- Kannada News Photo gallery Cricket photos KKR Players and Fans Celebrate Third Title With Champions TShirt
ನಾವೇ ವಿನ್ನರ್… ಫೈನಲ್ ಪಂದ್ಯಕ್ಕೂ ಮೊದಲೇ ರೆಡಿಯಾಗಿತ್ತು KKR ತಂಡದ ಚಾಂಪಿಯನ್ಸ್ ಟಿ ಶರ್ಟ್
IPL 2024 KKR vs SRH: ಐಪಿಎಲ್ನ ಫೈನಲ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಬಗ್ಗು ಬಡಿದು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮೂರನೇ ಬಾರಿ ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡಿದೆ. ಚೆನ್ನೈನಲ್ಲಿ ನಡೆದ ಅಂತಿಮ ಹಣಾಹಣಿಯಲ್ಲಿ ಕೆಕೆಆರ್ ತಂಡವನ್ನು ಎಸ್ಆರ್ಹೆಚ್ ತಂಡವನ್ನು 8 ವಿಕೆಟ್ಗಳಿಂದ ಸೋಲಿಸಿ ಚಾಂಪಿಯನ್ ಪಟ್ಟಕ್ಕೇರಿತು.
Updated on:May 27, 2024 | 1:52 PM

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ (IPL 2024) ಫೈನಲ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡಕ್ಕೆ ಸೋಲುಣಿಸಿ ಕೊಲ್ಕತ್ತಾ ನೈಟ್ ರೈಡರ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಗೆಲುವಿನೊಂದಿಗೆ ಕೆಕೆಆರ್ ತಂಡ 3ನೇ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದುಕೊಂಡಂತಾಗಿದೆ. ಇದಕ್ಕೂ ಮುನ್ನ 2012 ರಲ್ಲಿ ಮತ್ತು 2014 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

ವಿಶೇಷ ಎಂದರೆ ಈ ಬಾರಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಫೈನಲ್ಗೆ ಪ್ರವೇಶಿಸುತ್ತಿದ್ದಂತೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಅಂದರೆ ಫೈನಲ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಬಗ್ಗು ಬಡಿದು ಚಾಂಪಿಯನ್ ಪಟ್ಟಕ್ಕೇರುವುದು ಕೆಕೆಆರ್ ತಂಡದ ದೃಢ ನಂಬಿಕೆಯಾಗಿತ್ತು. ಈ ಆತ್ಮ ವಿಶ್ವಾಸದೊಂದಿಗೆ ಕೆಕೆಆರ್ ಮೊದಲೇ ಚಾಂಪಿಯನ್ಸ್ ಟ್ಯಾಗ್ ಲೈನ್ ಹೊಂದಿರುವ ಟಿ ಶರ್ಟ್ಗಳನ್ನು ಪ್ರಿಂಟ್ ಮಾಡಿಸಿಕೊಂಡಿದ್ದರು.

ಅಲ್ಲದೆ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ಗೆಲ್ಲುತ್ತಿದ್ದಂತೆ ಕೆಕೆಆರ್ ತಂಡದ ಕುಟುಂಬಸ್ಥರು ಚಾಂಪಿಯನ್ಸ್ ಟಿ ಶರ್ಟ್ನೊಂದಿಗೆ ಮೈದಾನದಲ್ಲಿ ಕಾಣಿಸಿಕೊಂಡರು. ಇದೀಗ ಕೆಕೆಆರ್ ಚಾಂಪಿಯನ್ಸ್ ಟಿ ಶರ್ಟ್ನ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಫೈನಲ್ ಪಂದ್ಯಕ್ಕೂ ಮುನ್ನ ಗೆದ್ದೇ ಗೆಲ್ಲುವೆವು ಎಂಬ ಅಚಲ ನಂಬಿಕೆಯಲ್ಲಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆತ್ಮ ವಿಶ್ವಾಸಕ್ಕೆ ಚಾಂಪಿಯನ್ಸ್ ಟಿ ಶರ್ಟ್ಗಳೇ ಸಾಕ್ಷಿ ಎಂದು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಐಪಿಎಲ್ನ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾಡ್ ತಂಡವು 18.3 ಓವರ್ಗಳಲ್ಲಿ 113 ರನ್ಗಳಿಗೆ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಆರಂಭಿಕ ರಹಮಾನುಲ್ಲಾ ಗುರ್ಬಾಝ್ (39) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಇನ್ನು 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೆಂಕಟೇಶ್ ಅಯ್ಯರ್ (52) ಸಿಡಿಲಬ್ಬರದ ಅರ್ಧಶತಕ ಸಿಡಿಸಿದರು. ಈ ಮೂಲಕ ಕೆಕೆಆರ್ ತಂಡವು 10.3 ಓವರ್ಗಳಲ್ಲಿ 114 ರನ್ ಬಾರಿಸಿ ಭರ್ಜರಿ ಜಯ ಸಾಧಿಸಿತು.
Published On - 1:51 pm, Mon, 27 May 24




