AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿನ್, ಧೋನಿ, ಕೊಹ್ಲಿಗೂ ಸಾಧ್ಯವಾಗಿಲ್ಲ; ಐತಿಹಾಸಿಕ ಸಾಧನೆಯತ್ತ ರಾಹುಲ್ ಚಿತ್ತ

KL Rahul 10000 runs: ಶುಭ್​ಮನ್ ಗಿಲ್ ನಾಯಕತ್ವದ ಭಾರತ-ಶ್ರೀಲಂಕಾ ಟೆಸ್ಟ್ ಸರಣಿಯಲ್ಲಿ ಕೆಎಲ್ ರಾಹುಲ್ 10,000 ಅಂತಾರಾಷ್ಟ್ರೀಯ ರನ್​ಗಳ ಮೈಲಿಗಲ್ಲು ತಲುಪುವ ಸನಿಹದಲ್ಲಿದ್ದಾರೆ. ವಿಶೇಷವೆಂದರೆ, ಅವರು ಒಂದು ಎಸೆತವನ್ನೂ ಬೌಲ್ ಮಾಡದೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರನಾಗಲಿದ್ದಾರೆ. ಈ ಅನನ್ಯ ದಾಖಲೆಯು ರಾಹುಲ್ ಅವರನ್ನು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ವಿಶೇಷ ಸ್ಥಾನಕ್ಕೆ ಏರಿಸಲಿದೆ.

ಪೃಥ್ವಿಶಂಕರ
|

Updated on: Jul 31, 2026 | 9:17 PM

Share
ಶುಭ್​ಮನ್ ಗಿಲ್ ನಾಯಕತ್ವದ ಟೀಂ ಇಂಡಿಯಾ ಆಗಸ್ಟ್ 15 ರಿಂದ ಶ್ರೀಲಂಕಾ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಪ್ರವಾಸಕ್ಕೆ ತಂಡವನ್ನು ಸಹ ಪ್ರಕಟಿಸಲಾಗಿದೆ. ಸರಣಿಯ ಮೊದಲ ಪಂದ್ಯ ಗ್ಯಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು, ನಂತರ ಕೊಲಂಬೊದ ಐತಿಹಾಸಿಕ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಉಭಯ ತಂಡಗಳ ನಡುವೆ ಎರಡನೇ ಟೆಸ್ಟ್ ನಡೆಯಲಿದೆ(PC-PTI).

1 / 8
ಈ ಟೆಸ್ಟ್ ಸರಣಿಯು ಭಾರತದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕೆಎಲ್ ರಾಹುಲ್‌ಗೆ ಬಹಳ ವಿಶೇಷವಾಗಿರುತ್ತದೆ. ಏಕೆಂದರೆ ಈ ಸರಣಿಯಲ್ಲಿ ರಾಹುಲ್ ವಿಶಿಷ್ಟ ದಾಖಲೆಯನ್ನು ಸೃಷ್ಟಿಸುವ ಅವಕಾಶ ಹೊಂದಿದ್ದಾರೆ. ಇದುವರೆಗೆ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಬೇರೆ ಯಾವುದೇ ಆಟಗಾರ ದಾಖಲಿಸಿದ ದಾಖಲೆಯನ್ನು ನಿರ್ಮಿಸಲು ರಾಹಲ್ ಹೊರಟಿದ್ದಾರೆ(PC-PTI).

2 / 8
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10,000 ರನ್‌ಗಳನ್ನು ಪೂರ್ಣಗೊಳಿಸಲು ಕೆಎಲ್ ರಾಹುಲ್ ಕೇವಲ 170 ರನ್‌ಗಳ ದೂರದಲ್ಲಿದ್ದಾರೆ. ಅವರು ಇದುವರೆಗೆ ಮೂರು ಸ್ವರೂಪಗಳಲ್ಲಿ ಒಟ್ಟು 9,830 ರನ್‌ಗಳನ್ನು ಗಳಿಸಿದ್ದಾರೆ. ಶ್ರೀಲಂಕಾ ಪ್ರವಾಸದಲ್ಲಿ ಅವರು 170 ರನ್‌ಗಳನ್ನು ಗಳಿಸಿದರೆ, ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10,000 ರನ್‌ಗಳ ಗಡಿಯನ್ನು ತಲುಪಿದ ಭಾರತೀಯ ಬ್ಯಾಟ್ಸ್‌ಮನ್‌ಗಳ ಗಣ್ಯರ ಪಟ್ಟಿಗೆ ಸೇರುತ್ತಾರೆ(PC-PTI).

3 / 8
ಈ ದಾಖಲೆಯ ಅತ್ಯಂತ ವಿಶಿಷ್ಟ ಅಂಶವೆಂದರೆ ಕೆಎಲ್ ರಾಹುಲ್ ಒಂದೇ ಒಂದು ಚೆಂಡನ್ನು ಎಸೆಯದೆ ಅಂದರೆ ಬೌಲಿಂಗ್ ಮಾಡದೆ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10,000 ರನ್‌ಗಳ ಗಡಿಯನ್ನು ತಲುಪಿದ ಮೊದಲ ಭಾರತೀಯ ಆಟಗಾರನಾಗಲಿದ್ದಾರೆ(PC-PTI).

4 / 8
ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಎಂಎಸ್ ಧೋನಿ ಮತ್ತು ರೋಹಿತ್ ಶರ್ಮಾ ಅವರಂತಹ ಸ್ಟಾರ್ ಆಟಗಾರರು ತಮ್ಮ ವೃತ್ತಿಜೀವನದಲ್ಲಿ ಕೆಲವು ಓವರ್‌ಗಳ ಬೌಲಿಂಗ್ ಮಾಡಿದ್ದರೆ, ಕೆಎಲ್ ರಾಹುಲ್ ತಮ್ಮ ಇಡೀ ವೃತ್ತಿಜೀವನದಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಎಂದಿಗೂ ಬೌಲಿಂಗ್ ಮಾಡಿಲ್ಲ. ಹೀಗಾಗಿ ಬೌಲಿಂಗ್ ಮಾಡದೆ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರನೆಂಬ ದಾಖಲೆ ರಾಹುಲ್ ಪಾಲಾಗಲಿದೆ(PC-PTI).

5 / 8
ಇನ್ನು ಒಂದೇ ಒಂದು ಓವರ್ ಅಥವಾ ಒಂದೇ ಒಂದು ಎಸೆತವನ್ನು ಬೌಲಿಂಗ್ ಮಾಡದೆ ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ರನ್​ಗಳಿಸಿದವರ ಪಟ್ಟಿಯಲ್ಲಿ ಪ್ರಸ್ತುತ ರಾಹುಲ್ ಅಗ್ರಸ್ಥಾನದಲ್ಲಿದ್ದಾರೆ. ಎರಡನೇ ಸ್ಥಾನದಲ್ಲಿರುವ ಅಜಿಂಕ್ಯ ರಹಾನೆ 8414 ರನ್​ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿರುವ ರಿಷಭ್ ಪಂತ್ 5,637 ರನ್‌ ಕಲೆಹಾಕಿದ್ದಾರೆ(PC-PTI).

6 / 8
ಕೆಎಲ್ ರಾಹುಲ್ ಭಾರತ ಪರ ಮೂರು ಸ್ವರೂಪಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು, 68 ಟೆಸ್ಟ್ ಪಂದ್ಯಗಳಲ್ಲಿ 119 ಇನ್ನಿಂಗ್ಸ್‌ಗಳಲ್ಲಿ 36.42 ಸರಾಸರಿಯಲ್ಲಿ 4153 ರನ್ ಗಳಿಸಿದ್ದಾರೆ, ಇದರಲ್ಲಿ 12 ಶತಕಗಳು ಮತ್ತು 20 ಅರ್ಧಶತಕಗಳು ಸೇರಿವೆ(PC-PTI).

7 / 8
ಹಾಗೆಯೇ ಏಕದಿನ ಮಾದರಿಯಲ್ಲಿ ಆಡಿರುವ 98 ಪಂದ್ಯಗಳಲ್ಲಿ 49.44 ರ ಸರಾಸರಿಯಲ್ಲಿ 3412 ರನ್ ಗಳಿಸಿದ್ದಾರೆ, ಇದರಲ್ಲಿ 8 ಶತಕಗಳು ಮತ್ತು 20 ಅರ್ಧಶತಕಗಳು ಸೇರಿವೆ. ರಾಹುಲ್ 72 ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 2 ಶತಕಗಳು ಮತ್ತು 22 ಅರ್ಧಶತಕಗಳು ಸೇರಿದಂತೆ 2265 ರನ್ ಗಳಿಸಿದ್ದಾರೆ(PC-PTI).

8 / 8
Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು

ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ

ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ

ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ

ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ

ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ

ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ

ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ

ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?

ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?