AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ದಾಖಲೆಗಳ ಮೇಲೆ ದಾಖಲೆ ಬರೆದ ಕೀರನ್ ಪೊಲಾರ್ಡ್

Kieron Pollard Record: ಟಿ20 ಕ್ರಿಕೆಟ್​ನಲ್ಲಿ ವೆಸ್ಟ್ ಇಂಡೀಸ್ ದೈತ್ಯ ಕೀರನ್ ಪೊಲಾರ್ಡ್ ನಾಗಾಲೋಟ ಮುಂದುವರೆದಿದೆ. ಕೆಲ ದಿನಗಳ ಹಿಂದೆಯಷ್ಟೇ 14 ಸಾವಿರ ರನ್ + 300 ವಿಕೆಟ್ ಪಡೆದು ಹೊಸ ವಿಶ್ವ ದಾಖಲೆ ಬರೆದಿದ್ದ ಪೊಲಾರ್ಡ್ ಇದೀಗ ಮತ್ತೊಂದು ವರ್ಲ್ಡ್ ರೆಕಾರ್ಡ್​ಗೆ ಕೊರೊಳೊಡ್ಡಿದ್ದಾರೆ. ಅದು ಸಹ ಸಿಕ್ಸ್ ಸಿಡಿಸುವ ಮೂಲಕ ಎಂಬುದು ವಿಶೇಷ. 

ಝಾಹಿರ್ ಯೂಸುಫ್
|

Updated on:Sep 03, 2025 | 7:57 AM

Share
ವೆಸ್ಟ್ ಇಂಡೀಸ್​ನ ಕೀರನ್ ಪೊಲಾರ್ಡ್ (Kieron Pollard) ಟಿ20 ಕ್ರಿಕೆಟ್​ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿದ್ದಾರೆ. ಕಳೆದ ಪಂದ್ಯದ ಮೂಲಕ ಟಿ20 ಕ್ರಿಕೆಟ್​ನಲ್ಲಿ 14 ಸಾವಿರ ರನ್ ಕಲೆಹಾಕಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದ ಪೊಲಾರ್ಡ್ ಇದೀಗ ಮತ್ತೊಂದು ಮೈಲುಗಲ್ಲು ಮುಟ್ಟಿದ್ದಾರೆ.

1 / 6
ಕೆರಿಬಿಯನ್ ಪ್ರೀಮಿಯರ್ ಲೀಗ್​ನ 19ನೇ ಪಂದ್ಯದಲ್ಲಿ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ವಿರುದ್ಧ ಟ್ರಿನ್​ಬಾಗೊ ನೈಟ್ ರೈಡರ್ಸ್ ಪರ ಕಣಕ್ಕಿಳಿದ ಪೊಲಾರ್ಡ್ ಕೇವಲ 29 ಎಸೆತಗಳಲ್ಲಿ 65 ರನ್ ಸಿಡಿಸಿದ್ದರು. ಈ 65 ರನ್​ಗಳಲ್ಲಿ 8 ಸಿಕ್ಸ್​ಗಳು ಸೇರಿದ್ದವು.

2 / 6
ಈ ಎಂಟು ಸಿಕ್ಸರ್​ಗಳೊಂದಿಗೆ ಕೀರನ್ ಪೊಲಾರ್ಡ್ ಟಿ20 ಕ್ರಿಕೆಟ್​ನಲ್ಲಿ 950 ಸಿಕ್ಸ್ ಬಾರಿಸಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ ಮೊದಲ ಆಲ್​ರೌಂಡರ್ ಎಂಬ ಹೆಗ್ಗಳಿಕೆಗೂ ಪೊಲಾರ್ಡ್​ ಪಾತ್ರರಾಗಿದ್ದಾರೆ.

3 / 6
ಇದಕ್ಕೂ ಮುನ್ನ ಟಿ20 ಕ್ರಿಕೆಟ್​ನಲ್ಲಿ 950+ ಸಿಕ್ಸ್ ಸಿಡಿಸಿರುವುದು ವೆಸ್ಟ್ ಇಂಡೀಸ್​ನ ಕ್ರಿಸ್ ಗೇಲ್. ಟಿ20 ಕ್ರಿಕೆಟ್​ನಲ್ಲಿ 455 ಇನಿಂಗ್ಸ್ ಆಡಿರುವ ಗೇಲ್ 10060 ಎಸೆತಗಳಲ್ಲಿ 1056 ಸಿಕ್ಸ್ ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 6
ಇದೀಗ ಈ ಪಟ್ಟಿಯಲ್ಲಿ ಕೀರನ್ ಪೊಲಾರ್ಡ್​ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. 38 ವರ್ಷದ ಪೊಲಾರ್ಡ್ ಈವರೆಗೆ 635 ಟಿ20 ಇನಿಂಗ್ಸ್ ಆಡಿದ್ದು, ಈ ವೇಳೆ 9316 ಎಸೆತಗಳನ್ನು ಎದುರಿಸಿದ್ದಾರೆ. ಇದರ ನಡುವೆ 950 ಸಿಕ್ಸ್ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

5 / 6
ಸದ್ಯ 950 ಸಿಕ್ಸ್​ಗಳೊಂದಿಗೆ ದ್ವಿತೀಯ ಸ್ಥಾನದಲ್ಲಿರುವ ಕೀರನ್ ಪೊಲಾರ್ಡ್ ಮುಂಬರುವ ದಿನಗಳಲ್ಲಿ 107 ಸಿಕ್ಸ್​ ಬಾರಿಸಿದರೆ ಕ್ರಿಸ್ ಗೇಲ್ ಹೆಸರಿನಲ್ಲಿರುವ ವಿಶ್ವ ದಾಖಲೆಯನ್ನು ಮುರಿದು ಹೊಸ ಇತಿಹಾಸ ನಿರ್ಮಿಸಬಹುದು. ಅಷ್ಟೇ ಅಲ್ಲದೆ ಈ ಸಿಕ್ಸ್​ಗಳೊಂದಿಗೆ ಟಿ20 ಕ್ರಿಕೆಟ್​​ನ ರನ್ ಸರದಾರರ ಪಟ್ಟಿಯಲ್ಲೂ ಗೇಲ್ (14562) ಅವರನ್ನು ಹಿಂದಿಕ್ಕಿ  ಅಗ್ರಸ್ಥಾನಕ್ಕೇರಲು ಕೀರನ್ ಪೊಲಾರ್ಡ್​​ (14077) ಗೆ ಉತ್ತಮ ಅವಕಾಶವಿದೆ.

6 / 6

Published On - 7:57 am, Wed, 3 September 25

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ

ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು

ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ