Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ ಕೇನ್ ವಿಲಿಯಮ್ಸನ್

New Zealand vs England, 3rd Test: ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ನ್ಯೂಝಿಲೆಂಡ್ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಕೇನ್ ವಿಲಿಯಮ್ಸನ್ ಶತಕ ಸಿಡಿಸಿದ್ದು, ಈ ಸೆಂಚುರಿ ನೆರವಿನಿಂದ ನ್ಯೂಝಿಲೆಂಡ್ ತಂಡವು 400 ಕ್ಕೂ ಅಧಿಕ ರನ್ ಕಲೆಹಾಕಿ ಬ್ಯಾಟಿಂಗ್ ಮುಂದುವರೆಸಿದೆ.

ಝಾಹಿರ್ ಯೂಸುಫ್
|

Updated on: Dec 16, 2024 | 10:54 AM

147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಕೇನ್ ವಿಲಿಯಮ್ಸನ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಇಂಗ್ಲೆಂಡ್ ವಿರುದ್ಧ ಅತ್ಯಾಕರ್ಷಕ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ. ಹ್ಯಾಮಿಲ್ಟನ್​ ಸೆಡನ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ವಿಲಿಯಮ್ಸನ್ ಭರ್ಜರಿ ಶತಕ ಬಾರಿಸಿದ್ದಾರೆ.

1 / 5
ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿಲಿಯಮ್ಸನ್ 204 ಎಸೆತಗಳನ್ನು ಎದುರಿಸಿದರು. ಈ ವೇಳೆ 1 ಸಿಕ್ಸ್ ಹಾಗೂ 20 ಫೋರ್​ಗಳೊಂದಿಗೆ 156 ರನ್ ಬಾರಿಸಿ ಮಿಂಚಿದರು. ಈ ಭರ್ಜರಿ ಶತಕದೊಂದಿಗೆ ಕೇನ್ ವಿಲಿಯಮ್ಸನ್ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

2 / 5
ಹೌದು, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಮೈದಾನದಲ್ಲಿ ಸತತ 5 ಶತಕ ಸಿಡಿಸಿದ ವಿಶೇಷ ದಾಖಲೆಯೊಂದು ಕೇನ್ ವಿಲಿಯಮ್ಸನ್ ಪಾಲಾಗಿದೆ. ನ್ಯೂಝಿಲೆಂಡ್​ನ ಸೆಡನ್ ಪಾರ್ಕ್ ಮೈದಾನದಲ್ಲಿ ಆಡಿದ ಕಳೆದ 5 ಪಂದ್ಯಗಳಲ್ಲೂ ವಿಲಿಯಮ್ಸನ್ ಬ್ಯಾಟ್​ನಿಂದ ಸೆಂಚುರಿ ಮೂಡಿಬಂದಿವೆ.

3 / 5
2019 ರಲ್ಲಿ ಬಾಂಗ್ಲಾದೇಶ್ ವಿರುದ್ಧ ಈ ಮೈದಾನದಲ್ಲಿ ಆಡಿದ ಟೆಸ್ಟ್​ ಪಂದ್ಯದಲ್ಲಿ ವಿಲಿಯಮ್ಸನ್ 200 ರನ್ ಬಾರಿಸಿದ್ದರು. ಆ ಬಳಿಕ 2019 ರಲ್ಲೇ ಇದೇ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ 104 ರನ್ ಸಿಡಿಸಿದ್ದರು. ಇನ್ನು 2020 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 251 ರನ್ ಬಾರಿಸಿ ಮಿಂಚಿದ್ದರು.

4 / 5
ಇನ್ನು 2024 ರಲ್ಲಿ ಸೆಡನ್ ಪಾರ್ಕ್​ ಮೈದಾನದಲ್ಲಿ ಸೌತ್ ಆಫ್ರಿಕಾ ವಿರುದ್ಧ 133 ಬಾರಿಸಿದ್ದ ಕೇನ್ ವಿಲಿಯಮ್ಸನ್, ಇದೀಗ ಇಂಗ್ಲೆಂಡ್ ವಿರುದ್ಧ 156 ರನ್ ಸಿಡಿಸಿದ್ದಾರೆ. ಈ ಮೂಲಕ ಒಂದೇ ಮೈದಾನದಲ್ಲಿ ಸತತ 5 ಶತಕ ಸಿಡಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಕೇನ್ ವಿಲಿಯಮ್ಸನ್ ತಮ್ಮದಾಗಿಸಿಕೊಂಡಿದ್ದಾರೆ.

5 / 5
Follow us
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ

ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ

ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ

ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ

ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್

ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ

ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ