- Kannada News Photo gallery Cricket photos Kannada Cricket News - CSA T20 League: Buttler, Miller, McCoy, Bosch sign up for Paarl Royals
CSA T20: ರಾಯಲ್ಸ್ ತಂಡದ ಆಯ್ಕೆ: ಒಂದೇ ತಂಡದಲ್ಲಿ ಬಟ್ಲರ್, ಮಿಲ್ಲರ್..!
Paarl Royals: ಪ್ರತಿ ತಂಡವು 10 ದಕ್ಷಿಣ ಆಫ್ರಿಕಾ ಮತ್ತು 7 ವಿದೇಶಿ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಬಹುದು. ಹಾಗೆಯೇ ಪ್ಲೇಯಿಂಗ್ ಇಲೆವೆನ್ನಲ್ಲಿ 7 ಸೌತ್ ಆಫ್ರಿಕಾದ ಆಟಗಾರರಿಗೆ ಮತ್ತು 4 ವಿದೇಶಿ ಆಟಗಾರರಿಗೆ ಅವಕಾಶ ಇರಲಿದೆ.
Updated on: Aug 13, 2022 | 1:31 PM

ಸೌತ್ ಆಫ್ರಿಕಾ ಟಿ20 ಲೀಗ್‌ನಲ್ಲಿ ಪಾರ್ಲ್ ರಾಯಲ್ಸ್ ತಂಡವನ್ನು ಹೊಂದಿರುವ ರಾಜಸ್ಥಾನ್ ರಾಯಲ್ಸ್ ತಂಡವು ಇದೀಗ 4 ಆಟಗಾರರನ್ನು ಆಯ್ಕೆ ಮಾಡಿದೆ. ಹರಾಜಿಗೂ ಮುನ್ನ ಒಟ್ಟು 5 ಆಟಗಾರರನ್ನು ಆಯ್ಕೆ ಮಾಡುವ ಅವಕಾಶವಿದ್ದು, ಅದರಂತೆ ರಾಯಲ್ಸ್ ತಂಡವು ನಾಲ್ವರನ್ನು ಫೈನಲ್ ಮಾಡಿದೆ.

ವಿಶೇಷ ಎಂದರೆ ಐಪಿಎಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಜೋಸ್ ಬಟ್ಲರ್ ಇಲ್ಲೂ ಕೂಡ ಆಯ್ಕೆಯಾಗಿದ್ದಾರೆ. ಹಾಗೆಯೇ ಮಾಜಿ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ಸೌತ್ ಆಫ್ರಿಕಾದ ಡೇವಿಡ್ ಮಿಲ್ಲರ್ ಕೂಡ ಸ್ಥಾನ ಪಡೆದಿದ್ದಾರೆ. ಅದರಂತೆ ಪಾರ್ಲ್ ರಾಯಲ್ಸ್ ತಂಡಕ್ಕೆ ಆಯ್ಕೆಯಾಗಿರುವ ನಾಲ್ಕು ಆಟಗಾರರ ಪರಿಚಯ ಇಲ್ಲಿದೆ.,..

ಜೋಸ್ ಬಟ್ಲರ್ (ಇಂಗ್ಲೆಂಡ್)

ಡೇವಿಡ್ ಮಿಲ್ಲರ್ (ಸೌತ್ ಆಫ್ರಿಕಾ)

ಕಾರ್ಬಿನ್ ಬಾಷ್ (ಸೌತ್ ಆಫ್ರಿಕಾ)

ಒಬೆಡ್ ಮೆಕಾಯ್ (ವೆಸ್ಟ್ ಇಂಡೀಸ್)

ಸೌತ್ ಆಫ್ರಿಕಾ ಟಿ20 ಲೀಗ್‌ನಲ್ಲಿ ಹರಾಜಿಗೂ ಮುನ್ನ ಪ್ರತಿ ತಂಡವು ಗರಿಷ್ಠ 5 ಆಟಗಾರರನ್ನು ಆಯ್ಕೆ ಮಾಡಿಕೊಳ್ಳಬಹುದು. ಈ ಆಯ್ಕೆಯ ಬಳಿಕ ಉಳಿದ ಆಟಗಾರರನ್ನು ಹರಾಜಿನ ಮೂಲಕ ಖರೀದಿಸಬೇಕಾಗುತ್ತದೆ. ಇಲ್ಲಿ ಪ್ರತಿ ತಂಡವು 10 ದಕ್ಷಿಣ ಆಫ್ರಿಕಾ ಮತ್ತು 7 ವಿದೇಶಿ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಬಹುದು. ಹಾಗೆಯೇ ಪ್ಲೇಯಿಂಗ್ ಇಲೆವೆನ್ನಲ್ಲಿ 7 ಸೌತ್ ಆಫ್ರಿಕಾದ ಆಟಗಾರರಿಗೆ ಮತ್ತು 4 ವಿದೇಶಿ ಆಟಗಾರರಿಗೆ ಅವಕಾಶ ಇರಲಿದೆ.
