AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲಾರ್ಡ್​ ಪವರ್​ಗೆ ಗೇಲ್ ಸಾರ್ವಕಾಲಿಕ ವಿಶ್ವ ದಾಖಲೆ ಉಡೀಸ್!

Kieron Pollard Records: ಟಿ20 ಕ್ರಿಕೆಟ್ ಇತಿಹಾಸದಲ್ಲಿ ವೆಸ್ಟ್ ಇಂಡೀಸ್‌ನ ದೈತ್ಯ ಬ್ಯಾಟರ್ ಕಿರಾನ್ ಪೊಲಾರ್ಡ್ ಹೊಸ ದಾಖಲೆ ಬರೆದಿದ್ದಾರೆ. ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಎಂಐ ನ್ಯೂಯಾರ್ಕ್ ತಂಡದ ಪರ ಭರ್ಜರಿ ಶತಕ ಸಿಡಿಸಿದ ಪೊಲಾರ್ಡ್, ತಮ್ಮದೇ ದೇಶದ ಕ್ರಿಕೆಟ್ ದಂತಕಥೆ ಕ್ರಿಸ್ ಗೇಲ್ ಅವರ ಸುದೀರ್ಘ ಅವಧಿಯ ದಾಖಲೆಯನ್ನು ಮುರಿದು ವಿಶ್ವ ದಾಖಲೆಯ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on:Jun 21, 2026 | 12:26 PM

Share
ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಯಾರು? ಕಳೆದ ಕೆಲ ವರ್ಷಗಳಿಂದ ಈ ಪ್ರಶ್ನೆಗೆ ಸಿಗುತ್ತಿದ್ದ ಉತ್ತರ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್. ಆದರೆ ಇಂದಿನಿಂದ ಈ ಉತ್ತರ ಬದಲಾಗಿದೆ. ಇನ್ಮುಂದೆ ಈ ಪ್ರಶ್ನೆಗೆ ಉತ್ತರ ಪವರ್ ಹಿಟ್ಟರ್ ಕೀರನ್ ಪೊಲಾರ್ಡ್ (Kieron Pollard). (PC: MI)

1 / 5
ಹೌದು, ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ಕೀರನ್ ಪೊಲಾರ್ಡ್ ತಮ್ಮದಾಗಿಸಿಕೊಂಡಿದ್ದಾರೆ. ಡಲ್ಲಾಸ್​ನಲ್ಲಿ ನಡೆದ ಮೇಜರ್ ಲೀಗ್ ಟಿ20 ಟೂರ್ನಿಯ 5ನೇ ಪಂದ್ಯದಲ್ಲಿ ವಾಷಿಂಗ್ಟನ್ ಫ್ರೀಡಮ್ ವಿರುದ್ಧ ಪೊಲಾರ್ಡ್ 56 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ ಭರ್ಜರಿ ಶತಕ ಸಿಡಿಸಿದ್ದಾರೆ. (PC: MI)

2 / 5
ಈ ಶತಕದೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಕೀರನ್ ಪೊಲಾರ್ಡ್ ಅಗ್ರಸ್ಥಾನಕ್ಕೇರಿದ್ದಾರೆ. ಈ ಮೂಲಕ ಕಳೆದ ಕೆಲ ವರ್ಷಗಳಿಂದ ವಿಶ್ವ ದಾಖಲೆಯ ಸರದಾರನಾಗಿ ಮೆರೆಯುತ್ತಿದ್ದ ಗೇಲ್ ಅವರನ್ನು ದ್ವಿತೀಯ ಸ್ಥಾನಕ್ಕೆ ತಳ್ಳಿದ್ದಾರೆ. (PC: MI)

3 / 5
ಟಿ20 ಕ್ರಿಕೆಟ್​ನಲ್ಲಿ 455 ಇನಿಂಗ್ಸ್​ ಆಡಿರುವ ಕ್ರಿಸ್ ಗೇಲ್ 10060 ಎಸೆತಗಳನ್ನು ಎದುರಿಸಿ ಒಟ್ಟು 14562 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದ್ದರು. ಈ ದಾಖಲೆಯನ್ನು ಇದೀಗ ಪೊಲಾರ್ಡ್ ಮುರಿದ್ದಾರೆ. (PC: IPL)

4 / 5
ಟಿ20 ಕ್ರಿಕೆಟ್​ನಲ್ಲಿ ಈವರೆಗೆ 653 ಇನಿಂಗ್ಸ್‌ಗಳನ್ನಾಡಿರುವ ಕೀರನ್ ಪೊಲಾರ್ಡ್ 2 ಭರ್ಜರಿ ಶತಕಗಳೊಂದಿಗೆ ಒಟ್ಟು 14,582 ರನ್ ಗಳಿಸಿದ್ದಾರೆ. ಈ ಮೂಲಕ ಚುಟುಕು ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ ಮುಂಬರುವ ಪಂದ್ಯಗಳಲ್ಲೂ ಭರ್ಜರಿ ಪ್ರದರ್ಶನ ನೀಡಿದರೆ ಟಿ20 ಕ್ರಿಕೆಟ್ ಇತಿಹಾಸದಲ್ಲಿ 15 ಸಾವಿರ ರನ್ ಪೂರೈಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪೊಲಾರ್ಡ್ ಪಾತ್ರರಾಗಲಿದ್ದಾರೆ. (PC: MI)

5 / 5

Published On - 12:25 pm, Sun, 21 June 26

Follow Us
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ

14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ

ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​

ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ

ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ

ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ

ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!

40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!

ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ