Kieron Pollard: ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಪೊಲಾರ್ಡ್
TV9 Web | Updated By: ಝಾಹಿರ್ ಯೂಸುಫ್
Updated on:
Jan 14, 2024 | 10:12 AM
Kieron Pollard Records: ಟಿ20 ಕ್ರಿಕೆಟ್ನಲ್ಲಿ 567 ಇನಿಂಗ್ಸ್ ಆಡಿರುವ ಪೊಲಾರ್ಡ್ 1 ಶತಕ ಹಾಗೂ 58 ಅರ್ಧಶತಕಗಳೊಂದಿಗೆ 12430 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ಗಳ ಪಟ್ಟಿಯಲ್ಲಿ 3ನೇ ಸ್ಥಾನ ಅಲಂಕರಿಸಿದ್ದಾರೆ.
1 / 5
ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವ SA20 ಲೀಗ್ನ 4ನೇ ಪಂದ್ಯದಲ್ಲಿ ಎಂಐ ಕೇಪ್ಟೌನ್ ತಂಡದ ನಾಯಕ ಕೀರನ್ ಪೊಲಾರ್ಡ್ (Kieron Pollard) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಅತ್ಯುತ್ತಮ ಫೀಲ್ಡಿಂಗ್ ಮಾಡಿದ ಪೊಲಾರ್ಡ್ ಎರಡು ಕ್ಯಾಚ್ಗಳನ್ನು ಹಿಡಿದಿದ್ದರು.
2 / 5
ಈ 2 ಕ್ಯಾಚ್ಗಳೊಂದಿಗೆ ಟಿ20 ಕ್ರಿಕೆಟ್ನಲ್ಲಿ 350 ಕ್ಯಾಚ್ಗಳನ್ನು ಹಿಡಿದ ವಿಶ್ವದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಹಾಗೆಯೇ ಟಿ20 ಕ್ರಿಕೆಟ್ನಲ್ಲಿ 300+ ಕ್ಯಾಚ್ಗಳನ್ನು ಏಕೈಕ ಫೀಲ್ಡರ್ ಎಂಬ ವಿಶ್ವ ದಾಖಲೆಯನ್ನು ಕೂಡ ಪೊಲಾರ್ಡ್ ನಿರ್ಮಿಸಿದ್ದಾರೆ.
3 / 5
ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಸೌತ್ ಆಫ್ರಿಕಾದ ಡೇವಿಡ್ ಮಿಲ್ಲರ್. 457 ಟಿ20 ಪಂದ್ಯಗಳನ್ನಾಡಿರುವ ಮಿಲ್ಲರ್ 287 ಕ್ಯಾಚ್ಗಳನ್ನು ಹಿಡಿದಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ 2ನೇ ಫೀಲ್ಡರ್ ಎನಿಸಿಕೊಂಡಿದ್ದಾರೆ.
4 / 5
ಸದ್ಯ 639 ಟಿ20 ಪಂದ್ಯಗಳನ್ನಾಡಿರುವ ವೆಸ್ಟ್ ಇಂಡೀಸ್ನ ಕೀರನ್ ಪೊಲಾರ್ಡ್ ಒಟ್ಟು 350 ಕ್ಯಾಚ್ಗಳನ್ನು ಹಿಡಿದಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಕ್ಯಾಚ್ ಹಿಡಿದ ಫೀಲ್ಡರ್ ಎಂಬ ವಿಶ್ವ ದಾಖಲೆಯನ್ನು ಪೊಲಾರ್ಡ್ ನಿರ್ಮಿಸಿದ್ದಾರೆ.
5 / 5
ಹಾಗೆಯೇ ಟಿ20 ಕ್ರಿಕೆಟ್ನಲ್ಲಿ 567 ಇನಿಂಗ್ಸ್ ಆಡಿರುವ ಪೊಲಾರ್ಡ್ 1 ಶತಕ ಹಾಗೂ 58 ಅರ್ಧಶತಕಗಳೊಂದಿಗೆ 12430 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ಗಳ ಪಟ್ಟಿಯಲ್ಲಿ 3ನೇ ಸ್ಥಾನ ಅಲಂಕರಿಸಿದ್ದಾರೆ. ಈ ಪಟ್ಟಿಯಲ್ಲಿ 14562 ರನ್ ಕಲೆಹಾಕಿರುವ ಕ್ರಿಸ್ ಗೇಲ್ ಅಗ್ರಸ್ಥಾನದಲ್ಲಿದ್ದಾರೆ.