AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಕ್ರಿಕೆಟ್‌ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ ಕೀರನ್ ಪೊಲಾರ್ಡ್

Kieron Pollard Record: ಕೀರನ್ ಪೊಲಾರ್ಡ್ ಟಿ20 ಕ್ರಿಕೆಟ್​ನಲ್ಲಿ ಈವರೆಗೆ 622 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 9080 ಎಸೆತಗಳನ್ನು ಎದುರಿಸಿರುವ ಪೊಲಾರ್ಡ್ ಒಟ್ಟು 13668 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್‌ ಇತಿಹಾಸದಲ್ಲೇ ಅತ್ಯಧಿಕ ರನ್ ಕಲೆಹಾಕಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಲ್ಲದೆ ಟಿ20 ಕ್ರಿಕೆಟ್​ನಲ್ಲಿ ಕೀರನ್ ಪೊಲಾರ್ಡ್ ವಿಶೇಷ ದಾಖಲೆಯನ್ನು ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 25, 2025 | 8:54 AM

Share
ಟಿ20 ಕ್ರಿಕೆಟ್‌ನಲ್ಲಿ ಕೀರನ್ ಪೊಲಾರ್ಡ್ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಡಲ್ಲಾಸ್​ನಲ್ಲಿ ನಡೆದ ಮೇಜರ್ ಲೀಗ್ ಕ್ರಿಕೆಟ್ (MLC 2025) ಟೂರ್ನಿಯ 14ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಪೊಲಾರ್ಡ್ ವಿಶೇಷ ಸಾಧನೆ ಮಾಡಿದ್ದಾರೆ.

1 / 5
ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ವಿರುದ್ಧದ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಕೀರನ್ ಪೊಲಾರ್ಡ್ ಟಿ20 ಕ್ರಿಕೆಟ್‌ನಲ್ಲಿ 700 ಪಂದ್ಯಗಳನ್ನಾಡಿದ ವಿಶ್ವದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ‌. ವಿಶೇಷ ಎಂದರೆ ಪೊಲಾರ್ಡ್ ಅವರನ್ನು ಹೊರತುಪಡಿಸಿ ಯಾವುದೇ ಆಟಗಾರ ಟಿ20 ಕ್ರಿಕೆಟ್‌ನಲ್ಲಿ 600 ಪಂದ್ಯಗಳನ್ನು ಕೂಡ ಆಡಿಲ್ಲ.

2 / 5
ಇತ್ತ ವೆಸ್ಟ್ ಇಂಡೀಸ್, ಮುಂಬೈ ಇಂಡಿಯನ್ಸ್, ಎಂಐ ನ್ಯೂಯಾರ್ಕ್, ಟ್ರಿನ್​ಬಾಗೊ ನೈಟ್ ರೈಡರ್ಸ್ ಸೇರಿದಂತೆ ಹಲವು ತಂಡಗಳ ಪರ ಕಣಕ್ಕಿಳಿದಿರುವ ಪೊಲಾರ್ಡ್ ಇದೀಗ 700 ಪಂದ್ಯಗಳ ಮೈಲುಗಲ್ಲು ಮುಟ್ಟಿದ್ದಾರೆ. ಈ ಏಳು ನೂರು ಮ್ಯಾಚ್ ಗಳಲ್ಲಿ ವಿಂಡೀಸ್ ದಾಂಡಿಗ 622 ಇನಿಂಗ್ಸ್ ಗಳಲ್ಲಿ ಬ್ಯಾಟ್ ಬೀಸಿದ್ದಾರೆ.

3 / 5
ಈ 622 ಇನಿಂಗ್ಸ್ ಗಳಲ್ಲಿ ಒಟ್ಟು 9080 ಎಸೆತಗಳನ್ನು ಎದುರಿಸಿರುವ ಕೀರನ್ ಪೊಲಾರ್ಡ್ 13668 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್‌ ಇತಿಹಾಸದಲ್ಲೇ ಅತ್ಯಧಿಕ ರನ್ ಗಳಿಸಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಕ್ರಿಸ್ ಗೇಲ್ (14562) ಅಗ್ರಸ್ಥಾನದಲ್ಲಿದ್ದರೆ, ಅಲೆಕ್ಸ್ ಹೇಲ್ಸ್​ (13730) ದ್ವಿತೀಯ ಸ್ಥಾನದಲ್ಲಿದ್ದಾರೆ.

4 / 5
ಇನ್ನು ಕೀರನ್ ಪೊಲಾರ್ಡ್ ಬಳಿಕ ಟಿ20 ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ಪಂದ್ಯಗಳನ್ನಾಡಿದ ಆಟಗಾರರೆಂದರೆ ಡ್ವೇನ್ ಬ್ರಾವೊ (582), ಶೊಯೆಬ್ (557), ಆ್ಯಂಡ್ರೆ ರಸೆಲ್ (556), ಸುನಿಲ್ ನರೈನ್ (551), ಡೇವಿಡ್ ಮಿಲ್ಲರ್ (530), ಅಲೆಕ್ಸ್ ಹೇಲ್ಸ್ (500). ಈ ಏಳು ಆಟಗಾರರು ಮಾತ್ರ ಟಿ20 ಕ್ರಿಕೆಟ್ ನಲ್ಲಿ ಐನೂರು ಪಂದ್ಯಗಳ ಮೈಲಿಗಲ್ಲು ಮುಟ್ಟಿದ್ದಾರೆ.

5 / 5
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್

ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ

ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್

ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ

ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ

ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು

ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ

ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್

ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು

Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ