- TV9 Kannada Kannada News Photos Cricket Photos KKR's All Rounder Shakib Al Hasan pulled out of IPL 2023
IPL 2023: KKR ತಂಡಕ್ಕೆ ಕೈ ಕೊಟ್ಟ ಸ್ಟಾರ್ ಆಲ್ರೌಂಡರ್..!
IPL 2023 Kannada: ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಹೀಗಿದೆ: ನಿತೀಶ್ ರಾಣಾ (ನಾಯಕ), ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಲಾಕಿ ಫರ್ಗುಸನ್, ಉಮೇಶ್ ಯಾದವ್, ಟಿಮ್ ಸೌಥಿ, ವರುಣ್ ಚಕ್ರವರ್ತಿ, ಅನುಕೂಲ್ ರಾಯ್, ರಿಂಕು ಸಿಂಗ್, ಮನ್ದೀಪ್ ಸಿಂಗ್, ಲಿಟ್ಟನ್ ದಾಸ್.
Updated on: Apr 04, 2023 | 3:58 PM

IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ರಿಂದ ಮತ್ತೋರ್ವ ಆಟಗಾರ ಹೊರಗುಳಿದಿದ್ದಾರೆ. ಈ ಬಾರಿ ಐಪಿಎಲ್ನಿಂದ ಹೊರಗುಳಿದಿರುವುದು ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಸ್ಟಾರ್ ಆಲ್ರೌಂಡರ್ ಎಂಬುದು ವಿಶೇಷ.

ಹೌದು, ಈ ಬಾರಿಯ ಹರಾಜಿನಲ್ಲಿ 1.5 ಕೋಟಿಗೆ ಕೆಕೆಆರ್ ತಂಡ ಖರೀದಿಸಿದ್ದ ಬಾಂಗ್ಲಾದೇಶ್ ಆಲ್ರೌಂಡರ್ ಶಕೀಬ್ ಅಲ್ ಹಸನ್ ಐಪಿಎಲ್ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಶಕೀಬ್ ಸದ್ಯ ಐರ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಡುತ್ತಿದ್ದಾರೆ. ಇದಾಗ್ಯೂ ಅವರು ಏಪ್ರಿಲ್ 8 ರ ಬಳಿಕ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು.

ಆದರೀಗ ರಾಷ್ಟ್ರೀಯ ತಂಡದ ಪರ ಆಡುವ ಸಲುವಾಗಿ ಹಾಗೂ ವೈಯುಕ್ತಿಕ ಕಾರಣಗಳಿಂದಾಗಿ ಐಪಿಎಲ್ನಿಂದ ಹಿಂದೆ ಸರಿಯುತ್ತಿರುವುದಾಗಿ ಶಕೀಬ್ ಅಲ್ ಹಸನ್ ತಿಳಿಸಿದ್ದಾರೆ. ಹೀಗಾಗಿ ಕೆಕೆಆರ್ ತಂಡವು ಹೊಸ ವಿದೇಶಿ ಆಲ್ರೌಂಡರ್ನ ಆಯ್ಕೆಗೆ ಮುಂದಾಗಲಿದೆ.

ಇನ್ನು ಕೆಕೆಆರ್ ತಂಡದಲ್ಲಿರುವ ಮತ್ತೋರ್ವ ಆಟಗಾರ ಲಿಟ್ಟನ್ ದಾಸ್ ಈ ಬಾರಿ ಐಪಿಎಲ್ನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬುದರ ಬಗ್ಗೆ ಕೂಡ ಸ್ಪಷ್ಟತೆ ಇಲ್ಲ. ಏಕೆಂದರೆ ಮೇ 2 ರಿಂದ ಬಾಂಗ್ಲಾದೇಶ್ ಐರ್ಲೆಂಡ್ ವಿರುದ್ಧ ಏಕದಿನ ಸರಣಿ ಆಡಲಿದೆ. ಹೀಗಾಗಿ ಲಿಟ್ಟನ್ ದಾಸ್ ಕೂಡ ಐಪಿಎಲ್ನಿಂದ ಹಿಂದೆ ಸರಿದರೂ ಅಚ್ಚರಿಪಡಬೇಕಿಲ್ಲ.

ಇದಕ್ಕೂ ಮುನ್ನ ಬೆನ್ನು ನೋವಿನ ಸಮಸ್ಯೆಯ ಕಾರಣ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಐಪಿಎಲ್ನಿಂದ ಹೊರಗುಳಿದಿದ್ದರು. ಅವರ ಬದಲಿಗೆ ನಿತೀಶ್ ರಾಣಾ ಅವರನ್ನು ಕೆಕೆಆರ್ ತಂಡದ ನಾಯಕನಾಗಿ ಆಯ್ಕೆ ಮಾಡಲಾಗಿದೆ.

ಆದರೆ ನಿತೀಶ್ ರಾಣಾ ನಾಯಕನಾಗಿ ಪಾದರ್ಪಣೆ ಮಾಡಿದ ಪಂದ್ಯದಲ್ಲೇ ಪಂಜಾಬ್ ಕಿಂಗ್ಸ್ ವಿರುದ್ಧ 7 ರನ್ಗಳಿಂದ ಸೋಲನುಭವಿಸಿದೆ. ಇದೀಗ 2ನೇ ಪಂದ್ಯಕ್ಕೆ ಸಜ್ಜಾಗಿರುವ ಕೆಕೆಆರ್ ಏಪ್ರಿಲ್ 6 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಹೀಗಿದೆ: ನಿತೀಶ್ ರಾಣಾ (ನಾಯಕ), ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಲಾಕಿ ಫರ್ಗುಸನ್, ಉಮೇಶ್ ಯಾದವ್, ಟಿಮ್ ಸೌಥಿ, ವರುಣ್ ಚಕ್ರವರ್ತಿ, ಅನುಕೂಲ್ ರಾಯ್, ರಿಂಕು ಸಿಂಗ್, ಮನ್ದೀಪ್ ಸಿಂಗ್, ಲಿಟ್ಟನ್ ದಾಸ್, ಕುಲ್ವಂತ್ ಖೆಜ್ರೋಲಿಯಾ, ಡೇವಿಡ್ ವೀಝ, ಸುಯಶ್ ಶರ್ಮಾ, ವೈಭವ್ ಅರೋರಾ, ಎನ್. ಜಗದೀಸನ್,

TV9 Kannada
Read More



