AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SENA ದೇಶಗಳಲ್ಲಿ ಕೆ.ಎಲ್. ರಾಹುಲ್ ‘ಅದ್ವಿತೀಯ’ ದಾಖಲೆ!

ವಿದೇಶಿ ಪಿಚ್‌ಗಳ ಸವಾಲನ್ನು ಮೆಟ್ಟಿ ನಿಲ್ಲುವುದರಲ್ಲಿ ತಾನು ಎತ್ತಿದ ಕೈ ಎಂಬುದನ್ನು ಕನ್ನಡಿಗ ಕೆ.ಎಲ್. ರಾಹುಲ್ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ನ್ಯೂಝಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿ ಅರ್ಧಶತಕ ಸಿಡಿಸುವ ಮೂಲಕ, ಎಲ್ಲಾ ನಾಲ್ಕು SENA ದೇಶಗಳಲ್ಲಿ ಆರಂಭಿಕನಾಗಿ 50+ ರನ್ ಗಳಿಸಿದ ಏಕೈಕ ಭಾರತೀಯ ಬ್ಯಾಟರ್ ಎಂಬ ಐತಿಹಾಸಿಕ ಮೈಲಿಗಲ್ಲನ್ನು ಅವರು ತಲುಪಿದ್ದಾರೆ. 

ಝಾಹಿರ್ ಯೂಸುಫ್
|

Updated on: Nov 20, 2026 | 12:14 PM

Share
ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಎಷ್ಟೋ ದಿಗ್ಗಜ ಆರಂಭಿಕ ಬ್ಯಾಟರ್‌ಗಳು ಬಂದು ಹೋಗಿದ್ದಾರೆ. ಸುನಿಲ್ ಗವಾಸ್ಕರ್, ವೀರೇಂದ್ರ ಸೆಹ್ವಾಗ್, ಗೌತಮ್ ಗಂಭೀರ್, ಮುರಳಿ ವಿಜಯ್ ಮತ್ತು ರೋಹಿತ್ ಶರ್ಮಾ ಅವರಂತಹ ಮಹಾನ್ ಆಟಗಾರರು ಭಾರತಕ್ಕೆ ಹಲವು ಸ್ಮರಣೀಯ ಗೆಲುವುಗಳನ್ನು ತಂದುಕೊಟ್ಟಿದ್ದಾರೆ. ಆದರೆ, ಈ ದಿಗ್ಗಜರಿಗೂ ಸಾಧ್ಯವಾಗದ ಅಪರೂಪದ ಮತ್ತು ಐತಿಹಾಸಿಕ ಸಾಧನೆಯೊಂದನ್ನು ಕನ್ನಡಿಗ ಕೆ.ಎಲ್. ರಾಹುಲ್ ಮಾಡಿ ತೋರಿಸಿದ್ದಾರೆ. (PC: Gettyimages)

1 / 5
ಟೆಸ್ಟ್ ಕ್ರಿಕೆಟ್‌ನಲ್ಲಿ ಆರಂಭಿಕ ಆಟಗಾರನಾಗಿ ಎಲ್ಲಾ ನಾಲ್ಕು SENA ದೇಶಗಳಲ್ಲಿ (ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ) 50+ ರನ್ ಗಳಿಸಿದ ಏಕೈಕ ಹಾಗೂ ಮೊದಲ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಕೆ.ಎಲ್. ರಾಹುಲ್ ಪಾತ್ರರಾಗಿದ್ದಾರೆ. (PC: Gettyimages)

2 / 5
2026ರ ನವೆಂಬರ್ 20ರಂದು ವೆಲ್ಲಿಂಗ್ಟನ್‌ನ ಬೇಸಿನ್ ರಿಸರ್ವ್ ಮೈದಾನದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಂದು ರಾಹುಲ್ ಈ ಮೈಲಿಗಲ್ಲನ್ನು ತಲುಪಿದರು. ನ್ಯೂಝಿಲೆಂಡ್ ನೆಲದಲ್ಲಿ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯವಾಡುತ್ತಿರುವ ರಾಹುಲ್, ತಾಳ್ಮೆಯ ಹಾಗೂ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿ ಅಜೇಯ 52 ರನ್ (116 ಎಸೆತಗಳು) ಗಳಿಸುವ ಮೂಲಕ ಈ ವಿಶೇಷ ದಾಖಲೆಯನ್ನು ನಿರ್ಮಿಸಿದ್ದಾರೆ. (PC: Gettyimages)

3 / 5
ಈ ಮೂಲಕ ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾದಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಟೆಸ್ಟ್ ಕ್ರಿಕೆಟ್‌ನಲ್ಲಿ 50+ ಸ್ಕೋರ್ ಗಳಿಸಿದ ಟೀಮ್ ಇಂಡಿಯಾದ ಏಕೈಕ ಬ್ಯಾಟರ್ ಎಂಬ ದಾಖಲೆಯನ್ನು ಕೆ.ಎಲ್. ರಾಹುಲ್ ತಮ್ಮದಾಗಿಸಿಕೊಂಡಿದ್ದಾರೆ. (PC: Gettyimages)

4 / 5
2014ರಲ್ಲಿ ಮೆಲ್ಬೋರ್ನ್‌ನಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದಾಗಿನಿಂದ ಕನ್ನಡಿಗ ಕೆ.ಎಲ್ ರಾಹುಲ್ ವಿದೇಶಿ ಪಿಚ್‌ಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು, ಈ ಮೂಲಕ ಎಲ್ಲಾ ನಾಲ್ಕು SENA ದೇಶಗಳಲ್ಲಿ ಒಟ್ಟು 13 ಬಾರಿ 50+ ರನ್ ಗಳಿಸಿದ್ದಾರೆ. ಇದರಲ್ಲಿ ಇಂಗ್ಲೆಂಡ್‌ನಲ್ಲಿ 4 ಶತಕ ಹಾಗೂ 3 ಅರ್ಧಶತಕಗಳೊಂದಿಗೆ 7 ಬಾರಿ, ಆಸ್ಟ್ರೇಲಿಯಾದಲ್ಲಿ 1 ಶತಕ ಹಾಗೂ 2 ಅರ್ಧಶತಕಗಳೊಂದಿಗೆ 3 ಬಾರಿ, ಸೌತ್ ಆಫ್ರಿಕಾದಲ್ಲಿ 1 ಶತಕ ಹಾಗೂ 1 ಅರ್ಧಶತಕಗಳೊಂದಿಗೆ 2 ಬಾರಿ, ಮತ್ತು ನ್ಯೂಝಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿ ಗಳಿಸಿದ ಅಜೇಯ 52 ರನ್‌ಗಳ ಅರ್ಧಶತಕ ಸೇರಿವೆ. ಈ ಮೂಲಕ ಟೀಮ್ ಇಂಡಿಯಾದ ದಿಗ್ಗಜ ಆರಂಭಿಕರಿಗೂ ಸಾಧ್ಯವಾಗದ ಅಪರೂಪದ ಮತ್ತು ಐತಿಹಾಸಿಕ ಸಾಧನೆಯೊಂದನ್ನು ಕನ್ನಡಿಗ ಮಾಡಿ ತೋರಿಸಿದ್ದಾರೆ. (PC: Gettyimages)

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us