ಸಿಕ್ಸ್ಗಳ ಸುರಿಮಳೆ… ಟಿ20 ಕ್ರಿಕೆಟ್ನಲ್ಲಿ ಕೀರನ್ ಪೊಲಾರ್ಡ್ ವಿಶ್ವ ದಾಖಲೆ
Kieron Pollard Record: ಟಿ20 ಕ್ರಿಕೆಟ್ನಲ್ಲಿ ವೆಸ್ಟ್ ಇಂಡೀಸ್ನ ಕೀರನ್ ಪೊಲಾರ್ಡ್ ಹೊಸ ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಸಿಕ್ಸ್ ಸಿಡಿಸಿ ಎಂಬುದು ವಿಶೇಷ. ಅಂದರೆ ವೆಸ್ಟ್ ಇಂಡೀಸ್, ಮುಂಬೈ ಇಂಡಿಯನ್ಸ್ ಸೇರಿದಂತೆ ವಿಶ್ವದ ಹಲವು ತಂಡಗಳ ಪರ ಕಣಕ್ಕಿಳಿದಿರುವ ಪೊಲಾರ್ಡ್ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ.
1 / 5
ಇಂಟರ್ನ್ಯಾಷನಲ್ ಲೀಗ್ ಟಿ20 ಟೂರ್ನಿಯ 7ನೇ ಪಂದ್ಯದ ಮೂಲಕ ಕೀರನ್ ಪೊಲಾರ್ಡ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಡೆಸರ್ಟ್ ವೈಪರ್ಸ್ ವಿರುದ್ಧದ ಪಂದ್ಯದಲ್ಲಿ MI ಎಮಿರೇಟ್ಸ್ ಪರ ಕಣಕ್ಕಿಳಿದ ಪೊಲಾರ್ಡ್ 23 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 36 ರನ್ ಬಾರಿಸಿದ್ದರು.
2 / 5
ಈ ಮೂರು ಸಿಕ್ಸ್ಗಳೊಂದಿಗೆ ಕೀರನ್ ಪೊಲಾರ್ಡ್ ಟಿ20 ಕ್ರಿಕೆಟ್ನಲ್ಲಿ 900+ ಸಿಕ್ಸ್ಗಳನ್ನು ಪೂರೈಸಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ಸಾಧನೆ ಮಾಡಿದ್ದು ವೆಸ್ಟ್ ಇಂಡೀಸ್ನ ಕ್ರಿಸ್ ಗೇಲ್.
3 / 5
ಯುನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಟಿ20 ಕ್ರಿಕೆಟ್ನಲ್ಲಿ 463 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 455 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿರುವ ಅವರು 10060 ಎಸೆತಗಳಲ್ಲಿ 1056 ಸಿಕ್ಸ್ ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸಾವಿರಕ್ಕೂ ಹೆಚ್ಚು ಸಿಕ್ಸ್ ಸಿಡಿಸಿದ ವಿಶ್ವದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ.
4 / 5
ವೆಸ್ಟ್ ಇಂಡೀಸ್ ದಾಂಡಿಗನೇ ಆಗಿರುವ ಕೀರನ್ ಪೊಲಾರ್ಡ್ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಟಿ20 ಕ್ರಿಕೆಟ್ನಲ್ಲಿ 690 ಪಂದ್ಯಗಳನ್ನಾಡಿರುವ ಪೊಲಾರ್ಡ್ 614 ಇನಿಂಗ್ಸ್ಗಳಲ್ಲಿ 8930 ಎಸೆತಗಳನ್ನು ಎದುರಿಸಿದ್ದು, ಈ ವೇಳೆ ಒಟ್ಟು 901 ಸಿಕ್ಸ್ ಬಾರಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ 900+ ಸಿಕ್ಸ್ ಸಿಡಿಸಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.
5 / 5
ಇನ್ನು ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಭಾರತೀಯನ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಈವರೆಗೆ 448 ಟಿ20 ಪಂದ್ಯಗಳನ್ನಾಡಿರುವ ಹಿಟ್ಮ್ಯಾನ್ 435 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 8778 ಎಸೆತಗಳಲ್ಲಿ 525 ಸಿಕ್ಸ್ ಬಾರಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ 500+ ಸಿಕ್ಸ್ ಸಿಡಿಸಿದ ಏಕೈಕ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.
Published On - 8:30 am, Sat, 18 January 25