AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಣಿ ಗೆದ್ದ ಬಳಿಕ ಜೈ ಶ್ರೀರಾಮ್ ಎಂದ ಸೌತ್ ಆಫ್ರಿಕಾ ಆಟಗಾರ

South Africa vs Sri Lanka: ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಸರಣಿಯನ್ನು ಸೌತ್ ಆಫ್ರಿಕಾ ತಂಡ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಲಂಕಾ ಪಡೆಯನ್ನು 233 ರನ್​​ಗಳಿಂ ಬಗ್ಗು ಬಡಿದಿದ್ದ ಆಫ್ರಿಕನ್ನರು, ದ್ವಿತೀಯ ಟೆಸ್ಟ್ ಪಂದ್ಯದಲ್ಲಿ 109 ರನ್​ಗಳ ಜಯ ಸಾಧಿಸಿದೆ. ಈ ಮೂಲಕ 2-0 ಅಂತರದಿಂದ ಸರಣಿ ಗೆದ್ದುಕೊಂಡಿದೆ.

ಝಾಹಿರ್ ಯೂಸುಫ್
|

Updated on: Dec 11, 2024 | 8:30 AM

Share
ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಸೌತ್ ಆಫ್ರಿಕಾ 2-0 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ 233 ರನ್​​ಗಳ ವಿಜಯ ಸಾಧಿಸಿದ್ದ ಸೌತ್ ಆಫ್ರಿಕಾ, ದ್ವಿತೀಯ ಟೆಸ್ಟ್ ಪಂದ್ಯದಲ್ಲಿ 109 ರನ್​​ಗಳ ಜಯಭೇರಿ ಬಾರಿಸಿದೆ. ಈ ಸರಣಿ ಗೆಲುವಿನೊಂದಿಗೆ ಸೌತ್ ಆಫ್ರಿಕಾ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

1 / 6
ಇನ್ನು ಸೌತ್ ಆಫ್ರಿಕಾ ಪಾಲಿಗೆ ನಿರ್ಣಾಯಕವಾಗಿದ್ದ ದ್ವಿತೀಯ ಟೆಸ್ಟ್ ಪಂದ್ಯದ ಗೆಲುವಿನ ರೂವಾರಿ ಕೇಶವ್ ಮಹಾರಾಜ್. ದ್ವಿತೀಯ ಇನಿಂಗ್ಸ್​​ನಲ್ಲಿ 347 ರನ್​​ಗಳ ಗುರಿ ಪಡೆದ ಶ್ರೀಲಂಕಾ ತಂಡವು 200 ರನ್​​ಗಳವರೆಗೆ ಕಳೆದುಕೊಂಡಿದ್ದು ಕೇವಲ 5 ವಿಕೆಟ್​ಗಳು ಮಾತ್ರ. ಹೀಗಾಗಿ ಲಂಕಾ ಪಡೆ ಈ ಪಂದ್ಯವನ್ನು ಗೆಲ್ಲಲಿದೆ ಎಂದೇ ಎಲ್ಲರೂ ಭಾವಿಸಿದ್ದರು.

2 / 6
ಆದರೆ ಸ್ಪಿನ್ ಮೋಡಿ ತೋರಿಸಿದ ಕೇಶವ್ ಮಹಾರಾಜ್ ಶ್ರೀಲಂಕಾ ಬ್ಯಾಟರ್​​ಗಳ ಪಾಲಿಗೆ ಮಾರಕವಾಗಿ ಪರಿಣಮಿಸಿದರು. ಅದರಲ್ಲೂ ಕೊನೆಯ ದಿನದಾಟದಲ್ಲಿ ಅತ್ಯುತ್ತಮ ದಾಳಿ ಸಂಘಟಿಸಿದ ಕೇಶವ್ 25 ಓವರ್​​ಗಳನ್ನು ಎಸೆದು 5 ವಿಕೆಟ್ ಕಬಳಿಸಿದರು. ಈ ಮೂಲಕ ಲಂಕಾ ತಂಡವನ್ನು 238 ರನ್​ಗಳಿಗೆ ಆಲೌಟ್ ಮಾಡಿ ಸೌತ್ ಆಫ್ರಿಕಾ ತಂಡಕ್ಕೆ ಭರ್ಜರಿ ಗೆಲುವು ತಂದು ಕೊಟ್ಟರು.

3 / 6
ಈ ಅಮೋಘ ಗೆಲುವಿನ ಬಳಿಕ ಕೇಶವ್ ಮಹಾರಾಜ್ ದೇವರನ್ನು ಸ್ಮರಿಸಲು ಮರೆಯಲಿಲ್ಲ. 2-0 ಅಂತರದಿಂದ ಸರಣಿ ಗೆದ್ದ ಖುಷಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಕೇಶವ್, ಜೈ ಶ್ರೀರಾಮ್, ಜೈ ಹನುಮಾನ್ ಹ್ಯಾಷ್ ಟ್ಯಾಗ್ ಬಳಸುವ ಮೂಲಕ ಧನ್ಯತೆಯನ್ನು ಅರ್ಪಿಸಿದರು.

4 / 6
ಅಂದಹಾಗೆ ಕೇಶವ್ ಮಹಾರಾಜ್ ಭಗವಾನ್​ ಶ್ರೀರಾಮನನ್ನು ಸ್ಮರಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪಣಾ ದಿನದಂದು ಕೇಶವ್ ಮಹಾರಾಜ್ ಶುಭ ಹಾರೈಸಿದ್ದರು. ಅಲ್ಲದೆ ಆ ಬಳಿಕ ಅಯೋಧ್ಯೆಗೆ ಭೇಟಿ ಸಹ ನೀಡಿದ್ದರು.

5 / 6
ಮೂಲತಃ ಉತ್ತರ ಪ್ರದೇಶದವರಾಗಿರುವ ಕೇಶವ್ ಮಹಾರಾಜ್ ಪೂರ್ವಜರು ಕಳೆದ 1 ಶತಮಾನಗಳಿಂದ ಸೌತ್ ಆಫ್ರಿಕಾದಲ್ಲಿ ನೆಲೆಸಿದ್ದಾರೆ. ಇದಾಗ್ಯೂ ಕೇಶವ್ ಮಹಾರಾಜ್ ಕುಟಂಬಸ್ಥರು ಹಿಂದೂ ಸಂಪ್ರದಾಯಗಳನ್ನು ಹಾಗೆ ಮುಂದುವರೆಸಿದ್ದಾರೆ. ಇದಕ್ಕೆ ಸಾಕ್ಷಿ ಗೆಲುವಿನ ಸಂಭ್ರಮದ ನಡುವೆಯೂ ಸೌತ್ ಆಫ್ರಿಕಾ ಕ್ರಿಕೆಟಿಗ ದೇವರನ್ನು ಸ್ಮರಿಸಿರುವುದು.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!

ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?

ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!

ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?

ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು

ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್

ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ

ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್

ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?