು ಬಾರಿಸಿರುವ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಅಗ್ರಸ್ಥಾನದಲ್ಲಿದ್ದಾರೆ. ಇನ್ನು ದ್ವಿತೀಯ ಸ್ಥಾನದಲ್ಲಿ ಕೇನ್ ವಿಲಿಯಮ್ಸನ್ (31) ಇದ್ದು, ತೃತೀಯ ಸ್ಥಾನದಲ್ಲಿ ಇಂಗ್ಲೆಂಡ್ ಜೋ ರೂಟ್ (30) ಇದ್ದಾರೆ. ಹಾಗೆಯೇ 29 ಶತಕಗಳೊಂದಿಗೆ ವಿರಾಟ್ ಕೊಹ್ಲಿ ಫ್ಯಾಬ್​-4 ನಲ್ಲಿ ನಾಲ್ಕನೇ ಸ್ಥಾನದಲ್ಲೇ ಉಳಿದಿದ್ದಾರೆ.

4 / 5
ಸದ್ಯ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೂಲಕ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ. ಈ ರಿಎಂಟ್ರಿಯೊಂದಿಗೆ ಭರ್ಜರಿ ಸೆಂಚುರಿ ಸಿಡಿಸಿದರೆ ಟೆಸ್ಟ್​ ಕ್ರಿಕೆಟ್​ನಲ್ಲಿ 30 ಶತಕಗಳನ್ನು ಬಾರಿಸಿದ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಲಿದ್ದಾರೆ.

5 / 5
Web contact
Web contact

TV9 Kannada

Read More
Follow Us
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ

ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ

‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು

17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ

ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ

RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ

ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!