- Kannada News Photo gallery Cricket photos KL Rahul And Athiya Shetty Wedding Ceremony At 4 PM Grand Reception To Be Held In Mumbai Latest Update in kannada
ಸಂಜೆ 4 ಗಂಟೆಗೆ ಸಪ್ತಪದಿ ತುಳಿಯಲಿದ್ದಾರೆ ಅಥಿಯಾ- ರಾಹುಲ್; ಆರತಕ್ಷತೆ ಎಲ್ಲಿ ನಡೆಯಲಿದೆ ಗೊತ್ತಾ?
KL Rahul Athiya Shetty Wedding: ಸಿಕ್ಕಿರುವ ಮಾಹಿತಿಯ ಪ್ರಕಾರ, ಅಥಿಯಾ ಮತ್ತು ಕೆಎಲ್ ರಾಹುಲ್ ಮದುವೆಯ ನಂತರ ಮುಂಬೈನಲ್ಲಿ ಅದ್ಧೂರಿಯಾಗಿ ಆರತಕ್ಷತೆ ನಡೆಯಲಿದೆ. ವರದಿಗಳ ಪ್ರಕಾರ ಸುಮಾರು 3000 ಕ್ಕೂ ಹೆಚ್ಚು ಅತಿಥಿಗಳನ್ನು ಸ್ಟಾರ್-ಸ್ಟಡ್ ಪಾರ್ಟಿಗೆ ಆಹ್ವಾನಿಸಲಾಗಿದೆ ಎಂದು ತಿಳಿದು ಬಂದಿದೆ.
Updated on: Jan 23, 2023 | 10:47 AM

ಬಾಲಿವುಡ್ ನಟಿ ಆಥಿಯಾ ಶೆಟ್ಟಿ ಮತ್ತು ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ವಿವಾಹ ಇಂದು ಅದ್ಧೂರಿಯಾಗಿ ಜರುಗಲಿದೆ. ಹಿಂದಿನ ದಿನದಿಂದಲೇ, ಅಂದರೆ ಜನವರಿ 22ರಿಂದಲೇ ವಿವಾಹ ಪೂರ್ವ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಇದರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಅಥಿಯಾ ಮತ್ತು ಕೆಎಲ್ ರಾಹುಲ್ ಮದುವೆಗೆ ಸಕಲ ಸಿದ್ಧತೆಯೂ ಪೂರ್ಣಗೊಂಡಿದ್ದು, ಇತ್ತೀಚಿನ ಮಾಹಿತಿಯ ಪ್ರಕಾರ, ಈ ಜೋಡಿ ಇಂದು ಸಂಜೆ 4 ಗಂಟೆಗೆ ಸಪ್ತಪದಿ ತುಳಿಯಲಿದ್ದಾರೆ ಎಂದು ತಿಳಿದುಬಂದಿದೆ. ಮದುವೆಯ ನಂತರ, ಈ ದಂಪತಿಗಳು ಸಂಜೆ 6:30 ರ ಸುಮಾರಿಗೆ ಪಾಪರಾಜಿಗಳ ಮುಂದೆ ಬರಲಿದ್ದಾರೆ ಎಂದು ವರದಿಯಾಗಿದೆ.

ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ಮದುವೆಯ ಸಂಗೀತ ಕಾರ್ಯಕ್ರಮ ನಿನ್ನೆ ರಾತ್ರಿ ಅಂದರೆ ಭಾನುವಾರ ನಡೆಯಿತು. ಸಿಕ್ಕಿರುವ ಮಾಹಿತಿ ಪ್ರಕಾರ, ಈ ಜೋಡಿ ತಮ್ಮ ಮದುವೆಯಲ್ಲಿ ನೋ ಫೋನ್ ಪಾಲಿಸಿ ಕೂಡ ಇಟ್ಟುಕೊಂಡಿದ್ದಾರೆ. ಅದೇನೆಂದರೆ, ಮದುವೆಗೆ ಬರುವ ಅತಿಥಿಗಳು ಫೋನ್ ಇಲ್ಲದೆ ಮದುವೆಯಲ್ಲಿ ಹಾಜರಾಗಲಿದ್ದಾರೆ.

ಅಥಿಯಾ ಮತ್ತು ಕೆಎಲ್ ರಾಹುಲ್ ಅವರ ಮದುವೆಯಲ್ಲಿ ಪಾಲ್ಗೊಳ್ಳಲು ಅತಿಥಿಗಳು ಬರಲಾರಂಭಿಸಿದ್ದು, ಈ ಮದುವೆಗೆ 100 ಮಂದಿ ಮಾತ್ರ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ, ಹಿಂದಿನ ದಿನ ಸಂಗೀತ ಕಾರ್ಯಕ್ರಮದಲ್ಲಿ ಅರ್ಜುನ್ ಕಪೂರ್, ಪಂಜಾಬಿ ಗಾಯಕ ಗಿಪ್ಪಿ ಗ್ರೆವಾಲ್ ಮತ್ತು ಖ್ಯಾತ ಛಾಯಾಗ್ರಾಹಕ ರೋಹನ್ ಶ್ರೇಷ್ಠಾ ಭಾಗವಹಿಸಿದ್ದರು.

ಸಿಕ್ಕಿರುವ ಮಾಹಿತಿಯ ಪ್ರಕಾರ, ಅಥಿಯಾ ಮತ್ತು ಕೆಎಲ್ ರಾಹುಲ್ ಮದುವೆಯ ನಂತರ ಮುಂಬೈನಲ್ಲಿ ಅದ್ಧೂರಿಯಾಗಿ ಆರತಕ್ಷತೆ ನಡೆಯಲಿದೆ. ವರದಿಗಳ ಪ್ರಕಾರ ಸುಮಾರು 3000 ಕ್ಕೂ ಹೆಚ್ಚು ಅತಿಥಿಗಳನ್ನು ಸ್ಟಾರ್-ಸ್ಟಡ್ ಪಾರ್ಟಿಗೆ ಆಹ್ವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಪಾರ್ಟಿಯಲ್ಲಿ ಬಾಲಿವುಡ್ ತಾರೆಯರ ಜೊತೆಗೆ ರಾಜಕಾರಣಿಗಳು ಮತ್ತು ಉದ್ಯಮಿಗಳು ಕೂಡ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.




