AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ಫೋರ್ ಹಾಗೂ 2 ಭರ್ಜರಿ ಸಿಕ್ಸ್: ಸ್ಫೋಟಕ ಸೆಂಚುರಿ ಸಿಡಿಸಿದ ಕರುಣ್ ನಾಯರ್

Karun Nair Century: ಗೋವಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕೆಎಸ್​ಸಿಎ ಸೆಕ್ರೆಟರಿ ಇಲೆವೆನ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಹಿರಿಯ ಆಟಗಾರ ಕರುಣ್ ನಾಯರ್. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗೋವಾ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 338 ರನ್ ಕಲೆಹಾಕಿದ್ದರು. ಇದಕ್ಕುತ್ತರವಾಗಿ ಕೆಎಸ್​ಸಿಎ ಸೆಕ್ರೆಟರಿ ಇಲೆವೆನ್ 276 ರನ್​ಗಳಿಸಿದ್ದರು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಗೋವಾ ತಂಡವನ್ನು 202 ರನ್​ಗಳಿಗೆ ಆಲೌಟ್ ಮಾಡಿದ ಕೆಎಸ್​ಸಿಎ ಸೆಕ್ರೆಟರಿ ಇಲೆವೆನ್, ಅಂತಿಮ ಇನಿಂಗ್ಸ್​ನಲ್ಲಿ 266 ರನ್​ ಬಾರಿಸಿ 6 ವಿಕೆಟ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Sep 25, 2025 | 8:23 AM

Share
ಟೀಮ್ ಇಂಡಿಯಾ ಆಟಗಾರ ಕರುಣ್ ನಾಯರ್ (Karun Nair)  ಮತ್ತೆ ಫಾರ್ಮ್​ಗೆ ಮರಳಿದ್ದಾರೆ. ಅದು ಸಹ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ. ಬೆಂಗಳೂರಿನ ಆಲೂರಿನಲ್ಲಿ ನಡೆದ ಕೆ. ತಿಮ್ಮಪ್ಪ ಸ್ಮಾರಕ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರುಣ್ ಆಜೇಯ ಶತಕ ಬಾರಿಸಿ ಮಿಂಚಿದ್ದಾರೆ.

1 / 5
ಗೋವಾ ತಂಡದ ವಿರುದ್ಧದ ಈ ಪಂದ್ಯದಲ್ಲಿ ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ ಸೆಕ್ರೆಟರಿ ಇಲೆವೆನ್ ಪರ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕರುಣ್ ನಾಯರ್ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಭರ್ಜರಿ ಬ್ಯಾಟಿಂಗ್​ನೊಂದಿಗೆ ಶತಕವನ್ನು ಸಹ ಪೂರೈಸಿದರು.

2 / 5
ಅಲ್ಲದೆ ಈ ಪಂದ್ಯದಲ್ಲಿ 169 ಎಸೆತಗಳನ್ನು ಎದುರಿಸಿದ ಕರುಣ್ 12 ಫೋರ್ ಹಾಗೂ 2 ಸಿಕ್ಸ್​ಗಳೊಂದಿಗೆ ಅಜೇಯ 151 ರನ್ ಬಾರಿಸಿದ್ದಾರೆ. ಈ ಮೂಲಕ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೂ ಮುನ್ನ ತಮ್ಮ ಫಾರ್ಮ್ ಅನ್ನು ತೆರೆದಿಟ್ಟಿದ್ದಾರೆ. ಅಂದರೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಇದೇ ವಾರ ಟೀಮ್ ಇಂಡಿಯಾವನ್ನು ಘೋಷಿಸಲಾಗುತ್ತದೆ.

3 / 5
ಭಾರತ ಟೆಸ್ಟ್ ತಂಡದ ಘೋಷಣೆಗೂ ಮುನ್ನ 151 ರನ್​ಗಳ ಭರ್ಜರಿ ಇನಿಂಗ್ಸ್ ಆಡುವ ಮೂಲಕ ಕರುಣ್ ನಾಯರ್ ಆಯ್ಕೆಗಾರರ ಗಮನ ಸೆಳೆದಿದ್ದಾರೆ. ಇದಕ್ಕೂ ಮುನ್ನ ಇಂಗ್ಲೆಂಡ್ ವಿರುದ್ಧದ ನಡೆದ ಸರಣಿಯಲ್ಲಿ 8 ಇನಿಂಗ್ಸ್ ಆಡಿದ್ದ ಕರುಣ್ ಕಲೆಹಾಕಿದ್ದು ಕೇವಲ 205 ರನ್​ಗಳು ಮಾತ್ರ. ಹೀಗಾಗಿಯೇ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಕನ್ನಡಿಗನನ್ನು ಕೈ ಬಿಡಲು ಬಿಸಿಸಿಐ ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ವರದಿಯಾಗಿತ್ತು.

4 / 5
ಇದೀಗ ಭರ್ಜರಿ ಶತಕದೊಂದಿಗೆ ಕರುಣ್ ನಾಯರ್ ಮತ್ತೆ ಮಿಂಚಿದ್ದಾರೆ. ಅದು ಸಹ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಭಾರತ ತಂಡದ ಆಯ್ಕೆಗೂ ಮುನ್ನ. ಈ ಭರ್ಜರಿ ಪ್ರದರ್ಶನದ ಫಲವಾಗಿ ವಿಂಡೀಸ್​​ ವಿರುದ್ಧದ ಸರಣಿಯಲ್ಲಿ 33 ವರ್ಷದ ಕರುಣ್ ನಾಯರ್​ಗೆ ಚಾನ್ಸ್ ಸಿಗಲಿದೆಯಾ ಕಾದು ನೋಡಬೇಕಿದೆ.  

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ