AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನಾ ಸೈನಿಕನ ಸೆಂಚುರಿ… ಅಪರೂಪದ ದಾಖಲೆ ಬರೆದ ಕೆಎಲ್ ರಾಹುಲ್

ವಿದೇಶಿ ಪಿಚ್‌ಗಳ ಸವಾಲನ್ನು ಮೆಟ್ಟಿ ನಿಲ್ಲುವುದರಲ್ಲಿ ತಾನು ಎತ್ತಿದ ಕೈ ಎಂಬುದನ್ನು ಕನ್ನಡಿಗ ಕೆ.ಎಲ್. ರಾಹುಲ್ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಈ ಬಾರಿ ನ್ಯೂಝಿಲೆಂಡ್‌ನಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಎಂಬುದಷ್ಟೇ ವ್ಯತ್ಯಾಸ. ಈ ಶತಕದೊಂದಿಗೆ ಎಲ್ಲಾ ನಾಲ್ಕು SENA ದೇಶಗಳಲ್ಲಿ ಆರಂಭಿಕನಾಗಿ 100+ ರನ್ ಗಳಿಸಿದ ಏಕೈಕ ಭಾರತೀಯ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 21, 2026 | 7:44 AM

Share
ಭಾರತೀಯ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆಯೊಂದನ್ನು ಕೆಎಲ್ ರಾಹುಲ್ ನಿರ್ಮಿಸಿದ್ದಾರೆ. ಅದು ಸಹ  ಎಲ್ಲಾ SENA (ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ) ದೇಶಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಟೆಸ್ಟ್ ಶತಕ ಬಾರಿಸುವ ಮೂಲಕ ಎಂಬುದು ವಿಶೇಷ. (PC: gettyimages)

1 / 5
ವೆಲ್ಲಿಂಗ್ಟನ್‌ನ ಬೇಸಿನ್ ರಿಸರ್ವ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ, ಕಿವೀಸ್ ವೇಗಿಗಳ ಸವಾಲನ್ನು ಸಮರ್ಥವಾಗಿ ಎದುರಿಸಿದ ರಾಹುಲ್ 207 ಎಸೆತಗಳಲ್ಲಿ ತಮ್ಮ ವೃತ್ತಿಜೀವನದ 13ನೇ ಟೆಸ್ಟ್ ಶತಕವನ್ನು ಪೂರೈಸಿದರು. ಈ ಶತಕದೊಂದಿಗೆ ನಾಲ್ಕೂ SENA ದೇಶಗಳಲ್ಲಿ ಟೆಸ್ಟ್ ಸೆಂಚುರಿ ಸಿಡಿಸಿದ ಭಾರತದ ಮೊದಲ ಆರಂಭಿಕ ದಾಂಡಿಗ ಎನಿಸಿಕೊಂಡಿದ್ದಾರೆ. (PC: gettyimages)

2 / 5
ಇದಕ್ಕೂ ಮುನ್ನ ಕೆ.ಎಲ್. ರಾಹುಲ್ ಸೌತ್ ಆಫ್ರಿಕಾ, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳ ವಿರುದ್ಧ ಅವರದ್ದೇ ತವರಿನಲ್ಲಿ ಒಟ್ಟು 7 ಟೆಸ್ಟ್ ಶತಕಗಳನ್ನು (ಇಂಗ್ಲೆಂಡ್ - 4, ಸೌತ್ ಆಫ್ರಿಕಾ - 2, ಆಸ್ಟ್ರೇಲಿಯಾ - 1) ಬಾರಿಸಿದ್ದರು. ಇದೀಗ ನ್ಯೂಝಿಲೆಂಡ್ ನೆಲದಲ್ಲೂ ಮೊದಲ ಶತಕ ಸಿಡಿಸುವ ಮೂಲಕ ಹೊಸ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ. (PC: gettyimages)

3 / 5
ಹಾಗೆಯೇ ಎಲ್ಲಾ SENA ದೇಶಗಳಲ್ಲಿ ಶತಕ ಗಳಿಸಿದ ಐದನೇ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೂ ರಾಹುಲ್ ಪಾತ್ರರಾಗಿದ್ದಾರೆ. ಈ ಹಿಂದೆ ಸಚಿನ್ ತೆಂಡೂಲ್ಕರ್, ಮೊಹಮ್ಮದ್ ಅಝರುದ್ದೀನ್, ರಾಹುಲ್ ದ್ರಾವಿಡ್ ಮತ್ತು ವಿರಾಟ್ ಕೊಹ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಈ ಸಾಧನೆ ಮಾಡಿದ್ದರು. (PC: gettyimages)

4 / 5
ಇದೀಗ ಆರಂಭಿಕನಾಗಿ ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸೆಂಚುರಿ ಸಿಡಿಸುವ ಮೂಲಕ, ಕೆ.ಎಲ್. ರಾಹುಲ್ ಭಾರತದ ಯಾವೊಬ್ಬ ಓಪನರ್‌ಗೂ ಸಾಧ್ಯವಾಗದ ವಿಶೇಷ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. (PC: gettyimages)

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ತುಳಸಿ ವಿವಾಹದ ಶುಭ ದಿನದಂದು ಯಾವ ರಾಶಿಯವರಿಗೆ ಒಲಿಯಲಿದೆ ಅದೃಷ್ಟ?

ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು; ಮನೆಯ ಮಹರಾಣಿ ಸೇರಿ ಮೂವರು ಕಳಪೆ

ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ

ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ

ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ

ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ

ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್

ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?

ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ

ಚಿನ್ನದ ಬೆಲೆ ದಿಢೀರ್​​ ಕುಸಿತ ಕಂಡಿದ್ದೇಕೆ? ಇಲ್ಲಿದೆ ತಜ್ಞರ ವಿವರಣೆ