ಮೊದಲ ಟೆಸ್ಟ್ನಲ್ಲಿ ಅದ್ಭುತ ಪ್ರದರ್ಶನ ತೋರಿ ಪಂದ್ಯಶ್ರೇಷ್ಠ ಪ್ರಶಸ್ತಿ ಬಾಚಿಕೊಂಡ ಕುಲ್ದೀಪ್ ಯಾದವ್ ಅವರನ್ನು ಹೊರಗಿಟ್ಟು ಜಯದೇವ್ ಉನಾದ್ಕಟ್ಗೆ ಸ್ಥಾನ ನೀಡಲಾಗಿತ್ತು. ಭಾರತದ ಈ ನಿರ್ಧಾರಕ್ಕೆ ಸಾಕಷ್ಟು ಟೀಕೆಗಳು ಕೇಳಿಬಂದವು, ಇದೀಗ ಪ್ಲೇಯಿಂಗ್ ಇಲೆವೆನ್ನಿಂದ ಕುಲ್ದೀಪ್ ಯಾದವ್ರನ್ನು ಯಾಕೆ ಕೈಬಿಟ್ಟೆವು ಎಂಬುದಕ್ಕೆ ನಾಯಕ ಕೆಎಲ್ ರಾಹುಲ್ ಸ್ಪಷ್ಟನೆ ನೀಡಿದ್ದಾರೆ.