
ಮಹೇಂದ್ರ ಸಿಂಗ್ ಧೋನಿ ಮತ್ತು ವಿರಾಟ್ ಕೊಹ್ಲಿಯಂತೆ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಕೂಡ ದುಬೈನಲ್ಲಿ ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ. ಅವರ ಜೊತೆ ಗೆಳತಿ ಅಥಿಯಾ ಶೆಟ್ಟಿ ಕೂಡ ಕಾಣಿಸಿಕೊಂಡಿದ್ದು, ಇಬ್ಬರೂ ಒಟ್ಟಿಗೆ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ.

ಅಥಿಯಾ ಜೊತೆಗಿರುವ ರೊಮ್ಯಾಂಟಿಕ್ ಫೋಟೋಗಳನ್ನು ಕೆಎಲ್ ರಾಹುಲ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇಬ್ಬರೂ ಕಪ್ಪು ಬಟ್ಟೆಯಲ್ಲಿ ಒಟ್ಟಿಗೆ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ.

ಈ ಇಬ್ಬರ ಜೊತೆಗೆ ಅವರ ಆಪ್ತ ಸ್ನೇಹಿತರು ಕೂಡ ಅವರೊಂದಿಗಿದ್ದು, ಅವರ ಸ್ನೇಹಿತರು ಕೂಡ ಈ ಪ್ರೇಮ ಪಕ್ಷಿಗಳ ರೋಮ್ಯಾಂಟಿಕ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಟೀಂ ಇಂಡಿಯಾದ ಸ್ಟಾರ್ ಓಪನರ್ ಕೆಎಲ್ ರಾಹುಲ್ ಮತ್ತು ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಬಹಳ ದಿನಗಳಿಂದ ಪರಸ್ಪರ ಡೇಟಿಂಗ್ ಮಾಡುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಅಲ್ಲದೆ ಇಷ್ಟರಲ್ಲೇ ಈ ಜೋಡಿಗಳು ಹಸಮಣೆ ಏರಲಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ.

ತಮ್ಮ ಮದುವೆಗಾಗಿಯೇ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಿಂದ ಕೆಎಲ್ ರಾಹುಲ್ ವಿಶ್ರಾಂತಿ ಕೋರಿದ್ದಾರೆ ಎಂಬುದು ಸುದ್ದಿ.
Published On - 12:10 pm, Mon, 2 January 23