AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಕೆಕೆಆರ್ ತಂಡಕ್ಕೆ ಮಾಜಿ ನಾಯಕನ ಆಗಮನ

IPL 2024: 17ನೇ ಸೀಸನ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಕೆಕೆಆರ್‌ಗೆ ಈ ನಡುವೆ ಸಂತಸದ ಸುದ್ದಿಯೊಂದು ಸಿಕ್ಕಿದೆ. ಅದರಂತೆ ಇಂಜುರಿಯಿಂದಾಗಿ ಇದುವರೆಗೆ ಈ ಸೀಸನ್​ನಲ್ಲಿ ಒಂದೇ ಒಂದು ಪಂದ್ಯವನ್ನು ಆಡಿದ್ದ ಸ್ಟಾರ್ ಕ್ರಿಕೆಟಿಗ ಹಾಗೂ ತಂಡದ ಮಾಜಿ ನಾಯಕ ಇದೀಗ ತಂಡವನ್ನು ಸೇರಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on: Apr 10, 2024 | 8:13 PM

Share
2024ರ ಐಪಿಎಲ್​ನಲ್ಲಿ ಇದುವರೆಗೆ 23 ಪಂದ್ಯಗಳನ್ನು ಆಡಲಾಗಿದೆ. ಲೀಗ್‌ನಲ್ಲಿ ಕೆಲವು ತಂಡಗಳು 5 ಮತ್ತು ಕೆಲವು 4 ಪಂದ್ಯಗಳನ್ನು ಆಡಿವೆ. ಪ್ರಸ್ತುತ ಅಂಕಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ಅಗ್ರಸ್ಥಾನದಲ್ಲಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್ ಎರಡನೇ ಸ್ಥಾನದಲ್ಲಿದೆ.

1 / 8
ಕಳೆದ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಸೋತಿದ್ದ ಕೆಕೆಆರ್ ಲೀಗ್​ನಲ್ಲಿ ಮೊದಲ ಸೋಲನ್ನು ಎದುರಿಸಿದ್ದನ್ನು ಬಿಟ್ಟರೆ ಉಳಿದಂತೆ ತಂಡದ ಪ್ರದರ್ಶನ ಉತ್ತಮವಾಗಿದೆ. ಇದುವರೆಗೆ ತಂಡ ಆಡಿರುವ 4 ಪಂದ್ಯಗಳಲ್ಲಿ 3ರಲ್ಲಿ ಗೆದ್ದು 1ರಲ್ಲಿ ಸೋತಿದೆ.

2 / 8
17ನೇ ಸೀಸನ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಕೆಕೆಆರ್‌ಗೆ ಈ ನಡುವೆ ಸಂತಸದ ಸುದ್ದಿಯೊಂದು ಸಿಕ್ಕಿದೆ. ಅದರಂತೆ ಇಂಜುರಿಯಿಂದಾಗಿ ಇದುವರೆಗೆ ಈ ಸೀಸನ್​ನಲ್ಲಿ ಒಂದೇ ಒಂದು ಪಂದ್ಯವನ್ನು ಆಡಿದ್ದ ಸ್ಟಾರ್ ಕ್ರಿಕೆಟಿಗ ಹಾಗೂ ತಂಡದ ಮಾಜಿ ನಾಯಕ ಇದೀಗ ತಂಡವನ್ನು ಸೇರಿಕೊಂಡಿದ್ದಾರೆ.

3 / 8
ವರದಿಯ ಪ್ರಕಾರ, ಈಡನ್ ಗಾರ್ಡನ್​ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಮೊದಲ ಐಪಿಎಲ್ ಪಂದ್ಯದ ನಂತರ ಇಂಜುರಿಗೊಂಡು ತಂಡದಿಂದ ಹೊರಬಿದ್ದಿದ್ದ ತಂಡದ ಉಪನಾಯಕ ನಿತೀಶ್ ರಾಣಾ ಕೋಲ್ಕತ್ತಾದಲ್ಲಿ ಶಿಬಿರವನ್ನು ಸೇರಿಕೊಂಡಿದ್ದಾರೆ ಎಂದು ವರದಿಯಾಗಿದೆ.

4 / 8
ಸನ್​ರೈಸರ್ಸ್​ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಪರ ಆಡಿದ್ದ ರಾಣಾ 11 ಎಸೆತಗಳಲ್ಲಿ 9 ರನ್ ಗಳಿಸಿದ್ದರು. ಆ ನಂತರ ಫೀಲ್ಡಿಂಗ್ ಮಾಡುವಾಗ ಅವರ ಕೈಗೆ ಗಾಯವಾಗಿತ್ತು. ರಾಣಾ ಅವರ ಬೆರಳು ಮುರಿತವಾಗಿತ್ತು. ಹೀಗಾಗಿ ರಾಣಾ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂದ್ಯಗಳನ್ನು ಆಡಲಿಲ್ಲ.

5 / 8
ಕಳೆದ ಸೀಸನ್​ನಲ್ಲಿ ಶ್ರೇಯಸ್ ಅಯ್ಯರ್ ಅನುಪಸ್ಥಿತಿಯಲ್ಲಿ ರಾಣಾ ಕೋಲ್ಕತ್ತಾ ತಂಡದ ನಾಯಕರಾಗಿದ್ದರು. ಐಪಿಎಲ್‌ನಲ್ಲಿ ರಾಣಾ ಅವರ ಪ್ರದರ್ಶನದ ಬಗ್ಗೆ ಹೇಳುವುದಾದರೆ ಅವರು ಇದುವರೆಗೆ ಆಡಿರುವ 106 ಪಂದ್ಯಗಳಲ್ಲಿ 2603 ರನ್ ಗಳಿಸಿದ್ದಾರೆ.

6 / 8
ರಾಣಾ ಲೀಗ್‌ನಲ್ಲಿ ಇದುವರೆಗೆ 18 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇನ್ನು ಕಳೆದ ಸೀಸನ್​ನಲ್ಲಿ ರಾಣಾ 14 ಪಂದ್ಯಗಳನ್ನು ಆಡಿ 3 ಅರ್ಧ ಶತಕ ಸಹಿತ 413 ರನ್ ಬಾರಿಸಿದ್ದರು. ಆದರೆ ರಾಣಾ ಪ್ರವೇಶ ಕೆಕೆಆರ್​ಗೆ ದೊಡ್ಡ ತಲೆನೋವು ತಂದಿದೆ.

7 / 8
ಏಕೆಂದರೆ ಕೆಕೆಆರ್ ಬ್ಯಾಟಿಂಗ್ ವಿಭಾಗ ಪೂರ್ಣ ಪ್ರಮಾಣದಲ್ಲಿ ಭರ್ತಿಗೊಂಡಿದೆ. ತಂಡದಲ್ಲಿ ಆಡುತ್ತಿರುವವರೆಲ್ಲ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಹೀಗಾಗಿ ರಾಣಾರನ್ನು ಪ್ಲೇಯಿಂಗ್ 11ನಲ್ಲಿ ಆಡಿಸುವುದು ಕೆಕೆಆರ್ ಮ್ಯಾನೇಜ್​ಮೆಂಟ್​ಗೆ ದೊಡ್ಡ ಪ್ರಶ್ನೆಯಾಗಿದೆ.

8 / 8
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್

ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!

ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ