AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಏಕೈಕ ಕನ್ನಡಿಗ ಹರಾಜು: ಕರ್ನಾಟಕದ 11 ಆಟಗಾರರು ಅನ್​ಸೋಲ್ಡ್​

IPL 2026 Unsold Players List: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ಕ್ಕಾಗಿ ನಡೆದ ಮಿನಿ ಹರಾಜಿನಲ್ಲಿ ಬರೋಬ್ಬರಿ 292 ಆಟಗಾರರು ಅನ್​ಸೋಲ್ಡ್ ಆಗಿದ್ದಾರೆ. ಅಂದರೆ 369 ಆಟಗಾರರಲ್ಲಿ 10 ಫ್ರಾಂಚೈಸಿಗಳು 77 ಆಟಗಾರರನ್ನು ಖರೀದಿಸಿದ್ದಾರೆ. ಇನ್ನು ಅನ್​ಸೋಲ್ಡ್ ಆದ ಆಟಗಾರರ ಪಟ್ಟಿಯಲ್ಲಿ ಕರ್ನಾಟಕದ 11 ಆಟಗಾರರು ಕೂಡ ಇದ್ದಾರೆ. 

ಝಾಹಿರ್ ಯೂಸುಫ್
|

Updated on: Dec 17, 2025 | 2:24 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಮಿನಿ ಹರಾಜಿನಲ್ಲಿ ಕಾಣಿಸಿಕೊಂಡ ಕರ್ನಾಟಕದ ಆಟಗಾರರಲ್ಲಿ ಏಕೈಕ ಪ್ಲೇಯರ್ ಮಾತ್ರ ಬಿಕರಿಯಾಗಿದ್ದಾರೆ. ಇನ್ನುಳಿದ ಹನ್ನೊಂದು ಆಟಗಾರರ ಖರೀದಿಗೆ ಯಾವುದೇ ಫ್ರಾಂಚೈಸಿ ಆಸಕ್ತಿ ತೋರಿಲ್ಲ ಎಂಬುದೇ ಅಚ್ಚರಿ. ಅದರಂತೆ ಈ ಬಾರಿ ಸೋಲ್ಡ್-ಅನ್​ಸೋಲ್ಡ್​ ಆದ ಕರ್ನಾಟಕದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 13
ಪ್ರವೀಣ್ ದುಬೆ: ಕರ್ನಾಟಕದ ಅನುಭವಿ ಸ್ಪಿನ್ನರ್ ಪ್ರವೀಣ್ ದುಬೆ ಈ ಬಾರಿಯ ಹರಾಜಿನಲ್ಲಿ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು. ಮೊದಲ ಸುತ್ತಿನಲ್ಲಿ ಪ್ರವೀಣ್ ಅವರ ಖರೀದಿಗೆ ಯಾವುದೇ ಫ್ರಾಂಚೈಸಿ ಮುಂದೆ ಬಂದಿರಲಿಲ್ಲ. ಇದಾಗ್ಯೂ ಅಂತಿಮ ಸುತ್ತಿನಲ್ಲಿ ಪಂಜಾಬ್ ಕಿಂಗ್ಸ್ ಪ್ರವೀಣ್ ದುಬೆಯನ್ನು 30 ಲಕ್ಷ ರೂ.ಗೆ ಖರೀದಿಸಿದೆ.

2 / 13
ಮಯಾಂಕ್ ಅಗರ್ವಾಲ್: ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಈ ಬಾರಿ ಅನ್​ಸೋಲ್ಡ್ ಆಗಿ ಉಳಿದಿದ್ದಾರೆ. ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಮಯಾಂಕ್ ಈ ಬಾರಿ 75 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು. ಇದಾಗ್ಯೂ ಅವರ ಖರೀದಿಗೆ ಯಾವುದೇ ಫ್ರಾಂಚೈಸಿ ಆಸಕ್ತಿ ತೋರಲಿಲ್ಲ.

3 / 13
ಅಭಿನವ್ ಮನೋಹರ್: ಕರ್ನಾಟಕ ಟಿ20 ತಂಡದ ಸ್ಫೋಟಕ ದಾಂಡಿಗ ಅಭಿನವ್ ಮನೋಹರ್ ಅವರ ಖರೀದಿಗೂ ಯಾವುದೇ ಫ್ರಾಂಚೈಸಿ ಮುಮದಾಗಿಲ್ಲ. ಕಳೆದ ಸೀಸನ್​ನಲ್ಲಿ ಎಸ್​ಆರ್​ಹೆಚ್ ಪರ ಬ್ಯಾಟ್ ಬೀಸಿದ್ದ ಅಭಿನವ್ ಅವರು ಈ ಬಾರಿ 30 ಲಕ್ಷ ರೂ. ಮೂಲ ಬೆಲೆ ಘೋಷಿಸಿದರೂ ಬಿಕರಿಯಾಗದೇ ಉಳಿದರು.

4 / 13
ವಿದ್ವತ್ ಕಾವೇರಪ್ಪ: ಕರ್ನಾಟಕದ ವೇಗಿ ವಿದ್ವತ್ ಕಾವೇರಪ್ಪ ಈ ಹಿಂದೆ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದರು. ಈ ಬಾರಿ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡರೂ ಕಾವೇರಪ್ಪನ ಖರೀದಿಗೆ ಯಾವುದೇ ಫ್ರಾಂಚೈಸಿ ಆಸಕ್ತಿ ತೋರಲಿಲ್ಲ.

5 / 13
ಕೆ.ಸಿ ಕಾರ್ಯಪ್ಪ: ಕೆಕೆಆರ್, ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿದಿದ್ದ ಕರ್ನಾಟಕದ ಸ್ಪಿನ್ನರ್ ಕೆ.ಸಿ ಕಾರ್ಯಪ್ಪ ಈ ಬಾರಿ ಕೇವಲ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಮಾತ್ರ ಕಾಣಿಸಿಕೊಂಡಿದ್ದರು. ಇದಾಗ್ಯೂ ಅನುಭವಿ ಸ್ಪಿನ್ನರ್​ಗೆ ಖರೀದಿಗೆ 10 ಫ್ರಾಂಚೈಸಿಗಳು ಆಸಕ್ತಿ ತೋರಲಿಲ್ಲ.

6 / 13
ಮನೋಜ್ ಭಾಂಡಗೆ: ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದ ಯುವ ಆಲ್​ರೌಂಡರ್ ಮನೋಜ್ ಭಾಂಡಗೆ ಅವರು ಈ ಬಾರಿ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿದ್ದರು. ಇದಾಗ್ಯೂ ಅವರ ಖರೀದಿಗೆ ಯಾವುದೇ ಫ್ರಾಂಚೈಸಿ ಮುಂದೆ ಬರಲಿಲ್ಲ.

7 / 13
ಜಗದೀಶ್ ಸುಚಿತ್: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮುಂಬೈ ಇಂಡಿಯನ್ಸ್, ಸನ್​ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳದಿದ್ದ ಅನುಭವಿ ಆಲ್​ರೌಂಡರ್ ಜಗದೀಶ್ ಸುಚಿತ್ ಅವರು ಸಹ ಈ ಬಾರಿ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು. ಇದಾಗ್ಯೂ ಅವರು ಅನ್​ಸೋಲ್ಡ್ ಆಗಿ ಉಳಿದಿದ್ದಾರೆ.

8 / 13
ಕೆಎಲ್ ಶ್ರೀಜಿತ್: ಐಪಿಎಲ್ 2025 ರಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಯ್ಕೆಯಾಗಿದ್ದ ಕರ್ನಾಟಕದ ವಿಕೆಟ್ ಕೀಪರ್ ಬ್ಯಾಟರ್ ಕೆಎಲ್ ಶ್ರೀಜಿತ್ 30 ಲಕ್ಷ ರೂ. ಮೂಲ ಬೆಲೆಯ ಪಟ್ಟಿಯಲ್ಲಿ ಕಾಣಿಸಿಕೊಂಡರೂ, ಅವರ ಖರೀದಿಗೆ ಯಾವುದೇ ಫ್ರಾಂಚೈಸಿ ಮುಂದೆ ಬಂದಿರಲಿಲ್ಲ.

9 / 13
ವಿದ್ಯಾಧರ ಪಾಟೀಲ್: ಕರ್ನಾಟಕದ  ವೇಗಿ ವಿದ್ಯಾಧರ ಪಾಟೀಲ್ ಕೂಡ ಈ ಬಾರಿ ಅನ್​ಸೋಲ್ಡ್ ಆಗಿದ್ದಾರೆ. 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಆಕ್ಷನ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದ ವಿದ್ಯಾಧರ್ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದೆ ಬರಲಿಲ್ಲ.

10 / 13
ಅಭಿಲಾಷ್ ಶೆಟ್ಟಿ: ಕರ್ನಾಟಕದ ಯುವ ವೇಗಿ ಅಭಿಲಾಷ್ ಶೆಟ್ಟಿ ಕೂಡ  ಬಿಕರಿಯಾಗದೇ ಉಳಿದಿದ್ದಾರೆ. ಕೇವಲ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಅಭಿಲಾಷ್ ಅವರ ಖರೀದಿಗಾಗಿ ಯಾವುದೇ ಫ್ರಾಂಚೈಸಿ ಆಸಕ್ತಿ ತೋರಲಿಲ್ಲ.

11 / 13
ಶ್ರೀವತ್ಸ ಆಚಾರ್ಯ: ಕರ್ನಾಟಕದ ಯುವ ಆಲ್​ರೌಂಡರ್ ಶ್ರೀವತ್ಸ ಆಚಾರ್ಯ ಕೂಡ ಈ ಬಾರಿಯ ಹರಾಜು ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದರು. 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದ ಶ್ರೀವತ್ಸ ಅವರ ಖರೀದಿಗೆ ಯಾವುದೇ ಫ್ರಾಂಚೈಸಿ ಮುಂದಾಗಲಿಲ್ಲ.

12 / 13
ಮ್ಯಾಕ್ನಿಲ್ ನೊರೊನ್ಹಾ: ಕರ್ನಾಟಕದ ಸ್ಫೋಟಕ ದಾಂಡಿಗ ಮ್ಯಾಕ್ನಿಲ್ ನೊರೊನ್ಹಾ ಅವರು ಸಹ ಅನ್​ಸೋಲ್ಡ್ ಆಗಿ ಉಳಿದಿದ್ದಾರೆ. 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ನೊರೊನ್ಹಾ ಅವರ ಖರೀದಿಗೆ 10 ಫ್ರಾಂಚೈಸಿಗಳು ನಿರಾಸಕ್ತಿ ತೋರಿದ್ದಾರೆ.

13 / 13
Follow Us
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!

ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ

‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು

ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ

28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ

ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು

ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ

ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್

ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ