Prithvi Shaw: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಸೆಹ್ವಾಗ್ ದಾಖಲೆ ಸರಿಗಟ್ಟಿದ ಪೃಥ್ವಿ ಶಾ

| Updated By: ಝಾಹಿರ್ ಯೂಸುಫ್

Updated on: Apr 10, 2022 | 6:26 PM

Prithvi Shaw: ಕೆಕೆಆರ್​ ವಿರುದ್ದದ ಈ ಪಂದ್ಯದಲ್ಲಿ ಪೃಥ್ವಿ ಶಾ ಕೇವಲ 27 ಎಸೆತಗಳಲ್ಲಿ 12ನೇ ಅರ್ಧಶತಕ ಗಳಿಸಿದರು. ಅಲ್ಲದೆ ಕೇವಲ 29 ಎಸೆತಗಳಲ್ಲಿ 51 ರನ್ (7 ಬೌಂಡರಿ, 2 ಸಿಕ್ಸರ್) ಗಳಿಸಿ ವಿಕೆಟ್​ ಒಪ್ಪಿಸಿದರು.

1 / 4
 ಡೆಲ್ಲಿ ಕ್ಯಾಪಿಟಲ್ಸ್‌ನ ಸ್ಪೋಟಕ ಓಪನರ್ ಪೃಥ್ವಿ ಶಾ ಐಪಿಎಲ್ 2022 ರಲ್ಲಿ ತಮ್ಮ ಬ್ಯಾಟಿಂಗ್ ಅಬ್ಬರವನ್ನು ಮುಂದುವರೆಸಿದ್ದಾರೆ. ಹಿಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ದ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಪೃಥ್ವಿ ಇದೀಗ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ದ ಅರ್ಧಶತಕ ಬಾರಿಸಿದ್ದಾರೆ. ಈ ಮೂಲಕ ಬ್ಯಾಕ್ ಟು ಬ್ಯಾಕ್ ಎರಡು ಅರ್ಧಶತಕ ಬಾರಿಸಿ ಮಿಂಚಿದ್ದಾರೆ.

2 / 4
ಕೆಕೆಆರ್​ ವಿರುದ್ದದ ಈ ಪಂದ್ಯದಲ್ಲಿ ಪೃಥ್ವಿ ಶಾ ಕೇವಲ 27 ಎಸೆತಗಳಲ್ಲಿ 12ನೇ ಅರ್ಧಶತಕ ಗಳಿಸಿದರು. ಅಲ್ಲದೆ ಕೇವಲ 29 ಎಸೆತಗಳಲ್ಲಿ 51 ರನ್ (7 ಬೌಂಡರಿ, 2 ಸಿಕ್ಸರ್) ಗಳಿಸಿ ವಿಕೆಟ್​ ಒಪ್ಪಿಸಿದರು.

3 / 4
ವಿಶೇಷವೆಂದರೆ ಇದು ಕೆಕೆಆರ್ ವಿರುದ್ಧ ಪೃಥ್ವಿ ಶಾ ಅವರ ಐದನೇ ಅರ್ಧಶತಕವಾಗಿದೆ. ಅಷ್ಟೇ ಅಲ್ಲದೆ ಈ 51 ರನ್​ನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಪರ ಪವರ್​ಪ್ಲೇನಲ್ಲಿ ಒಂದು ಸಾವಿರ ರನ್ ಪೂರ್ಣಗೊಳಿಸಿದ್ದಾರೆ.

4 / 4
ಇದಕ್ಕೂ ಮುನ್ನ ಡೆಲ್ಲಿ ಪರ ಪವರ್​ಪ್ಲೇನಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿ 1 ಸಾವಿರ ರನ್ ಪೂರೈಸಿ ವೀರೇಂದ್ರ ಸೆಹ್ವಾಗ್ ದಾಖಲೆ ಬರೆದಿದ್ದರು. ಇದೀಗ ಡೆಲ್ಲಿ ಪರ ಈ ಸಾಧನೆ ಮಾಡಿದ 2ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಅಲ್ಲದೆ ಸೆಹ್ವಾಗ್ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ವಿಶೇಷ ಸಾಧನೆ ಮೆರೆದಿದ್ದಾರೆ ಯುವ ದಾಂಡಿಗ ಪೃಥ್ವಿ ಶಾ.