AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಬಾಂಗ್ಲಾದಲ್ಲಿ ಹಿಂದೂಗಳ ಹಿಂಸಾಚಾರ; ಕೆಕೆಆರ್ ತಂಡಕ್ಕೆ ಭಾರತೀಯರಿಂದ ಹಿಡಿಶಾಪ

KKR IPL 2026: 2026ರ ಐಪಿಎಲ್ ಹರಾಜಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಬಾಂಗ್ಲಾದೇಶದ ಮುಸ್ತಾಫಿಜುರ್ ರೆಹಮಾನ್ ಅವರನ್ನು ಖರೀದಿಸಿದ್ದಕ್ಕೆ ಭಾರತೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ಕಾರಣ ನೆಟ್ಟಿಗರು ಕೆಕೆಆರ್ ಮತ್ತು ಬಿಸಿಸಿಐ ವಿರುದ್ಧ ಆಕ್ರೋಶಗೊಂಡಿದ್ದು, ತಂಡವನ್ನು ಬಹಿಷ್ಕರಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ನಡೆಸಿದ್ದಾರೆ.

ಪೃಥ್ವಿಶಂಕರ
|

Updated on: Dec 23, 2025 | 6:06 PM

Share
2026 ರ ಐಪಿಎಲ್ ಮಿನಿ ಹರಾಜಿನ ನಂತರ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಅಷ್ಟಕ್ಕೂ ಬಾಲಿವುಡ್ ಬಾದ್​​ಶಾ ಶಾರುಖ್ ಖಾನ್ ಒಡೆತನದ ಕೆಕೆಆರ್ ತಂಡ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಲು ಕಾರಣವೇನು ಎಂದರೆ, ಮಿನಿ ಹರಾಜಿನಲ್ಲಿ ಅದೊಂದು ದೇಶದ ಆಟಗಾರನನ್ನು ತನ್ನ ತಂಡಕ್ಕೆ ಖರೀದಿಸಿದ್ದು.

1 / 6
 ವಾಸ್ತವವಾಗಿ ಐಪಿಎಲ್ ಮಿನಿ ಹರಾಜಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್​ ಫ್ರಾಂಚೈಸಿ ಬಾಂಗ್ಲಾದೇಶ ತಂಡದ ವೇಗದ ಬೌಲರ್ ಮುಸ್ತಾಫಿಜುರ್ ರೆಹಮಾನ್ ಅವರನ್ನು ತನ್ನ ತಂಡಕ್ಕೆ ಖರೀದಿ ಮಾಡಿತ್ತು. ಹೀಗಾಗಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದಿಂದ ಕೆರಳಿರುವ ಭಾರತೀಯರು ಕೆಕೆಆರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಶುರು ಮಾಡಿದ್ದಾರೆ.

2 / 6
ಅಬುಧಾಬಿಯಲ್ಲಿ ನಡೆದ 2026 ರ ಐಪಿಎಲ್ ಹರಾಜಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ಬಾಂಗ್ಲಾದೇಶದ ಬೌಲರ್ ಮುಸ್ತಾಫಿಜುರ್ ರೆಹಮಾನ್ ಅವರನ್ನು ಅವರ ಮೂಲ ಬೆಲೆಗಿಂತ ಸುಮಾರು ಐದು ಪಟ್ಟು ಹೆಚ್ಚು ಬೆಲೆಗೆ ಖರೀದಿಸಿತು. 2 ಕೋಟಿ ಮೂಲ ಬೆಲೆಯೊಂದಿಗೆ ಹರಾಜಿಗೆ ಬಂದಿದ್ದ ಮುಸ್ತಾಫಿಜುರ್ ಅವರನ್ನು ಕೆಕೆಆರ್ 9.20 ಕೋಟಿ ನೀಡಿ ಖರೀದಿಸಿತ್ತು.

3 / 6
ಇದೀಗ ಮುಸ್ತಾಫಿಜುರ್ ಖರೀದಿಗೆ ಕೆಕೆಆರ್ ವಿರುದ್ಧ ವಿರೋಧ ವ್ಯಕ್ತವಾಗಿದೆ. ಭಾರತ ವಿರೋಧಿ ಚಟುವಟಿಕೆಗಳು ನಡೆಯುತ್ತಿರುವ ಮತ್ತು ಹಿಂದೂಗಳನ್ನು ಥಳಿಸಲಾಗುತ್ತಿರುವ ದೇಶದಿಂದ ಆಟಗಾರರನ್ನು ಐಪಿಎಲ್‌ನಲ್ಲಿ ಆಡಲು ಅನುಮತಿ ನೀಡಲಾಗಿದೆ. ಅಲ್ಲದೆ ಕೆಕೆಆರ್ ಫ್ರಾಂಚೈಸಿ ಅವರನ್ನು ಖರೀದಿಸಿರುವುದಕ್ಕೆ ಭಾರತೀಯರು ಕೆಕೆಆರ್ ಮೇಲೆ ಕೋಪಗೊಂಡಿದ್ದಾರೆ.

4 / 6
ಸಾಮಾಜಿಕ ಜಾಲತಾಣಗಳಲ್ಲಿ ಕೆಕೆಆರ್ ವಿರುದ್ಧ ಸಾಕಷ್ಟು ಪೋಸ್ಟ್‌ಗಳು ಹರಿದಾಡುತ್ತಿದ್ದು, ಐಪಿಎಲ್​ನಿಂದ ಕೆಕೆಆರ್ ತಂಡವನ್ನು ಬಹಿಷ್ಕರಿಸಬೇಕೆಂಬ ಒತ್ತಾಯ ಜೋರಾಗಿದೆ.  ಆದಾಗ್ಯೂ, ಕೆಲವರು ಕೆಕೆಆರ್‌ಗಿಂತ ಬಿಸಿಸಿಐ ಅನ್ನು ದೂಷಿಸುತ್ತಿದ್ದಾರೆ. ಕೆಕೆಆರ್ ಕಡೆಗೆ ಬೆರಳು ತೋರಿಸುವವರನ್ನು ಬಿಸಿಸಿಐ ಅನ್ನು ಪ್ರಶ್ನಿಸುವಂತೆ ಒತ್ತಾಯಿಸುತ್ತಿದ್ದಾರೆ.

5 / 6
ಬಾಂಗ್ಲಾದೇಶಿ ಆಟಗಾರರು ಹರಾಜಿನಲ್ಲಿ ಭಾಗವಹಿಸಲು ಅನುಮತಿ ನೀಡಿದ ಬಿಸಿಸಿಐ ಮೇಲೆಯೂ ಭಾರತೀಯರು ಕೋಪಗೊಂಡಿದ್ದಾರೆ. ಮುಸ್ತಾಫಿಜುರ್ ರೆಹಮಾನ್ ಐಪಿಎಲ್‌ನಲ್ಲಿ ಎಸ್‌ಆರ್‌ಹೆಚ್, ಮುಂಬೈ, ಸಿಎಸ್‌ಕೆ ಮತ್ತು ಡೆಲ್ಲಿಯಂತಹ ಪ್ರಮುಖ ಫ್ರಾಂಚೈಸಿಗಳಿಗಾಗಿ ಆಡಿದ್ದಾರೆ.ಇದೀಗ ಐಪಿಎಲ್ 2026 ರಲ್ಲಿ ಕೆಕೆಆರ್ ತಂಡವನ್ನು ಪ್ರತಿನಿಧಿಸಲಿದ್ದಾರೆ.

6 / 6
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು

ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!

CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು

ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ

ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​

ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು

ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ

ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?

GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು