
ಭಾರತೀಯ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆಯೊಂದನ್ನು ಕೆಎಲ್ ರಾಹುಲ್ ನಿರ್ಮಿಸಿದ್ದಾರೆ. ಅದು ಸಹ ಎಲ್ಲಾ SENA (ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ) ದೇಶಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಟೆಸ್ಟ್ ಶತಕ ಬಾರಿಸುವ ಮೂಲಕ ಎಂಬುದು ವಿಶೇಷ. (PC: gettyimages)
ವೆಲ್ಲಿಂಗ್ಟನ್‌ನ ಬೇಸಿನ್ ರಿಸರ್ವ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ, ಕಿವೀಸ್ ವೇಗಿಗಳ ಸವಾಲನ್ನು ಸಮರ್ಥವಾಗಿ ಎದುರಿಸಿದ ರಾಹುಲ್ 207 ಎಸೆತಗಳಲ್ಲಿ ತಮ್ಮ ವೃತ್ತಿಜೀವನದ 13ನೇ ಟೆಸ್ಟ್ ಶತಕವನ್ನು ಪೂರೈಸಿದರು. ಈ ಶತಕದೊಂದಿಗೆ ನಾಲ್ಕೂ SENA ದೇಶಗಳಲ್ಲಿ ಟೆಸ್ಟ್ ಸೆಂಚುರಿ ಸಿಡಿಸಿದ ಭಾರತದ ಮೊದಲ ಆರಂಭಿಕ ದಾಂಡಿಗ ಎನಿಸಿಕೊಂಡಿದ್ದಾರೆ. (PC: gettyimages)
ಇದಕ್ಕೂ ಮುನ್ನ ಕೆ.ಎಲ್. ರಾಹುಲ್ ಸೌತ್ ಆಫ್ರಿಕಾ, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳ ವಿರುದ್ಧ ಅವರದ್ದೇ ತವರಿನಲ್ಲಿ ಒಟ್ಟು 7 ಟೆಸ್ಟ್ ಶತಕಗಳನ್ನು (ಇಂಗ್ಲೆಂಡ್ - 4, ಸೌತ್ ಆಫ್ರಿಕಾ - 2, ಆಸ್ಟ್ರೇಲಿಯಾ - 1) ಬಾರಿಸಿದ್ದರು. ಇದೀಗ ನ್ಯೂಝಿಲೆಂಡ್ ನೆಲದಲ್ಲೂ ಮೊದಲ ಶತಕ ಸಿಡಿಸುವ ಮೂಲಕ ಹೊಸ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ. (PC: gettyimages)
ಹಾಗೆಯೇ ಎಲ್ಲಾ SENA ದೇಶಗಳಲ್ಲಿ ಶತಕ ಗಳಿಸಿದ ಐದನೇ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೂ ರಾಹುಲ್ ಪಾತ್ರರಾಗಿದ್ದಾರೆ. ಈ ಹಿಂದೆ ಸಚಿನ್ ತೆಂಡೂಲ್ಕರ್, ಮೊಹಮ್ಮದ್ ಅಝರುದ್ದೀನ್, ರಾಹುಲ್ ದ್ರಾವಿಡ್ ಮತ್ತು ವಿರಾಟ್ ಕೊಹ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಈ ಸಾಧನೆ ಮಾಡಿದ್ದರು. (PC: gettyimages)
ಇದೀಗ ಆರಂಭಿಕನಾಗಿ ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸೆಂಚುರಿ ಸಿಡಿಸುವ ಮೂಲಕ, ಕೆ.ಎಲ್. ರಾಹುಲ್ ಭಾರತದ ಯಾವೊಬ್ಬ ಓಪನರ್‌ಗೂ ಸಾಧ್ಯವಾಗದ ವಿಶೇಷ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. (PC: gettyimages)