AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keshav Maharaj: 64 ವರ್ಷಗಳ ಹಳೆಯ ದಾಖಲೆ ಮುರಿದ ಕೇಶವ್ ಮಹಾರಾಜ್

Keshav Maharaj: ಭಾರತೀಯ ಮೂಲದ ಕೇಶವ್ ಮಹಾರಾಜ್ 2016 ರಿಂದ ಸೌತ್ ಆಫ್ರಿಕಾ ಪರ ಆಡುತ್ತಿದ್ದಾರೆ. ಮೂರು ಸ್ವರೂಪಗಳಲ್ಲೂ ಸೌತ್ ಆಫ್ರಿಕಾ ತಂಡದ ಖಾಯಂ ಸದಸ್ಯರಾಗಿರುವ ಮಹಾರಾಜ್ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 19, 2024 | 10:13 AM

Share
ಗಯಾನಾದ ಪ್ರಾವಿಡೆನ್ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೂಲಕ ಸೌತ್ ಆಫ್ರಿಕಾ ಸ್ಪಿನ್ನರ್ ಕೇಶವ್ ಮಹಾರಾಜ್ (Keshav Maharaj) ಹೊಸ ದಾಖಲೆ ನಿರ್ಮಿಸಿದ್ದಾರೆ. ಅದು ಸಹ 64 ವರ್ಷಗಳ ಹಳೆಯ ರೆಕಾರ್ಡ್ ಅನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಕೇವಲ 8 ರನ್ ನೀಡಿ 2 ವಿಕೆಟ್ ಕಬಳಿಸಿದ್ದ ಕೇಶವ್ ಮಹಾರಾಜ್ ದ್ವಿತೀಯ ಇನಿಂಗ್ಸ್​ನಲ್ಲಿ 3 ವಿಕೆಟ್ ಉರುಳಿಸಿದರು. ಈ ಐದು ವಿಕೆಟ್​ಗಳೊಂದಿಗೆ ಸೌತ್ ಆಫ್ರಿಕಾ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಸ್ಪಿನ್ನರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡರು.

2 / 5
ಇದಕ್ಕೂ ಮುನ್ನ ಈ ದಾಖಲೆ ಹಗ್ ಟೇಫೀಲ್ಡ್ ಹೆಸರಿನಲ್ಲಿತ್ತು. 1949 ರಿಂದ 1960 ರವರೆಗೆ ಸೌತ್ ಆಫ್ರಿಕಾ ಪರ 37 ಟೆಸ್ಟ್ ಪಂದ್ಯಗಳನ್ನಾಡಿದ್ದ ಟೇಫೀಲ್ಡ್ 11116 ಎಸೆತಗಳಲ್ಲಿ 4405 ರನ್ ನೀಡಿ 170 ವಿಕೆಟ್​ಗಳನ್ನು ಕಬಳಿಸಿದ್ದರು. ಇದೀಗ 64 ವರ್ಷಗಳ ಈ ದಾಖಲೆಯನ್ನು ಮುರಿಯುವಲ್ಲಿ ಕೇಶವ್ ಮಹಾರಾಜ್ ಯಶಸ್ವಿಯಾಗಿದ್ದಾರೆ.

3 / 5
ಸೌತ್ ಆಫ್ರಿಕಾ ಪರ 52	ಟೆಸ್ಟ್ ಪಂದ್ಯಗಳನ್ನಾಡಿರುವ ಕೇಶವ್ ಮಹಾರಾಜ್ ಈವರೆಗೆ 10075 ಎಸೆತಗಳನ್ನು ಎಸೆದಿದ್ದಾರೆ. ಇದೇ ವೇಳೆ 5264 ರನ್​ಗಳನ್ನು ನೀಡಿ 171 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಸೌತ್ ಆಫ್ರಿಕಾ ಪರ ಟೆಸ್ಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ಸ್ಪಿನ್ನರ್ ಎಂಬ ದಾಖಲೆ ಬರೆದಿದ್ದಾರೆ.

4 / 5
ಇನ್ನು ಸೌತ್ ಆಫ್ರಿಕಾ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ದಾಖಲೆ ಡೇಲ್ ಸ್ಟೇನ್ ಹೆಸರಿನಲ್ಲಿದೆ. 93 ಟೆಸ್ಟ್ ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಸ್ಟೇನ್ 18608 ಎಸೆತಗಳ ಮೂಲಕ ಒಟ್ಟು 439 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಸೌತ್ ಆಫ್ರಿಕಾದ ಅತ್ಯಂತ ಯಶಸ್ವಿ ಬೌಲರ್​ ಎನಿಸಿಕೊಂಡಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು

ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ

ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು

ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ

ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ

ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?

ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ

1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ

ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ

ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ