Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಸ್​ಗಳ ಸುರಿಮಳೆ… ಟಿ20 ಕ್ರಿಕೆಟ್​ನಲ್ಲಿ ಕೀರನ್ ಪೊಲಾರ್ಡ್ ವಿಶ್ವ ದಾಖಲೆ

Kieron Pollard Record: ಟಿ20 ಕ್ರಿಕೆಟ್​ನಲ್ಲಿ ವೆಸ್ಟ್ ಇಂಡೀಸ್​ನ ಕೀರನ್ ಪೊಲಾರ್ಡ್ ಹೊಸ ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಸಿಕ್ಸ್ ಸಿಡಿಸಿ ಎಂಬುದು ವಿಶೇಷ. ಅಂದರೆ ವೆಸ್ಟ್ ಇಂಡೀಸ್, ಮುಂಬೈ ಇಂಡಿಯನ್ಸ್ ಸೇರಿದಂತೆ ವಿಶ್ವದ ಹಲವು ತಂಡಗಳ ಪರ ಕಣಕ್ಕಿಳಿದಿರುವ ಪೊಲಾರ್ಡ್ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ.

ಝಾಹಿರ್ ಯೂಸುಫ್
|

Updated on:Jan 18, 2025 | 9:04 AM

ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯ 7ನೇ ಪಂದ್ಯದ ಮೂಲಕ ಕೀರನ್ ಪೊಲಾರ್ಡ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಡೆಸರ್ಟ್ ವೈಪರ್ಸ್ ವಿರುದ್ಧದ ಪಂದ್ಯದಲ್ಲಿ MI ಎಮಿರೇಟ್ಸ್ ಪರ ಕಣಕ್ಕಿಳಿದ ಪೊಲಾರ್ಡ್ 23 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 36 ರನ್ ಬಾರಿಸಿದ್ದರು.

1 / 5
ಈ ಮೂರು ಸಿಕ್ಸ್​ಗಳೊಂದಿಗೆ ಕೀರನ್ ಪೊಲಾರ್ಡ್ ಟಿ20 ಕ್ರಿಕೆಟ್​ನಲ್ಲಿ 900+ ಸಿಕ್ಸ್​ಗಳನ್ನು ಪೂರೈಸಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ಸಾಧನೆ ಮಾಡಿದ್ದು ವೆಸ್ಟ್ ಇಂಡೀಸ್​ನ ಕ್ರಿಸ್ ಗೇಲ್.

2 / 5
ಯುನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಟಿ20 ಕ್ರಿಕೆಟ್​ನಲ್ಲಿ 463 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 455 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು 10060 ಎಸೆತಗಳಲ್ಲಿ 1056 ಸಿಕ್ಸ್ ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸಾವಿರಕ್ಕೂ ಹೆಚ್ಚು ಸಿಕ್ಸ್ ಸಿಡಿಸಿದ ವಿಶ್ವದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 5
ವೆಸ್ಟ್ ಇಂಡೀಸ್ ದಾಂಡಿಗನೇ ಆಗಿರುವ ಕೀರನ್ ಪೊಲಾರ್ಡ್ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಟಿ20 ಕ್ರಿಕೆಟ್​ನಲ್ಲಿ 690 ಪಂದ್ಯಗಳನ್ನಾಡಿರುವ ಪೊಲಾರ್ಡ್ 614 ಇನಿಂಗ್ಸ್​ಗಳಲ್ಲಿ 8930 ಎಸೆತಗಳನ್ನು ಎದುರಿಸಿದ್ದು, ಈ ವೇಳೆ ಒಟ್ಟು 901 ಸಿಕ್ಸ್ ಬಾರಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 900+ ಸಿಕ್ಸ್ ಸಿಡಿಸಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ಇನ್ನು ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಭಾರತೀಯನ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಈವರೆಗೆ 448 ಟಿ20 ಪಂದ್ಯಗಳನ್ನಾಡಿರುವ ಹಿಟ್​ಮ್ಯಾನ್ 435 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 8778	 ಎಸೆತಗಳಲ್ಲಿ 525 ಸಿಕ್ಸ್ ಬಾರಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 500+ ಸಿಕ್ಸ್ ಸಿಡಿಸಿದ ಏಕೈಕ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 5

Published On - 8:30 am, Sat, 18 January 25

Follow us
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೊಲೀಸರ ಅತ್ಮಸ್ಥೈರ್ಯ ಕುಂದಿದೆ: ಅಶೋಕ

ಇನ್ನೂ ಕಾರ್ಯಪ್ರವೃತ್ತರಾಗದ ಅರಣ್ಯ ಇಲಾಖೆ ಅಧಿಕಾರಿಗಳು

Video: ಪ್ರಧಾನಿ ಮೋದಿಗೆ ವಿಶೇಷ ಉಡುಗೊರೆ ನೀಡಿದ ಡೊನಾಲ್ಡ್​ ಟ್ರಂಪ್

ನಾನು ರೆಸ್ಟ್​ನಲ್ಲಿದ್ದೇನೆ, ಯಾವುದೇ ಸ್ಥಾನದ ಆಕಾಂಕ್ಷಿಯಲ್ಲ: ಡಿಕೆ ಸುರೇಶ್

ವೈಷಮ್ಯ, ಹೆಣ್ಣು ಮತ್ತು ಮಣ್ಣು-ಬಾಗಪ್ಪ ಕೊಲೆ ಹಿಂದಿನ ಕಾರಣಗಳು: ಎಸ್​ಪಿ

ಕಳ್ಳರ ಹಾವಳಿ‌ ತಡೆಯಲು ಮಹಿಳೆಯರ ರಾತ್ರಿ ಗಸ್ತು

ರೆಡ್ ಕಾರ್ಪೆಟ್ ರೀ ಲಾಂಚ್​ಗೆ ಸ್ಟೈಲ್​ ಆಗಿ ಎಂಟ್ರಿ ಕೊಟ್ಟ ಪವಿತ್ರಾ ಗೌಡ

ವಿದ್ಯಾರ್ಥಿಗಳಿಗೆ ಅನುಕೂಲವಾಗದ ನಮ್ಮ ಮೆಟ್ರೊ ಟಿಕೆಟ್ ದರ ಪರಿಷ್ಕರಣೆ

ಮದುವೆಗೆ ಟೆಂಪಲ್-ಗೋಲ್ಡ್​ ಥೀಮ್; ಹೀಗಿರುತ್ತೆ ಡಾಲಿ ಧನಂಜಯ್ ವಿವಾಹ

ಚಾಲಕ ಇಳಿದು ಹೋಗುತ್ತಿದ್ದಂತೆ ಆತನ ಹಿಂದೆಯೇ ಚಲಿಸಿದ ಡೀಸೆಲ್ ಟ್ಯಾಂಕರ್!