AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ರಾಹುಲ್ ದಾಖಲೆ ಮುರಿದ ರಾಹುಲ್

India vs England 1st Test: ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 471 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಇಂಗ್ಲೆಂಡ್ 465 ರನ್​ಗಳಿಸಿ ಆಲೌಟ್ ಆಗಿದೆ. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ 364 ರನ್​ಗಳಿಸಿ ಟೀಮ್ ಇಂಡಿಯಾ ಇಂಗ್ಲೆಂಡ್​ಗೆ 371 ರನ್​ಗಳ ಗುರಿ ನೀಡಿದೆ.

ಝಾಹಿರ್ ಯೂಸುಫ್
|

Updated on:Jun 24, 2025 | 8:19 AM

Share
IND vs ENG 1st Test: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್ ನಲ್ಲಿ ಕೆಎಲ್ ರಾಹುಲ್ (KL Rahul) ಭರ್ಜರಿ ಶತಕ ಸಿಡಿಸಿದ್ದಾರೆ. ಹೆಡಿಂಗ್ಲೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕನ್ನಡಿಗ ತಾಳ್ಮೆಯುತ ಬ್ಯಾಟಿಂಗ್ ಪ್ರದರ್ಶಿದರು.

1 / 6
ಈ ತಾಳ್ಮೆಯುತ ಬ್ಯಾಟಿಂಗ್​ನೊಂದಿಗೆ 202 ಎಸೆತಗಳಲ್ಲಿ ಶತಕ ಪೂರೈಸಿದ ರಾಹುಲ್ ವಿಶೇಷ ದಾಖಲೆ ಬರೆದರು. ಅದು ಕೂಡ ಲೆಜೆಂಡ್‌ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

2 / 6
ಅಂದರೆ ಇಂಗ್ಲೆಂಡ್ ನಲ್ಲಿ ನಡೆದ ಟೆಸ್ಟ್‌ ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದು 2 ಶತಕ ಬಾರಿಸಿದ ಏಷ್ಯನ್ ಬ್ಯಾಟರ್ ಎಂಬ ದಾಖಲೆಯೊಂದು ರಾಹುಲ್ ದ್ರಾವಿಡ್ ಹೆಸರಿನಲ್ಲಿತ್ತು. ಈ ದಾಖಲೆಯನ್ನು ಇದೀಗ ಕೆಎಲ್​ಆರ್​ ಮುರಿದಿದ್ದಾರೆ.

3 / 6
ಕೆಎಲ್ ರಾಹುಲ್ ಆಂಗ್ಲರ ನಾಡಿನಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಈವರೆಗೆ 3 ಸೆಂಚುರಿ ಸಿಡಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ನಲ್ಲಿ ಅತ್ಯಧಿಕ ಶತಕ ಸಿಡಿಸಿದ ಏಷ್ಯನ್ ಓಪನರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

4 / 6
ಹಾಗೆಯೇ ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾದಲ್ಲಿ ಅತ್ಯಧಿಕ 50+ ಸ್ಕೋರ್ ಗಳಿಸಿದ ಭಾರತೀಯ ಆರಂಭಿಕರ ಪಟ್ಟಿಯಲ್ಲಿ ಕೆಎಲ್ ರಾಹುಲ್ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ಸುನಿಲ್ ಗವಾಸ್ಕರ್ (19) ಮೊದಲ ಸ್ಥಾನದಲ್ಲಿದ್ದರೆ, ಕೆಎಲ್ ರಾಹುಲ್ (9) ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ 247 ಎಸೆತಗಳನ್ನು ಎದುರಿಸಿದ ಕೆಎಲ್ ರಾಹುಲ್ 18 ಫೋರ್​ಗಳೊಂದಿಗೆ 137 ರನ್ ಬಾರಿಸಿದರು. ಈ ಆಕರ್ಷಕದ ಶತಕದ ನೆರವಿನೊಂದಿಗೆ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ 364 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಆತಿಥೇಯ ಇಂಗ್ಲೆಂಡ್ ತಂಡಕ್ಕೆ 371 ರನ್​ಗಳ ಗುರಿ ನೀಡಿದೆ.

6 / 6

Published On - 7:54 am, Tue, 24 June 25

ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR

ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್

ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ

ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ

ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ

Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ

‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ

ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ

ಸಕ್ರೇಬೈಲು ಆನೆ ಬಿಡಾರದಲ್ಲಿ ಶೌರ್ಯ ಆನೆ ಸಾವು
ಸಕ್ರೇಬೈಲು ಆನೆ ಬಿಡಾರದಲ್ಲಿ ಶೌರ್ಯ ಆನೆ ಸಾವು
ಹುಚ್ಚರನ್ನು ಜೈಲಿಗೆ ಹಾಕ್ತಾರಾ? ಪ್ರಕಾಶ್ ರಾಜ್​ಗೆ ಪ್ರತಾಪ್ ಸಿಂಹ ತಿರುಗೇಟು